ACB Raid in Telangana: ಎಸ್.ಬಾಲಕೃಷ್ಣ ಈ ಹಿಂದೆ ಹೈದರಾಬಾದಿನ ಮೆಟ್ರೋಪಾಲಿಟನ್ ಡೆವಲಪ್ಮೆಂಟ್ ಅಥಾರಿಟಿಯಲ್ಲಿ (HMDA) ಟೌನ್ ಪ್ಲಾನಿಂಗ್ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಭ್ರಷ್ಟಾಚಾರ ನಿಗ್ರಹ ದಳದ 14 ತಂಡಗಳ ಅಧಿಕಾರಿಗಳು ದಿನವಿಡೀ ಶೋಧ ಕಾರ್ಯ ನಡೆಸಿದ್ದಾರೆ. ಗುರುವಾರ ಮತ್ತಷ್ಟು ಶೋಧ ಕಾರ್ಯಾಚರಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇಡಿ ದಾಖಲಿಸಿದ ಇಸಿಐಆರ್ ತನಿಖೆಯಲ್ಲಿ ಜಮೀರ್ ಅಹಮದ್ ಸಾರ್ವಜನಿಕ ಸೇವಕರಾಗಿದ್ದು, 2005 ರಿಂದ ಆಗಸ್ಟ್ 5, 2021ರ ಅವಧಿಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದು ಈ ವೇಳೆ ಅಪಾರ ಪ್ರಮಾಣದ ಆಸ್ತಿ ಗಳಿಸಿರುವ ಅಂಶ ಬೆಳಕಿಗೆ ಬಂದಿದೆ.
ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿರುವ ಎಸಿಬಿ ಅಧಿಕಾರಿಗಳು ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಮನೆ ಸೇರಿದಂತೆ ಐದು ಕಡೆಗಳಲ್ಲಿ ಏಕಕಾಲಕ್ಕೆ ರೇಡ್ ಮಾಡಲಾಗಿದೆ.
ಇಂದು ಬೆಳ್ಳಂಬೆಳಗ್ಗೆ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಕಚೇರಿ, ನಿವಾಸಗಳ ಮೇಲೆ ಎಸಿಬಿ ದಾಳಿ ನಡೆಸಲಾಗಿದೆ. ಏಕಕಾಲದಲ್ಲಿ 40ಕ್ಕೂ ಹೆಚ್ಚು ಅಧಿಕಾರಿಗಳು 5 ಸ್ಥಳಗಳ ಮೇಲೆ ದಾಳಿ ನಡೆಸಿದ್ದು ಶಾಸಕ ಜಮೀರ್ಗೆ ಶಾಕ್ ನೀಡಿದೆ.
ಲೋಕೋಪಯೋಗಿ ಇಲಾಖೆಯ ಬೆಳಗಾವಿ ಅಧೀಕ್ಷಕ ಇಂಜಿನಿಯರ್ ಬಿ. ವೈ ಪವಾರ್ ಮನೆ ಮೇಲೆ ಎಸಿಬಿ ದಾಳಿ ವೇಳೆ ಅಧಿಕಾರಿಗಳು ಕೋಟ್ಯಂತರ ಮೌಲ್ಯದ ಆಸ್ತಿ ಪತ್ರ, ಕೆಜಿಗಟ್ಟಲೆ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
ರಾಜ್ಯಾದ್ಯಂತ ಏಕಕಾಲಕ್ಕೆ 18 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ . ಬೆಂಗಳೂರಿನ ಮೂರು ಕಡೆ ದಾಳಿ ಮಾಡಿದ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.