ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಸತತ 12 ಬಾರಿಗೆ ಫೋರ್ಬ್ಸ್ ನ ಶ್ರೀಮಂತ ಭಾರತೀಯರ ಪಟ್ಟಿಯಲ್ಲಿ ಅಗ್ರಸ್ತಾನವನ್ನು ಕಾಯ್ದುಕೊಂಡಿದ್ದಾರೆ. ಭಾರತದ ಆರ್ಥಿಕತೆ ಸಂಕಷ್ಟದ ನಡುವೆಯೂ ಫೋರ್ಬ್ಸ್ 2019 ರ ಶ್ರೀಮಂತ ಭಾರತೀಯರ ಪಟ್ಟಿಯಲ್ಲಿ 51.4 ಬಿಲಿಯನ್ ಡಾಲರ್ ನಿವ್ವಳ ಮೌಲ್ಯದೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ತಮ್ಮ ಕಂಪನಿಯು ಜಮ್ಮು ಮತ್ತು ಕಾಶ್ಮೀರ ಮತ್ತು ಇತ್ತೀಚೆಗೆ ರಚನೆಯಾದ ಎರಡು ಕೇಂದ್ರಾಡಳಿತ ಪ್ರದೇಶಗಳಾದ ಲಡಾಖ್ ಕುರಿತಾಗಿ ಹಲವು ಯೋಜನೆಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
ಒಂದು ಕಡೆ ಕಾಂಗ್ರೆಸ್ ಪಕ್ಷ ರಫೇಲ್ ಒಪ್ಪಂದದ ವಿಚಾರವಾಗಿ ಅನಿಲ್ ಅಂಬಾನಿ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿರುವ ಬೆನ್ನಲ್ಲೇ ಈಗ ರಿಲಯನ್ಸ್ ನ ಅಧ್ಯಕ್ಷ ಮುಖೇಶ್ ಅಂಬಾನಿ ಈಗ ಮುಂಬೈ ದಕ್ಷಿಣದ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದಿಯೋರಾ ಅವರನ್ನು ಬೆಂಬಲಿಸಿದ್ದಾರೆ.
ಕಳೆದ ಕಳಪೆ 2018 ಋತುವಿನಲ್ಲಿ ಕಳಪೆ ಪ್ರದರ್ಶನದ ಹೊರತಾಗಿಯೂ ಮುಂಬೈ ಇಂಡಿಯನ್ಸ್ ತಂಡವು ತನ್ನ ಆದಾಯವನ್ನು ಹೆಚ್ಚಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಕೇಶ್ ಅಂಬಾನಿ ಅವರ ನಿವ್ವಳ ಮೌಲ್ಯ ಕಳೆದ 12 ತಿಂಗಳಲ್ಲಿ 10 ಬಿಲಿಯನ್ ಡಾಲರ್ನಿಂದ 50 ಬಿಲಿಯನ್ ಡಾಲರ್ಗಳಿಗೆ ಏರಿಕೆಯಾಗಿದೆ. ಆ ಮೂಲಕ ಈಗ ಶ್ರೀಮಂತ ಕ್ರೀಡಾ ತಂಡದ ಮಾಲೀಕರಾಗಿ ಹೊರಹೊಮ್ಮಿದ್ದಾರೆ.
ಮುಖೇಶ್ ಅಂಬಾನಿ ಸ್ವಾಮ್ಯದ ರಿಲಯನ್ಸ್ ಇಂಡಸ್ಟ್ರೀಸ್ ಜುಲೈ-ಸೆಪ್ಟೆಂಬರ್ 2018 ರ ನಡುವೆ ಮೂರು ತಿಂಗಳಲ್ಲಿ ಒಟ್ಟು ನಿವ್ವಳ ಲಾಭ 9,516 ಕೋಟಿ ರೂ ಗಳಿಸಿದೆ.ಈ ಹಿಂದಿನ ಏಪ್ರಿಲ್-ಜುಲೈ ತ್ರೈಮಾಸಿಕ ಅವಧಿಯಲ್ಲಿ 9,459 ಕೋಟಿ ರೂ ನಿವ್ವಳ ಲಾಭ ಗಳಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.