ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ದಮನಕಾರಿ ನೀತಿಯನ್ನು ವಿರೋಧಿಸಿ, ಆಮ್ ಆದ್ಮಿ ಪಕ್ಷದಿಂದ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಖಾಲಿ ಬಿಂದಿಗೆ, ಖಾಲಿ ಬಕೆಟ್ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಏಪ್ರಿಲ್ 13 ರ ಮೊದಲು ಆದೇಶವನ್ನು ಹೊರಡಿಸುವಂತೆ ಕರ್ನಾಟಕ ಹೈಕೋರ್ಟ್ ಗುರುವಾರದಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ನಿರ್ದೇಶನ ನೀಡಿದೆ.
ಸ್ವಚ್ಛತೆ, ಶಿಕ್ಷಣ, ಆರೋಗ್ಯ, ವಿದ್ಯುತ್ ಮುಂತಾದ ಮೂಲಭೂತ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಆಮ್ ಆದ್ಮಿ ಪಾರ್ಟಿಯೊಂದೇ ಪರಿಹಾರವಾಗಿದೆ. ಇದನ್ನು ಜನರಿಗೆ ತಿಳಿಸುವ ಉದ್ದೇಶದಿಂದ ʻಪೊರಕೆಯೇ ಪರಿಹಾರʼ ಹೆಸರಿನಲ್ಲಿ ಯಾತ್ರೆ ಆಯೋಜಿಸಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರುತ್ತಾರೆಂದು ಮುಚ್ಚಿದ ಗುಂಡಿಗಳು ಅವರು ದೆಹಲಿಗೆ ವಾಪಸಾದ ಕೆಲವೇ ದಿನಗಳಲ್ಲಿ ಮತ್ತೆ ಬಾಯಿ ತೆರೆಯಲಿವೆ. ಗುಣಮಟ್ಟ ಕಾಯ್ದುಕೊಳ್ಳದೇ ಅವರಸರಲ್ಲಿ ಮಾಡಿದ ಕಾಮಗಾರಿಗಳು ಒಂದು ತಿಂಗಳು ಬಾಳಿಕೆ ಬರುವುದೂ ಅನುಮಾನ. ಮೋದಿಯವರು ಈ ಹಿಂದೆ ರಾಜ್ಯಕ್ಕೆ ಬಂದಾಗಲೂ ನಾವಿದನ್ನು ಗಮನಿಸಿದ್ದೇವೆ- ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ
ಎಸಿಬಿ ಕಾರ್ಯವೈಖರಿ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಇತ್ತೀಚಿನ ಹೇಳಿಕೆ ಅನುಮೋದಿಸಿ ಟ್ವೀಟ್ ಮಾಡಿರುವ ಭಾಸ್ಕರ್ ರಾವ್, ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಅವರ ಅಭಿಪ್ರಾಯ 100% ಸತ್ಯವಾಗಿದ್ದು, ಹಿಂದಿನ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಯಂತ್ರಿಸಲು ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ವನ್ನ ರಚಿಸಿತು ಎಂದು ಆರೋಪಿಸಿದ್ದಾರೆ.
ಎಚ್ಎಸ್ಆರ್ ಲೇಔಟ್ನ ವಾಜಪೇಯಿ ಕ್ರೀಡಾಂಗಣದ ಗ್ಯಾಲರಿಯು ಕುಸಿದು ಬೀಳಲು ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ದಂಧೆಯೇ ಕಾರಣ ಎಂದು ಆರೋಪಿಸಿ ಆಮ್ ಆದ್ಮಿ ಪಾರ್ಟಿಯು ಪ್ರತಿಭಟನೆ ನಡೆಸಿತು.
ರಾಜ್ಯ ಆರೋಗ್ಯ ಇಲಾಖೆಯಲ್ಲಿ (Health Department) ನಿರಂತರವಾಗಿ ವಿವಿಧ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ, ಆರೋಗ್ಯ ಸಚಿವ ಡಾ.ಸುಧಾಕರ್ (Sudhakar) ಅವರ ರಾಜೀನಾಮೆ ಪಡೆದು ನಿಷ್ಪಕ್ಷಪಾತ ತನಿಖೆಗೆ ಆದೇಶಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ (Aam Admi Party) ಒತ್ತಾಯಿಸಿದೆ.
ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷವು ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ಪಕ್ಷದ (ಎಎಪಿ) ನಾಯಕ ಭಗವಂತ್ ಮಾನ್ ಅವರು ಬುಧವಾರದಂದು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
2022 ರ ಪಂಜಾಬ್ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ (Arvind Kejriwal) ನೇತೃತ್ವದ ಆಮ್ ಆದ್ಮಿ ಪಕ್ಷವು ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ಅದಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆಯುವ ಸಮಯ ಸನ್ನಿಹಿತವಾಗಿದೆ.
ಇತ್ತೀಚೆಗೆ ಜಾರಿಗೆ ಬಂದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ಆಮ್ ಆದ್ಮಿ ಪಕ್ಷದ (ಎಎಪಿ ಕಾರ್ಯಕರ್ತರು ಸೋಮವಾರ ಉಪವಾಸ ಆಚರಿಸಲಿದ್ದಾರೆ ಎಂದು ದೆಹಲಿ ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಸಚಿವ ಗೋಪಾಲ್ ರೈ ಹೇಳಿದ್ದಾರೆ.
ಕೊರೋನಾ ಸೊಂಕು ಹೆಚ್ಚಳವಾಗುತ್ತಿರುವ ವೇಳೆಯಲ್ಲೆ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಬಿಬಿಎಂಪಿ ಹಾಗೂ ಇತರೆ ಇಲಾಖೆಗಳು ಕೋಳಿ ಜಗಳವಾಡುತ್ತಾ ಜನರ ಜೀವದ ಜತೆ ಚೆಲ್ಲಾಟವಾಡುತ್ತಿವೆ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಉಸ್ತುವಾರಿ ಜಗದೀಶ್ ವಿ ಸದಂ ಆರೋಪ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.