ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಆಂತರಿಕ ತಿಕ್ಕಾಟಕ್ಕೆ ಎಐಸಿಸಿ ಅಧ್ಯಕ್ಷರು ಬ್ರೇಕ್ ಹಾಕುವಂತೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. ರಾಜ್ಯ ಕೈ ನಾಯಕರ ಭಿನ್ನಾಭಿಪ್ರಾಯ, ಮತ್ತು ಅಸಮಾಧಾನದಿಂದ ಸರ್ಕಾರ ಮತ್ತು ಪಕ್ಷಕ್ಕೆ ಹಾನಿಯುಂಟಾಗ್ತದೆ.. ಏನೇ ವಿಚಾರಗಳಿದ್ದರೂ ಚೆರ್ಚಿಸಿ ಬಗೆಹರಿಸಿಕೊಳ್ಳಿ ಎಂದು ಬಹಿರಂಗ ಸಭೆಯಲ್ಲೇ ಸ್ಪಷ್ಟ ಮಾತುಗಳಿಂದ ಖಡಕ್ ಸಂದೇಶ ನೀಡಿದ್ರು. ಸಿಎಂ-ಡಿಸಿಎಂ ಸಮಕ್ಷಮದಲ್ಲಿ ಖರ್ಗೆ ಕೊಟ್ಟೆ ಹೇಳಿಕೆ ಒಗ್ಗಟ್ಟಿನ ಪಾಠ ಮಾಡಿದ್ದಾರೆ.
ರಾಜ್ಯಸಭಾ ಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ದೊರೆಯುವ 3 ಸ್ಥಾನಗಳಲ್ಲಿ ನಮ್ಮ ಸಮಾಜಕ್ಕೆ 1 ಸ್ಥಾನವನ್ನು ಕೊಡಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದ್ದಾರೆ.
ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಟಿ. ನರಸೀಪುರ, ನಂಜನಗೂಡು, ಎಚ್.ಡಿ. ಕೋಟೆ ಹಾಗೂ ಸಿಎಂ ಸಿದ್ದರಾಮಯ್ಯ ಕ್ಷೇತ್ರವಾದ ವರುಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾಂಗ್ರೆಸ್ ಗೆದ್ದಿದೆ.
ಸಿ.ಪುಟ್ಟರಂಗಶೆಟ್ಟಿ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗರಾಗಿದ್ದು ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಈಗಲೂ ನನಗೇ ಸಿದ್ದರಾಮಯ್ಯನೇ ಸಿಎಂ ಎನ್ನುವ ಮೂಲಕ ಗಮನ ಸೆಳೆದಿದ್ದರು. ಕ್ಷೇತ್ರ ಹುಡುಕಾಟದ ವೇಳೆ ಚಾಮರಾಜನಗರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿ ಎಂದು ಆಹ್ವಾನ ಕೊಟ್ಟಿದ್ದರು. ಸಿದ್ದರಾಮಯ್ಯ ಆಪ್ತ ಬಳಗದ ಶಾಸಕರಲ್ಲಿ ಗುರುತಿಸಿಕೊಂಡಿರುವ ಪುಟ್ಟರಂಗಶೆಟ್ಟಿ ಅವರಿಗೆ ಸಿದ್ದರಾಮಯ್ಯ ಮಣೆ ಹಾಕುವುದು ನಿಶ್ಚಿತ ಎಂಥಲೇ ಹೇಳಲಾಗುತ್ತಿದೆ.
Bharat Jodo Yatra: ಅಲ್ವಾರ್ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಬಿಜೆಪಿ ನಾಯಕರು ಹೋದಲ್ಲೆಲ್ಲಾ ಇಂಗ್ಲಿಷ್ ವಿರುದ್ಧ ಮಾತನಾಡುತ್ತಾರೆ. ಶಾಲೆಗಳಲ್ಲಿ ಇಂಗ್ಲಿಷ್ ಕಲಿಸಬಾರದು ಎನ್ನುತ್ತಾರೆ. ನೀವು ಅವರ ಮಕ್ಕಳು ಯಾವ ಶಾಲೆಯಲ್ಲಿ ಓದುತ್ತಾರೆ ಎಂದು ಕೇಳಿ" ಎಂದರು.
ಯಾರಿಗೆ ಬದ್ಧತೆ, ನಂಬಿಕೆ ಇರುತ್ತದೆಯೋ ಅವರು ಎಂದಿಗೂ ಪಕ್ಷ ಬಿಡುವುದಿಲ್ಲ.ಹಲವು ಜನ ಮಂತ್ರಿ ಸ್ಥಾನ, ಅಧ್ಯಕ್ಷ ಸ್ಥಾನ ಸಿಕ್ಕಿಲ್ಲ ಎಂದು ಪಕ್ಷ ಬಿಡುತ್ತಾರೆ. ನಾವು ಕುರ್ಚಿಗಾಗಿ ಪಕ್ಷ ಸೇರಬಾರದು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
Mallikarjun Kharge: ಮಲ್ಲಿಕಾರ್ಜುನ ಖರ್ಗೆ ಅವರು ದಕ್ಷಿಣ ಭಾರತದಿಂದ (ಕರ್ನಾಟಕ) ಬಂದವರು ಮತ್ತು ದಲಿತ ಸಮುದಾಯಕ್ಕೆ ಸೇರಿದವರು. ಖರ್ಗೆ ಅವರ ಈ ಆಯ್ಕೆಯಿಂದ 51 ವರ್ಷಗಳ ನಂತರ ಕಾಂಗ್ರೆಸ್ಗೆ ದಲಿತ ಅಧ್ಯಕ್ಷರೊಬ್ಬರು ಸಿಕ್ಕಂತಾಗಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ ಬಹುತೇಕ ವಿಜಯ ಸಾಧಿಸುವ ಸಾಧ್ಯತೆ ಇದೆ. AICC ಅಧ್ಯಕ್ಷ ಆದ ನಂತರ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಪಿಸಿಸಿಯ ಸವಾಲು ಚಕ್ರವ್ಯೂಹ ಆಗುವುದು ನಿಶ್ಚಿತವಾಗಿದೆ.
ಸುಮಾರು 22 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಎದುರಾಗಿದೆ. ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಅಧ್ಯಕ್ಷ ಸ್ಥಾನದ ರೇಸ್ನಲ್ಲಿದ್ದಾರೆ.
COVID-19 ವೈರಸ್ ಇರುವ ಕಾರಣಕ್ಕೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಾದ ಎನ್ ಇಇಟಿ (NEET) ಮತ್ತು ಜೆಇಇ (JEE)ಗಳನ್ನು ಮುಂದೂಡುವಂತೆ ಈಗಾಗಲೇ ಸುಪ್ರೀಂ ಕೋರ್ಟಿನಲ್ಲಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು.
ಶುಕ್ರವಾರ, ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್ ಪುಟದಲ್ಲಿ ಕೈಲಾಶ್ ಮಾನಸಸರೋವರ ಯಾತ್ರೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವೀಡಿಯೊದ ಶೀರ್ಷಿಕೆಯಲ್ಲಿ, ರಾಹುಲ್ "ಶಿವನೇ ಬ್ರಹ್ಮಾಂಡ" ಎಂದು ಬರೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.