ಪಾಕ್ ಅಧಿಕಾರಿಗಳು ಅಭಿನಂದನ್ ಅವರನ್ನು ರಾವಲ್ಪಿಂಡಿಯಿಂದ ಲಾಹೋರಿಗೆ ಕರೆತಂದು ಜಿನಿವಾ ಒಪ್ಪಂದದ ನಿಯಮಾವಳಿ ಪ್ರಕಾರ ಅಂತಾರಾಷ್ಟ್ರೀಯ ರೆಡ್ ಕ್ರಾಸ್ ಸಮಿತಿಗೆ ಒಪ್ಪಿಸಲಿದ್ದಾರೆ ಎನ್ನಲಾಗಿದೆ.
ಅಭಿನಂದನ್ ಅವರನ್ನು ಪಾಕ್ ಸೈನಿಕರು ಪ್ರಶ್ನಿಸುತ್ತಿರುವ, ಹೊಡೆಯುತ್ತಿರುವ, ಕಣ್ಣಿಗೆ ಬಟ್ಟೆ ಕಟ್ಟಿ ಪ್ರಶ್ನೆಗಳನ್ನು ಕೇಳುತ್ತಿರುವ ವೀಡಿಯೋಗಳೂ ಸೇರಿದಂತೆ ಅವರ ಹಣೆಯಲ್ಲಿ, ಮೈಯಲ್ಲಿ ರಕ್ತ ಸುರಿಯುತ್ತಿರುವ 11 ವೀಡಿಯೋಗಳನ್ನು ಪಾಕ್ ಬಿಡುಗಡೆ ಮಾಡಿತ್ತು.
ಎರಡೂ ರಾಷ್ಟ್ರಗಳ ನಡುವೆ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ನಾಳೆ ಭಾರತೀಯ ಪೈಲೆಟ್ ಅಭಿನಂದನ್ ಅವರನ್ನು ಬಿಡುಗಡೆ ಮಾಡುವುದಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.