G-20 Summit: ಜಿ20 ಶೃಂಗಸಭೆ ಹಿನ್ನೆಲೆ ಕೆಲ ರಾಷ್ಟ್ರ ನಾಯಕರು ಈಗಾಗಲೇ ಭಾರತಕ್ಕೆ ಬಂದಿಳಿದಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಜಾಗತಿಕ ನಾಯಕರೊಂದಿಗೆ 15ಕ್ಕೂ ಹೆಚ್ಚಿನ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Opposition Meeting In Bengaluru: ವಿಧಾನ ಸೌಧ ದಲ್ಲಿ ನಡೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆಗೆ ಭಾಗಿಯಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರನ್ನು ಎದುರಿಸಲು ಎಲ್ಲ ಪಕ್ಷಗಳು ಒಟ್ಟಾಗುತ್ತಿವೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಮೋದಿಯವರನ್ನು ಸಮರ್ಥವಾಗಿ ಎದುರಿಸಲಾಗಿದೆ.
ಪ್ರಸ್ತುತ ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ) ಅಡಿಯಲ್ಲಿ ಬಂಧನದಲ್ಲಿರುವ ನ್ಯಾಷನಲ್ ಕಾನ್ಫರೆನ್ಸ್ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು 82 ನೇ ಹುಟ್ಟುಹಬ್ಬದಂದು ಶುಭಾಶಯ ಕೋರಿದ್ದಾರೆ ಎಂದು ಎನ್ಸಿ ಮೂಲಗಳು ಶನಿವಾರ ತಿಳಿಸಿವೆ.
ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಅವರಿಗೆ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಿದ್ದು, ಮಹಾತ್ಮ ಗಾಂಧಿಯವರ ಸಂದೇಶವನ್ನು ಕಾರ್ಯರೂಪಕ್ಕೆ ತರುವಲ್ಲಿ ಪ್ರತಿಯೊಬ್ಬ ನಾಗರಿಕರ 'ದಿಲ್ ಸೆ' ಭಾಗವಹಿಸುವಿಕೆಯ ಮಹತ್ವವನ್ನು ಒತ್ತಿ ಹೇಳಿದ್ದಾರೆ.
ತಮ್ಮ ಸರ್ಕಾರವು ಛತ್ರಪತಿ ಶಿವಾಜಿ ಮಹಾರಾಜ್ ಅವರ ರಾಷ್ಟ್ರೀಯತೆ ಮತ್ತು ರಾಷ್ಟ್ರೀಯ ಭದ್ರತೆಯ ತತ್ವಗಳಿಗೆ ಬದ್ಧವಾಗಿದೆ ಮತ್ತು ಭಾರತದ ಮೇಲೆ ದುಷ್ಟ ವಿನ್ಯಾಸಗಳನ್ನು ಹೊಂದಿರುವವರಿಗೆ ಸೂಕ್ತವಾದ ಉತ್ತರವನ್ನು ನೀಡುವ ಶಕ್ತಿಯನ್ನು ಹೊಂದಿರುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಪಾದಿಸಿದರು.
ಈಗ ಅಮೆರಿಕಾದ್ಯಂತ ತಮಿಳು ಭಾಷೆ ಪ್ರತಿಧ್ವನಿಸುತ್ತಿದೆ ಎಂದು ಪ್ರಧಾನಿ ಇಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಮಾತನಾಡುತ್ತಾ ಹೇಳಿದರು. ಕಳೆದ ವಾರ ಅವರು ಮಾಡಿದ ಭಾಷಣದಲ್ಲಿ ರಾಷ್ಟ್ರದ ಭಾಷಾ ವೈವಿಧ್ಯತೆಯ ಬಗ್ಗೆ ಉಲ್ಲೇಖಗಳನ್ನು ಸೇರಿಸಿದ್ದಾರೆ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ಮೋದಿ ಪ್ರಾಚೀನ ತಮಿಳು ಕವಿಯೊಬ್ಬರನ್ನು ಉಲ್ಲೇಖಿಸಿದ್ದರು.
ಹೂಸ್ಟನ್ ನಲ್ಲಿ ನಡೆದ ಹೌಡಿ ಮೋದಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಭಾರತದಲ್ಲಿ ಎಲ್ಲವು ಚೆನ್ನಾಗಿದೆ ಎಂದು ಹೇಳಿದ್ದರು. ವಿಶೇಷವೆಂದರೆ ಭಾರತ ಮೇ ಸಬ್ ಅಚ್ಚಾ ಹೈ ಎನ್ನುವ ಹೇಳಿಕೆಯನ್ನು ಅವರು ಎಂಟು ಭಾಷೆಗಳಲ್ಲಿ ಹೇಳಿದ್ದರು.
ವಿಶ್ವಸಂಸ್ಥೆ ಸಾಮಾನ್ಯ ಸಭೆ ಅಧಿವೇಶನಕ್ಕೆ ಮುಂಚಿತವಾಗಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅಮೇರಿಕಾ ಸ್ವಾಗತಿಸಿದ ರೀತಿಯಲ್ಲಿನ ವ್ಯತ್ಯಾಸವನ್ನು ಪಾಕಿಸ್ತಾನದ ಟ್ವಿಟ್ಟರ್ ಬಳಕೆದಾರರು ವಿಡಿಯೋ ಮೂಲಕ ಗುರುತಿಸಿದ್ದಾರೆ.
ಈ ಹಿಂದೆ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯನ್ನು ರದ್ದುಪಡಿಸಲು ತೆಗೆದುಕೊಂಡ ದಿಟ್ಟ ನಿರ್ಧಾರಕ್ಕಾಗಿ ಕಾಶ್ಮೀರಿ ಪಂಡಿತರ ನಿಯೋಗ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದರು.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು, ದೇಶದಲ್ಲಿ ಸೂಪರ್ ತುರ್ತು ಪರಿಸ್ಥಿತಿ ಇದೆ ಮತ್ತು ಸಂವಿಧಾನದ ಹಕ್ಕುಗಳು ಮತ್ತು ಸ್ವಾತಂತ್ರ್ಯ ರಕ್ಷಣೆಗಾಗಿ ಎಲ್ಲರೂ ಸಿದ್ದರಾಗಿರಬೇಕು ಎಂದು ಕರೆ ನೀಡಿದ್ದಾರೆ.
ಏಕ ಬಳಕೆ ಪ್ಲಾಸ್ಟಿಕ್ಗೆ ನಿಷೇಧ ಹೇರುವ ಭಾರತದ ನಿರ್ಧಾರವನ್ನು ಪ್ರಧಾನಿ ಮೋದಿ ಮತ್ತೆ ಪುನರುಚ್ಚರಿಸಿದ್ದು, ಈ ಸಂದರ್ಭದಲ್ಲಿ ಇದಕ್ಕೆ ವಿಶ್ವವೂ ಕೂಡ ವಿದಾಯ ಹೇಳುವ ಸಮಯ ಬಂದಿದೆ ಎಂದು ಹೇಳಿದರು.
ದೇಶದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ತೊಡೆದುಹಾಕುವ ಆಂದೋಲನಕ್ಕೆ ಬೆಂಬಲ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬಾಲಿವುಡ್ ನಟ ಅಮೀರ್ ಖಾನ್ ಅವರಿಗೆ ಬುಧವಾರದಂದು ಧನ್ಯವಾದ ಅರ್ಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.