ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಬಡ್ತಿ ವಿಚಾರವು ಅನೇಕ ವರ್ಷಗಳಿಂದ ಬಿಡಿಸಲಾಗದ ಸಮಸ್ಯೆಯಾಗಿತ್ತು. ಹಿಂದೆ ಇದ್ದ ಕಾಯ್ದೆಗಳಲ್ಲಿನ ಕೆಲವು ನ್ಯೂನ್ಯತೆಗಳಿಂದಾಗಿ ನ್ಯಾಯಾಲಯಗಳೂ ಸಹ ಈ ಸಮಸ್ಯೆಯನ್ನು ಪರಿಹರಿಸಲು ದಶಕಗಟ್ಟಲೆ ಕಾಲಾವಧಿ ತೆಗೆದುಕೊಂಡಿದ್ದವು- ಸಿದ್ದರಾಮಯ್ಯ
ಸರ್ಕಾರ ನೂರು ದಿನ ಪೂರೈಸಿದೆ. ಎರಡು ತಿಂಗಳ ಕಾಲ ನೆರೆ ಪರಿಹಾರದ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ಸಮಯದಲ್ಲಿ ರೈತರಿಗೆ ನಾಲ್ಕು ಸಾವಿರ ಹಣ ನೀಡುವುದಾಗಿ ಘೋಷಿಸಲಾಗಿತ್ತು. ಅದರಂತೆ ಈಗಾಗಲೇ ಎರೆಡು ಸಾವಿರ ಹಣ ರೈತರ ಖಾತೆಗೆ ಜಮೆ ಮಾಡಲಾಗಿದೆ- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮೊದಲು ಆಡಿಯೋದಲ್ಲಿನ ಹೇಳಿಕೆ ತಮ್ಮದೇ ಎಂದು ಒಪ್ಪಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಅಮಿತ್ ಶಾ ತರಾಟೆಗೆ ತಗೊಂಡ ಮೇಲೆ ವರಸೆ ಬದಲಿಸಿದ್ದಾರೆ ಎಂದು ಬಿಎಸ್ವೈ ಕಾಲೆಳೆದ ಮಾಜಿ ಸಿಎಂ ಸಿದ್ದರಾಮಯ್ಯ
ನಿನ್ನೆ ಡಾ. ಸುಧಾಕರ್ ಪ್ರತಿನಿಧಿಸುವ ಚಿಕ್ಕಬಳ್ಳಾಪುರ ಮತ್ತು ಎಂಟಿಬಿ ನಾಗರಾಜ್ ಸ್ಪರ್ಧಿಸುವ ಹೊಸಕೋಟೆ ಭೇಟಿ ನೀಡಿದ್ದ ಯಡಿಯೂರಪ್ಪ ಇಂದು ರಾಣೆಬೆನ್ನೂರು ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ.
ಸೋಮವಾರ ಕಾಂಗ್ರೆಸ್ ದಿಢೀರನೆ ಸುಪ್ರೀಂ ಕೋರ್ಟ್ ಮೆಟ್ಟಿಲು ಹೇರಿದ್ದರಿಂದ ಇನ್ನೇನೂ ತೀರ್ಪು ಬಂದೇ ಬಿಟ್ಟಿತು ಎಂದುಕೊಂಡಿದ್ದ ಅನರ್ಹರಿಗೆ ಮತ್ತು ತಮ್ಮ ಪಕ್ಷದ ಪಾತ್ರವಿಲ್ಲ ಎಂದು ಬೀಗುತ್ತಿದ್ದ ಬಿಜೆಪಿ ನಾಯಕರಿಗೆ ಹೊಸ ಆತಂಕ ಶುರುವಾಗಿದೆ.
ಕರ್ನಾಟಕದಲ್ಲಿ ಯಡಿಯೂರಪ್ಪ ಇಲ್ಲದಿದ್ದರೆ ಬಿಜೆಪಿ ಸರ್ವನಾಶ ಆಗಲಿದೆ. ನಳೀನ್ ಕುಮಾರ್ ಕಟೀಲ್, ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಹೊರಟಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಪರೇಷನ್ ಕಮಲ ಕುಖ್ಯಾತಿಯ ಬಿ.ಎಸ್. ಯಡಿಯೂರಪ್ಪ ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಕೊಟ್ಟದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ? ಇದು 'ನಾಚಿಕೆಗೇಡಿನ ರಾಜಕೀಯ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
'ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತದೆ' ಎಂಬ ಮಾತೊಂದಿತ್ತು. ಯಡಿಯೂರಪ್ಪ ಹೆಸರಿನ ಹಿಂದೆ 'ಹೋರಾಟಗಾರ' ಎಂಬ ವಿಶೇಷಣವನ್ನು ಸೇರಿಸಲಾಗುತ್ತಿತ್ತು. ಬಲ್ಲವರು, ಬಗಿಲಲ್ಲಿರುವವರು 'ಛಲದಂಕ ಮಲ್ಲ' ಎಂಬ ಬಿರುದನ್ನು ನೀಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.