Karnataka elections: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು ಮತದಾನ ಮಾಡಲು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಹೆಲಿಕಾಪ್ಟರ್ನಲ್ಲಿ ಬಂದಿಳಿದಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಮಾಜಿ ಪ್ರಧಾನಿ ಹಾಗೂ ಅವರ ಪತ್ನಿ ಚನ್ನಮ್ಮ ಅವರೊಂದಿಗೆ ಮತದಾನ ಮಾಡಿದ್ದಾರೆ.
ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳನ್ನು ನಂಬಲು ಸಾಧ್ಯವಿಲ್ಲ. ಹಾಗಾಗಿ ಡಿಸೆಂಬರ್ 15ರಂದು ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನು ಜೆಡಿಎಸ್ ಸ್ವತಂತ್ರವಾಗಿ ಎದುರಿಸಲಿದೆ ಎಂದು ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಎರಡು ದಿನಗಳ ಕಾಲ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಸುಪ್ರೀಂ ಕೋರ್ಟ್ ಉಪಚುನಾವಣೆಗೆ ತಡೆ ನೀಡಿ ಆದೇಶ ಹೊರಡಿಸಿ ವಿಚಾರಣೆಯನ್ನು ಮುಂದೂಡಿದೆ. ಈ ಬಗ್ಗೆ ಯಾವುದೇ ಕಟುವಾದ ಪದ ಪ್ರಯೋಗ ಮಾಡುವುದಿಲ್ಲ ಎಂದು ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಟೆಲಿಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೇವೇಗೌಡರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಮೆರಿಕದ ನ್ಯೂಜೆರ್ಸಿಯ ಸೋಮರ್ಸೆಟ್ ಎಂಬಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ವತಿಯಿಂದ 20 ಎಕರೆ ಭೂಮಿಯಲ್ಲಿ ಕಾಲಭೈರವೇಶ್ವರ ಸ್ವಾಮಿಯ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದಾರೆ.
ಆಗಸ್ಟ್ 20 ರಂದು ಹಿಂದುಳಿದ ವರ್ಗದ ನಾಯಕ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆಯಿದ್ದು, ಅಂದೇ ಪಾದಯಾತ್ರೆಗೆ ಚಾಲನೆ ಕೊಡಲಾಗುತ್ತಿದೆ ಎಂದು ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.
ಮಧ್ಯಂತರ ಚುನಾವಣೆ ನಡೆಯುತ್ತದೆ ಎಂದು ಹೆಚ್.ಡಿ.ದೇವೇಗೌಡರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆದರೆ ಅವರು, ಹಿರಿಯರು, ಮಾಜಿ ಪ್ರಧಾನಿ, ಹಾಗಾಗಿ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಡಿಸಿಎಂ ಜಿ.ಪರಮೇಶ್ವರ್ ಹೇಳಿದ್ದಾರೆ.
ವಿಶ್ವನಾಥ್ ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ, ನಮ್ಮ ಪಕ್ಷದಲ್ಲೇ ಇರುತ್ತಾರೆ. ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ನನ್ನನ್ನು ಒತ್ತಾಯಿಸಬೇಡಿ ಎಂದು ಕೇಳಿಕೊಂಡಿದ್ದಾರೆ ಎಂದು ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.