ಹರ್ದೋಯಿಯಲ್ಲಿ 3, ಅಮೇಥಿ, ಸಿತಾಪುರ, ಬಲರಾಮಪುರ, ಗಾಜಿಪುರ ಮತ್ತು ಜಾಲೌನ್ ನಲ್ಲಿ ತಲಾ 2, ಫತೇಪುರ್, ಉನ್ನಾವ್, ಬದಾಯೂ ಮತ್ತು ಗೊಂಡಾದಲ್ಲಿ ತಲಾ ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಉತ್ತರಪ್ರದೇಶ ರಾಜ್ಯಪಾಲ ರಾಮ್ ನಾಯಕ್ ಅವರು ಸಿಎಂ ಯೋಗಿ ಆದಿತ್ಯನಾಥ್ ಮನವಿಯನ್ನು ಅಂಗೀಕರಿಸಿದ್ದು, ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷದ ನಾಯಕ ಹಾಗೂ ಸಚಿವ ಓಂ ಪ್ರಕಾಶ್ ರಾಜ್ಬರ್ ಅವರನ್ನು ಈ ಕ್ಷಣದಿಂದಲೇ ಸಚಿವ ಸ್ಥಾನದಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬಡಜನರಿಗೆ ಶೌಚಾಲಯ ಮತ್ತು ಇಂಧನ ಅವಶ್ಯಕತೆ ಪೂರೈಕೆಗೆ ಪ್ರಧಾನಿ ನರೇಂದ್ರ ಮೋದಿ ಆದ್ಯತೆ ನೀಡುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಮೋದಿ ಅವರು ಮತ್ತಷ್ಟು ವರ್ಷ ದೇಶದ ಆಡಳಿತ ನಡೆಸಲಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ನಾನು ಪ್ರಧಾನಿ ಹುದ್ದೆಗೆ ಸ್ಪರ್ಧೆಯಲ್ಲಿ ಇಲ್ಲ. ಜನ ನನ್ನನ್ನು ಹಿಂದುತ್ವದ 'ಪೋಸ್ಟರ್ ಬಾಯ್' ಎಂದು ಉಲ್ಲೇಖಿಸಲ್ಪಡುವಲ್ಲಿ ನನಗೆ ಯಾವುದೇ ಆಕ್ಷೇಪಗಳಿಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಮಾರ್ಚ್ 19, 2017ರಲ್ಲಿ ಉತ್ತರಪ್ರದೇಶದ ಜನತೆ ಸೇವೆ ಮಾಡಲು ನಮಗೆ ಅವಕಾಶ ದೊರೆಯಿತು. ಅಲ್ಲಿಂದ ಇಲ್ಲಿಯವರೆಗೆ ಹದಗೆಟ್ಟಿದ್ದ ಉತ್ತರಪ್ರದೇಶದ ಪರಿಸ್ಥಿತಿಯನ್ನು ಬದಲಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಅಯೋಧ್ಯೆ ವಿವಾದ ವಿಚಾರವಾಗಿ ಶನಿವಾರದಂದು ಪ್ರತಿಕ್ರಿಯಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ "ಈ ವಿವಾದವನ್ನು 24 ಗಂಟೆಯಲ್ಲಿ ಬಗೆ ಹರಿಸಬಹುದು" ಎಂದು ಅಭಿಪ್ರಾಯಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.