ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಬಿಜೆಪಿ ಪಕ್ಷವು ಟಿಪ್ಪುವನ್ನು ವಿರೋಧಿಸಿರುವುದರಿಂದ ಟಿಪ್ಪು ಸಂಬಂಧಿತ ಎಲ್ಲಾ ವಿಷಯಗಳನ್ನು ಶೇ.101ರಷ್ಟು ತೆಗೆದುಹಾಕಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಪೋಲೀಸ್ ಇಲಾಖೆಗೆ ಪೇದೆ ಹುದ್ದೆಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಎಲ್ಲಾ ಭತ್ಯೆ ಸೇರಿ 30,427 ರೂ. ಬದಲಿಗೆ 34,267 ರೂ. ಸಿಗಲಿದೆ. ಅಲ್ಲಿಗೆ 4 ಸಾವಿರ ರೂ.ಗಳ ವೇತನ ಹೆಚ್ಚಳ ಮಾಡಲಾಗಿದೆ.
ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸ್ಪೀಕರ್ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡುವುದಾಗಿ ಹೇಳಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೆಲವೇ ಕ್ಷಣಗಳಲ್ಲಿ ಟ್ವೀಟ್ ಡಿಲೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಪ್ರವಾಹದಿಂದ ಉಂಟಾದ ಅಂದಾಜು ನಷ್ಟ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ. ರಾಜ್ಯದ ಪ್ರಸ್ತಾವ ಮತ್ತು ಕೇಂದ್ರ ಪರಿಶೀಲನಾ ತಂಡ ಸಲ್ಲಿಸಿರುವ ವರದಿ ತಾಳೆಯಾಗುತ್ತಿಲ್ಲ ಎಂದು ಹೇಳಿ ಪರಿಶೀಲಿಸಲು ತಿಳಿಸಿದೆ ಎಂದು ಸಿಎಂ ಹೇಳಿದ್ದಾರೆ.
ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ನರೇಂದ್ರ ಮೋದಿ ನೇತೃತ್ವದ ಸರಕಾರಕ್ಕಿಲ್ಲ. ನ್ಯಾಯಬದ್ಧ ಪರಿಹಾರ ಕೇಳಿ ವರದಿ ಸಲ್ಲಿಸುವ ಯೋಗ್ಯತೆ ನಿಮಗೂ ಇಲ್ಲ. ಆರ್ಥಿಕವಾಗಿ ಮಾತ್ರವಲ್ಲ, ಬೌದ್ದಿಕವಾಗಿಯೂ ನಿಮ್ಮ ಸರ್ಕಾರ ದಿವಾಳಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಕ್ಕೆ ನೆರೆಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಂದಿಸಲಿದ್ದು, ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಪರಿಹಾರ ಬಿಡುಗಡೆಯಾಗಲಿದೆ ಎಂದು ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಮುಂಬರುವ ಉಪಚುನಾವಣೆಗಳಿಗೆ ಅನರ್ಹಗೊಂಡ ಎಲ್ಲ ಶಾಸಕರನ್ನು ಬಿಜೆಪಿ ಕಣಕ್ಕಿಳಿಸಲಿದೆ, ಇದಕ್ಕೆ ಅಮಿತ್ ಶಾ ಕೂಡ ಅನುಮೋದನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆ ಮೂಲಕ ಅನರ್ಹಗೊಂಡ ಎಲ್ಲ ಶಾಸಕರ ಸ್ಪರ್ಧೆ ವಿಚಾರವಾಗಿ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಯಡಿಯೂರಪ್ಪನವರ ರೆಕ್ಕೆ ಪುಕ್ಕವನ್ನು ಬಿಜೆಪಿ ಹೈಕಮಾಂಡ್ ಕತ್ತರಿಸಿ ಬಿಟ್ಟಿದೆ. ಪ್ರತಿ ದಿನವೂ ಅವರಿಗೆ ಸ್ವಪಕ್ಷದವರೇ ಕಿರುಕುಳ ನೀಡುತ್ತಿದ್ದಾರೆ ಎಂದು ಅವರು ಮಾಜಿ ಸಿಎಂ ಸಿದ್ಧರಾಮಯ್ಯ ವ್ಯಂಗ್ಯವಾಡಿದ್ದಾರೆ.
ಯಡಿಯೂರಪ್ಪನವರೇ, ನಿಮಗೆ ಹಾಗೂ 25 ಬಿಜೆಪಿಯ ಸಂಸದರಿಗೆ ಪ್ರಧಾನಮಂತ್ರಿಗಳ ಜೊತೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯ ಇಲ್ಲ ಎಂದಾದರೆ ನಾವೂ ನಿಮ್ಮ ಜೊತೆ ದೆಹಲಿಗೆ ಬರುತ್ತೇವೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ ತುರ್ತು ಪರಿಹಾರಕ್ಕೆ ಅಗತ್ಯ ಹಣಕಾಸಿನ ನೆರವು ಒದಗಿಸಿದೆ. ಆದರಿಂದ ಪ್ರಧಾನಿ ಮೋದಿ ಬಳಿ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಅಗತ್ಯ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಸೆಪ್ಟೆಂಬರ್ 29ರಂದು ಬೆಳಿಗ್ಗೆ 9 ಗಂಟೆಗೆ ಚಾಮುಂದೆಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ದಸರಾ ಮಹೋತ್ಸವದ ಉದ್ಘಾಟನೆ ನೆರವೇರಲಿದ್ದು, ಅಕ್ಟೋಬರ್ 8ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಾನು ಹೇಳಿದ್ದೇನೆ ಎಂದು ಹೇಳಿರುವುದು ಅಪ್ಪಟ ಸುಳ್ಳು, ನಾನು ಹಾಗೆ ಒತ್ತಾಯಿಸಿರುವುದನ್ನು ಅವರು ಸಾಬೀತು ಪಡಿಸಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ. ಆದರೆ, ಈ ಹಿಂದೆ ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾದ ಆಪರೇಶನ್ ಕಮಲದ ಬಗ್ಗೆಯೂ ತನಿಖೆ ನಡೆಯಲಿ ಎಂದು ಖರ್ಗೆ ಆಗ್ರಹಿಸಿದ್ದಾರೆ.
'ಆಪರೇಷನ್ ಕಮಲ'ದಲ್ಲಿಯೂ ಕೋಟ್ಯಂತರ ರೂ.ಗಳ ದುರ್ವ್ಯವಹಾರ ನಡೆದಿದೆ ಎಂಬ ಆರೋಪ ಇದೆ. ಅದರ ಬಗ್ಗೆಯೂ ಸಿಬಿಐನಿಂದ ತನಿಖೆ ನಡೆಸಬೇಕೆಂದು ನಾನು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಈಗಿನ ಸರ್ಕಾರ ರದ್ದುಪಡಿಸುವ, ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ರಾಜ್ಯದ ಬಡಜನತೆ ದಂಗೆ ಏಳಬಹುದು, ಎಚ್ಚರ ಇರಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಯಡಿಯೂರಪ್ಪ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.