ಗೃಹಕಚೇರಿ ಕೃಷ್ಣಾದಲ್ಲಿ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿಯು ನೀರು ಬಿಡುವಂತೆ ನೀಡಿರುವ ಆದೇಶದ ಕುರಿತು ಸಂಪುಟ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸುದೀರ್ಘ ಚರ್ಚೆ ನಡೆಸಿ, ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.ಸಭೆಯಲ್ಲಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್.ಕೆ. ಪಾಟೀಲ, ಚೆಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ವಕೀಲರಾದ ಮೋಹನ್ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಸರ್ಕಾರದ ಹಿರಿಯ
ರಾಜ್ಯದ ನೆಲ ಜಲ ಭಾಷೆ ವಿಚಾರದಲ್ಲಿ ಪ್ರತಿಪಕ್ಷಗಳು ಪ್ರಶ್ನೆ ಮಾಡಿದರೆ, ಅದನ್ನು ರಾಜಕೀಯ ಎಂದು ಭಾವಿಸುವುದು ತಪ್ಪು. ಹಾಗೇ ಭಾವಿಸುವ ಪ್ರಶ್ನೆಯೇ ಬೇಕಿಲ್ಲ. ನೀರನ್ನು ಹರಿಸುವ ಮೊದಲೇ ಸರ್ವಪಕ್ಷ ಸಭೆ ಕರೆದಿದ್ದರೆ ಅದಕ್ಕೊಂದು ಅರ್ಥ ಇರುತ್ತಿತ್ತು- ಹೆಚ್.ಡಿ. ಕುಮಾರಸ್ವಾಮಿ
ಈ ವರ್ಷ ಸರಿಯಾದ ಪ್ರಮಾಣದಲ್ಲಿ ಮಳೆ ಬಿದ್ದಿಲ್ಲ. ಹೀಗಾಗಿ ಕರ್ನಾಟಕ ರಾಜ್ಯ ಹಾಗೂ ರೈತರ ಹಿತ ಕಾಯುವುದು ನಮ್ಮ ಕರ್ತವ್ಯ. ರಾಜ್ಯದಲ್ಲಿನ ಆಣೆಕಟ್ಟುಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು, ಈ ವಿಚಾರವಾಗಿ ನಾವು ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ನಡೆಯಲಿರುವ ಮಹತ್ವದ ಸಭೆ ಹೋಟೆಲ್ಗೆ ‘ಕೈ’ ನಾಯಕರ ಭೇಟಿ, ಸಭೆಯ ಸಿದ್ಧತೆ ಪರಿಶೀಲನೆ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕರ್ನಾಟಕ ಉಸ್ತುವಾರಿ ಸುರ್ಜೇವಾಲಾ, ಗೃಹ ಸಚಿವ ಪರಮೇಶ್ವರ್ ಸಾಥ್ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ
SC, ST ಶಕ್ತಿ ನೀಡಬೇಕೆಂದು ತೀರ್ಮಾನ ಮಾಡಿದ್ದೇವೆ. ಸರ್ಕಾರದ ಆದೇಶದಲ್ಲಿ ನಾವು ಸ್ಪಷ್ಟ ಪಡಿಸುತ್ತಿದ್ದೇವೆ. SC ಮತ್ತು STಗೆ ಮಾತ್ರ ಮೀಸಲಾತಿ ಹೆಚ್ಚಳವಾಗುತ್ತೆ. ಬೇರೆ ಸಮುದಾಯಗಳ ಮೀಸಲಾತಿ ಬಗ್ಗೆ ಚರ್ಚೆಗಳಿಲ್ಲ ಎಂದು ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
ಅಫ್ಘಾನಿಸ್ತಾನದ ಬಿಕ್ಕಟ್ಟಿನ ಕುರಿತು ಚರ್ಚಿಸಲು ಸರ್ಕಾರ ಗುರುವಾರ ಸರ್ವಪಕ್ಷಗಳ ಸಭೆ ಕರೆದಿದೆ.ಯುದ್ಧದಿಂದ ಹಾನಿಗೊಳಗಾದ ದೇಶದ ಬೆಳವಣಿಗೆಗಳ ಬಗ್ಗೆ ರಾಜಕೀಯ ಪಕ್ಷಗಳ ನಾಯಕರಿಗೆ ಮಾಹಿತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ಸಚಿವಾಲಯಕ್ಕೆ ಸೂಚಿಸಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ಕೊರೊನಾವೈರಸ್ನ ಹದಗೆಟ್ಟ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ದೆಹಲಿಯ ಕೇಜ್ರಿವಾಲ್ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದಿದ್ದು, ಇದರಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚೀನಾವನ್ನು ಟೆಲಿಕಾಂ, ರೈಲ್ವೆ ಮತ್ತು ವಾಯುಯಾನ ಕ್ಷೇತ್ರಗಳಿಗೆ ಪ್ರವೇಶಿಸದಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ, ಆದರೆ ಗಾಲ್ವಾನ್ ಕಣಿವೆಯಲ್ಲಿ ತನ್ನ ಸೈನಿಕರೊಂದಿಗೆ ಹಿಂಸಾತ್ಮಕ ಮುಖಾಮುಖಿಯಾದ ನಂತರ ಬೀಜಿಂಗ್ ಜೊತೆ ವ್ಯವಹರಿಸುವಾಗ ನರೇಂದ್ರ ಮೋದಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲವನ್ನು ನೀಡಿದ್ದಾರೆ.
ದೇಶವು ಯಥಾಸ್ಥಿತಿ ಪುನಃ ಸ್ಥಾಪನೆಯಾಗಲಿದೆ ಎಂಬ ಭರವಸೆಯನ್ನು ಬಯಸುತ್ತದೆ ಮತ್ತು ಚೀನಾವು ವಾಸ್ತವಿಕ ನಿಯಂತ್ರಣದ ರೇಖೆಯ ಮೂಲ ಸ್ಥಾನಕ್ಕೆ ಮರಳಲಿದೆ" ಎಂದು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಹೇಳಿದರು. ಪ್ರಧಾನಿ ಮೋದಿ ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಅವರು ಮಾತನಾಡಿ ಕೇಂದ್ರ ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದರು.
ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕರೆದ ಸರ್ವಪಕ್ಷ ಸಭೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಸೂಕ್ಷ್ಮ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಭಾರತ ಮತ್ತು ಚೀನಾ ನಡುವೆ ಉದ್ವಿಗ್ನತೆಯ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. ವರ್ಚುವಲ್ ಸಭೆ ಇಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ಭಾರತ ಮತ್ತು ಚೀನಾ ಗಡಿ ಸಮಸ್ಯೆ ಕುರಿತು ಚರ್ಚಿಸಲು ಜೂನ್ 19 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಸೋಮವಾರ ರಾತ್ರಿ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ (ಎಲ್ಎಸಿ) ಭಾರತೀಯ ಮತ್ತು ಚೀನಾ ಸೈನಿಕರ ನಡುವೆ ಹಿಂಸಾತ್ಮಕ ಮುಖಾಮುಖಿಯಾದ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.