ಕಳೆದ ಎರಡು ಮೂರು ದಿನಗಳಿಂದನಿರಂತರ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಎನ್.ದಯಾನಂದ್ ತಿಳಿಸಿದ್ದಾರೆ.
ಆಗಸ್ಟ್ 5 ರಿಂದ 7ರ ವರೆಗೆ 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂಬೈ ಭಾರೀ ಮಳೆಯಿಂದಾಗಿ ಭಾನುವಾರ ಜನಜೀವನ ಅಸ್ತವ್ಯಸ್ತವಾಗಿತ್ತು. ಇದರ ಬೆನ್ನಲ್ಲೇ ಸೋಮವಾರ ಮತ್ತು ಮಂಗಳವಾರ ಮುಂಬೈನಲ್ಲಿ ತೀವ್ರ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಈಶಾನ್ಯ ಬಂಗಾಳಕೊಲ್ಲಿಯಲ್ಲಿ ಕಡಿಮೆ-ಒತ್ತಡದ ಪ್ರದೇಶವು ಹೆಚ್ಚಾಗುವ ಸಾಧ್ಯತೆಯಿದ್ದು ಹಲವಾರು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೇ ಎಂದು ಐಎಂಡಿ ಎಚ್ಚರಿಕೆ ನೀಡಿದೆ.
ರಾಜ್ಯದ ಮಾಲ್ಕಂಗಿರಿ, ಕೊರಪುಟ್, ನಬರಂಗ್ಪುರ, ಕಲಹಂಡಿ ಮತ್ತು ನುವಾಪಾಡ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇರುವುದರಿಂದ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ವಿಶೇಷ ಪರಿಹಾರ ಆಯುಕ್ತರು (ಎಸ್ಆರ್ಸಿ) ನಿರ್ದೇಶನ ನೀಡಿದ್ದಾರೆ.
ಗುಜರಾತ್ನ ಕೆಲವು ಭಾಗಗಳಲ್ಲಿ ರೈಲು ಸಂಚಾರವನ್ನು ರದ್ದುಪದಿಸಲಾಗಿದ್ದು, 12 ರೈಲು ಮಾರ್ಗಗಳನ್ನು ಬದಲಾಯಿಸಲಾಗಿದೆ. ಅಷ್ಟೇ ಅಲ್ಲದೆ, ವಡೋದರಾ ವಿಮಾನ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ 9 ಗಂಟೆಯವರೆಗೆ ವಿಮಾನ ಸೇವೆ ಸಹ ಸ್ಥಗಿತಗೊಳಿಸಲಾಗಿದೆ.
ಭಾರತ ಹವಾಮಾನ ಇಲಾಖೆ (ಐಎಂಡಿ) ಮುಂದಿನ ಕೆಲವು ದಿನಗಳವರೆಗೆ ರಾಜ್ಯದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಇದು ಜಮ್ಮು ಮತ್ತು ಶ್ರೀನಗರ ನಡುವಿನ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಕಾರಣವಾಗಬಹುದು ಎಂದು ಊಹಿಸಲಾಗಿದೆ. ವಿಶೇಷವಾಗಿ ರಾಂಬನ್ ಮತ್ತು ಬನಿಹಾಲ್ ನಡುವಿನ ಪ್ರದೇಶದ ಭೂಕುಸಿತಕ್ಕೆ ಹೆಚ್ಚು ಗುರಿಯಾಗಬಹುದು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.