ಭ್ರಷ್ಟಾಚಾರ ಆರೋಪದಲ್ಲಿ ಡಿಸಿ ಕಚೇರಿಯ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ಐಎಎಸ್ ಅಧಿಕಾರಿ ಮಂಜುನಾಥ್ ಅವರನ್ನು ಬಂಧಿಸಿದ್ದಾರೆ. ಇದೀಗ ನ್ಯಾಯಾಲಯವು ಭ್ರಷ್ಟಾಚಾರ ಕೇಸ್ನಲ್ಲಿ ಐಎಎಸ್ ಅಧಿಕಾರಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಸಂಬಂಧ ದಾಳಿ ನಡೆದಿದ್ದು, ಸರ್ಕಾರಿ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಎಸಿಬಿ ದಾಳಿ ನಡೆದಿದೆ. ಬೆಂಗಳೂರಿನ ಜೆಪಿ ನಗರ, ಬಸವನಗುಡಿ, ಚಂದ್ರಾಲೇಔಟ್, ಬಸವೇಶ್ವರನಗರ, ಬನಶಂಕರಿ, ಕ್ರೆಸೆಂಟ್ ರಸ್ತೆ ಹಾಗೂ ಉತ್ತರಹಳ್ಳಿ ಭಾಗ ದೊಡ್ಡಕಲ್ಲಸಂದ್ರದಲ್ಲಿ ಎಸಿಬಿ ತಲಾಶ್ ನಡೆದಿದೆ.
ಲೋಕಾಯುಕ್ತದ ಅಧಿಕಾರವನ್ನು ಕಿತ್ತು ಎಸಿಬಿಗೆ ಕೊಟ್ಟಿದ್ದು ಕಾಂಗ್ರೆಸ್ ಲೋಕಾಯುಕ್ತ ಬಲಹೀನ ಮಾಡಿ ಸಿದ್ದರಾಮಯ್ಯ ತಪ್ಪು ಮಾಡಿದ್ರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವೀರಪ್ಪ ಮೊಯ್ಲಿ ವಾಗ್ದಾಳಿ.
ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೇಲ್ ಗ್ಯಾಸ್ ಕಂಪನಿ ವತಿಯಿಂದ ನೈಸರ್ಗಿಕ ಅನಿಲ ಪೈಪ್ ಅಳವಡಿಕೆಗೆ ರಸ್ತೆ ಬದಿ ನೆಲ ಅಗೆಯಲು ಮುಂದಾಗಿದ್ದರು. ಈ ಬಗ್ಗೆ ಅನುಮತಿ ಪಡೆಯಲು ಸಂಚಾರಿ ಪೊಲೀಸರಿಗೆ ಪತ್ರ ಬರೆದಿದ್ದರು.
ಇತ್ತೀಚಿನ ದಿನಗಳಲ್ಲಿ ಬಿಡಿಎ, ಬಿಬಿಎಂಪಿ ಹಾಗೂ ವಿವಿಧ ಸರ್ಕಾರಿ ಇಲಾಖೆಯ ಅಧಿಕಾರಿಗಳ ಮೇಲೆ ಎಸಿಬಿ(Anti Corruption Bureau) ದೊಡ್ಡ ಮಟ್ಟದಲ್ಲಿ ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ಅಕ್ರಮ ಸಂಪತ್ತು ಪತ್ತೆ ಹಚ್ಚಿದ್ದ ಅಧಿಕಾರಿಗಳಿಗೆ ಕಾರ್ಯದೊತ್ತಡ ಹೆಚ್ಚಾಗಿದೆ.
ಕರ್ನಾಟಕ ಸರ್ಕಾರದ 15 ಅಧಿಕಾರಿಗಳ ವಿರುದ್ಧ ನಡೆದ ದಾಳಿಯಲ್ಲಿ 8 ಎಸ್ಪಿಗಳು, 100 ಅಧಿಕಾರಿಗಳು ಮತ್ತು 300 ನೌಕರರು ಪಾಲ್ಗೊಂಡಿದ್ದರು. ಭ್ರಷ್ಟಾಚಾರ ನಿಗ್ರಹ ದಳದ ತಂಡವು ಸರ್ಕಾರಿ ಅಧಿಕಾರಿಗಳಿಗೆ ಸೇರಿದ 60 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ.
ಮಹಾರಾಷ್ಟ್ರ ನೀರಾವರಿ ಹಗರಣದ ಭಾಗವಾಗಿ ತನಿಖೆ ನಡೆಸುತ್ತಿರುವ ಅಂದಾಜು 3,000 ಪ್ರಕರಣಗಳಲ್ಲಿ ಕೇವಲ ಒಂಬತ್ತು ಪ್ರಕರಣಗಳಲ್ಲಿ ಅಜಿತ್ ಪವಾರ್ ವಿರುದ್ಧ ಏಜೆನ್ಸಿ ಸಾಕ್ಷ್ಯಾಧಾರಗಳು ಕಂಡುಬಂದಿಲ್ಲ ಎಂದು ಮಹಾರಾಷ್ಟ್ರ ಭ್ರಷ್ಟಾಚಾರ ನಿಗ್ರಹ ದಳದ ಮೂಲಗಳು ತಿಳಿಸಿವೆ.
ಬೆಂಗಳೂರು ಉತ್ತರ ತಾಲೂಕಿನ ಭೂ ಪರಿವರ್ತನೆ ಸಮಿತಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಆರ್. ಅಶೋಕ್ ಅವರು, ಸೋಮನಹಳ್ಳಿಯ 8 ಎಕರೆ ಬಗರ್ ಹುಕ್ಕುಂ ಭೂ ಪ್ರದೇಶವನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.