ಪ್ರಸ್ತುತ, ಈ ನಿಯಮವನ್ನು ನವೆಂಬರ್ 7 ರಿಂದ ಒಂದು ವರ್ಷ ಜಾರಿಗೆ ತರಲಾಗಿದೆ. ಇದರ ಪರಿಣಾಮವನ್ನು ಪರಿಶೀಲಿಸಿದ ಬಳಿಕ ನಿಷೇಧವನ್ನು ಮುಂದುವರಿಸುವ ಬಗ್ಗೆ ಪರಿಗಣಿಸಲಾಗುತ್ತದೆ ಎನ್ನಲಾಗಿದೆ.
ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಭಾರತೀಯ ಸಂವಿಧಾನವನ್ನು ಅನುಸರಿಸುತ್ತಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಮಂಗಳವಾರ ಆರೋಪಿಸಿದ್ದಾರೆ.
ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಇತರ ಗಣ್ಯರು ಕುಳಿತಿದ್ದ ಮುಖ್ಯ ವೇದಿಕೆಯಲ್ಲಿ ನನಗೆ ಸ್ಥಾನ ನೀಡದೆ ಅವಮಾನ ಮಾಡಿದ್ದಲ್ಲದೆ, ಯಾವುದೋ ಮೂಲೆಯಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು ಎಂದು ರಾಜ್ಯಪಾಲ ಜಗದೀಪ್ ಧಂಖರ್ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು, ದೇಶದಲ್ಲಿ ಸೂಪರ್ ತುರ್ತು ಪರಿಸ್ಥಿತಿ ಇದೆ ಮತ್ತು ಸಂವಿಧಾನದ ಹಕ್ಕುಗಳು ಮತ್ತು ಸ್ವಾತಂತ್ರ್ಯ ರಕ್ಷಣೆಗಾಗಿ ಎಲ್ಲರೂ ಸಿದ್ದರಾಗಿರಬೇಕು ಎಂದು ಕರೆ ನೀಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಎನ್ಆರ್ಸಿ ಜಾರಿಗೆ ಬರಲಿದೆ. ಆದಾಗ್ಯೂ ಮಮತಾ ತಮ್ಮ ಮತ ಬ್ಯಾಂಕ್ ಉಳಿಸಿಕೊಳ್ಳಲು ಬಾಂಗ್ಲಾದೇಶಿಗರನ್ನು ರಕ್ಷಿಸಲು ಬಯಸಿದರೆ ಅವರು ಬಾಂಗ್ಲಾದೇಶದ ಪ್ರಧಾನಿಯಾಗುವುದು ಉತ್ತಮ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಟೀಕಿಸಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರದಂದು ನೇತಾಜಿ ಸುಭಾಸ್ ಚಂದ್ರ ಬೋಸ್ಗೆ ಏನಾಯಿತು ಎಂದು ತಿಳಿಯುವ ಹಕ್ಕಿದೆ ಎಂದು ಪ್ರತಿಪಾದಿಸಿದರು. 74 ವರ್ಷಗಳ ಹಿಂದೆ ನಾಪತ್ತೆಯಾದ ದಿನದಂದು ಮಣ್ಣಿನ ಮಗ ಸುಭಾಶ್ ಚಂದ್ರಬೋಸ್ ಅವರನ್ನು ಸ್ಮರಿಸುತ್ತಾ ಮಮತಾ ಬ್ಯಾನರ್ಜೀ ಹೇಳಿದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೆಹಬೂಬಾ ಮುಫ್ತಿ ಮತ್ತು ಫಾರೂಕ್ ಅಬ್ದುಲ್ಲಾ ಅವರಂತಹ ನಾಯಕರು ಭಯೋತ್ಪಾದಕರಲ್ಲ ಮತ್ತು "ಪ್ರತ್ಯೇಕಿಸಲು ಸಾಧ್ಯವಿಲ್ಲ" ಎಂದು ಗುಡುಗಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗ್ರಾಮೀಣ ಪಶ್ಚಿಮ ಬಂಗಾಳವನ್ನು ಮಲವಿಸರ್ಜನೆ ಮುಕ್ತ (ಒಡಿಎಫ್) ಎಂದು ಘೋಷಿಸಿದ್ದಾರೆ ಮತ್ತು ತೃಣಮೂಲ ಕಾಂಗ್ರೆಸ್ ಸರ್ಕಾರವು ಈಗ ಘನತ್ಯಾಜ್ಯ ನಿರ್ವಹಣೆಯತ್ತ ಗಮನ ಹರಿಸಲಿದೆ ಎಂದು ಹೇಳಿದರು.
ಮಮತಾ ಬ್ಯಾನರ್ಜಿಯ ಸಹಚರರು ಹಾಗೂ ತೃಣಮೂಲ ಕಾಂಗ್ರೆಸ್ನ ನಾಯಕರು ಹೊರಗಿನ ಗೂಂಡಾಗಳಿಗೆ ಆಶ್ರಯ ನೀಡುತ್ತಿದ್ದಾರೆ. ಇದನ್ನೆಲ್ಲ ತಿಳಿದಿದ್ದರೂ ಪೊಲೀಸರು ದೀದಿಯ ಸೇನೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅರ್ಜುನ್ ಸಿಂಗ್ ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳನ್ನು ಗುಜರಾತ್ ಆಗಿ ಪರಿವರ್ತಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ನೀವು ಬಂಗಾಳದಲ್ಲಿದ್ದರೆ, ನೀವು ಬಾಂಗ್ಲಾ ಕಲಿಯಬೇಕು" ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಘೋಷಿಸಿದ್ದಾರೆ.
ರಾಜ್ಯದಾದ್ಯಂತ ಮತದಾನ-ಸಂಬಂಧಿತ ಹಿಂಸಾಚಾರದಲ್ಲಿ 50 ಕ್ಕೂ ಅಧಿಕ ಜನರನ್ನು ಕೊಲೆ ಮಾಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದ್ದು, ಮಾಧ್ಯಮ ವರದಿಗಳ ಬಳಿಕ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸಮಾರಂಭಕ್ಕೆ ತೆರಳದೆ ಇರಲು ತೀರ್ಮಾನಿಸಿದ್ದಾರೆ.
ಹಿರಿಯ ಬಿಜೆಪಿ ನಾಯಕ ಹಾಗೂ ಪಶ್ಚಿಮ ಬಂಗಾಳದ ಉಸ್ತುವಾರಿ ಕೈಲಾಶ್ ವರ್ಗಿಯಾ ಮಮತಾ ಬ್ಯಾನರ್ಜಿ ಅವರು ಎನ್ಕೌಂಟರ್ನಲ್ಲಿ ಬರಾಕ್ಪೋರ್ ಬಿಜೆಪಿ ಅಭ್ಯರ್ಥಿ ಅರುಣ್ ಸಿಂಗ್ ಅವರನ್ನು ಎನ್ಕೌಂಟರ್ ಮಾಡಬಹುದು ಎಂದು ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.