ಹರಿಯಾಣ ವಿಧಾನಸಭಾ ಚುನಾವಣೆ 2019 (Haryana Assembly Elections 2019) ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2019 (Maharashtra Assembly Elections 2019)ರ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದೇ ಅಕ್ಟೋಬರ್ 21ರಂದು ಎರಡೂ ರಾಜ್ಯಗಳಲ್ಲಿ ನಡೆದಿದ್ದ ಚುನಾವಣೆಯ ಮತಎಣಿಕೆ ಇಂದು ಬೆಳಿಗ್ಗೆ ಎಂಟು ಗಂಟೆಗೆ ಪ್ರಾರಂಭವಾಗಲಿದೆ.
ಮಹಾರಾಷ್ಟ್ರದಲ್ಲಿ ಎನ್ಡಿಎ ಸರ್ಕಾರ ರಚನೆಯಾದರೆ ದೇವೇಂದ್ರ ಫಡ್ನವೀಸ್ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೀ ನ್ಯೂಸ್ನೊಂದಿಗೆ ವಿಶೇಷ ಸಂವಾದದಲ್ಲಿ ಸ್ಪಷ್ಟಪಡಿಸಿದ್ದಾರೆ.
ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಮತದಾನ ನಡೆಯಲಿರುವ "ಅಕ್ಟೋಬರ್ 21 ರಂದು ಬೆಳಿಗ್ಗೆ 7 ರಿಂದ ಸಂಜೆ 6.30 ರವರೆಗೆ" ನಿಷೇಧವು ಜಾರಿಯಲ್ಲಿರಲಿದೆ. ಮಹಾರಾಷ್ಟ್ರದ ಸತಾರಾ ಮತ್ತು ಬಿಹಾರದ ಸಮಸ್ತಿಪುರದ ಎರಡು ಸಂಸದೀಯ ಕ್ಷೇತ್ರಗಳನ್ನು ಹೊರತುಪಡಿಸಿ, 17 ರಾಜ್ಯಗಳ 51 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ದಿನ ಉಪಚುನಾವಣೆ ನಡೆಯಲಿದೆ.
ಹರಿಯಾಣ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಇದಕ್ಕೆ 'ಸಂಕಲ್ಪ ಪತ್ರ' ಎಂದು ಹೆಸರಿಸಿದೆ. ರೈತರ ಆದಾಯವನ್ನು ದ್ವಿಗುಣಗೊಳಿಸುವ ಮೂಲಕ ಮತ್ತು ಲಕ್ಷಾಂತರ ಯುವಕರಿಗೆ ಕೌಶಲ್ಯಗಳನ್ನು ಕಲಿಸುವ ಮೂಲಕ ಉದ್ಯೋಗ ಕಲ್ಪಿಸುವುದು ಸೇರಿದಂತೆ ಅನೇಕ ಭರವಸೆಗಳನ್ನು ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.