ಗರುಡ ಮೋಷನ್ ಪಿಕ್ಚರ್ಸ್ ಪ್ರೈ. ಲಿ. ಲಾಂಛನದಲ್ಲಿ ರಾಜೇಶ್ ಶರ್ಮ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮೂಲತಃ ಕನ್ನಡದವರೇ ಆಗಿರುವ ನಿರ್ದೇಶಕ ಸಂಜಯ್ ಶರ್ಮ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಬಾಲಿವುಡ್ ನ ಖ್ಯಾತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಸಂಜಯ್ ಶರ್ಮ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.
ಅನಂತನಾಗ್ನಲ್ಲಿ ಕಲ್ಲು ತೂರಾಟ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಈದ್ ಪ್ರಾರ್ಥನೆಯ ನಂತರ ಮಸೀದಿಯ ಹೊರಗೆ ಕಲ್ಲು ತೂರಾಟ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ಪ್ರತಿಭಟನಾಕಾರರು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದರು ಎನ್ನಲಾಗಿದೆ.
ಕುಲ್ಗಾಂ ಜಿಲ್ಲೆಯ ರೆಡ್ವಾನಿ ಬಾಲಾ ಪ್ರದೇಶದ ನಿವಾಸಿಯಾದ ನಿಸಾರ್ ದಾರ್, ಸಿರಹ್ಮಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತ್ಯೆಯಾಗಿದ್ದಾನೆ ಎಂದು ಕಾಶ್ಮೀರ ವಲಯ ಐಜಿಪಿ ಸ್ಪಷ್ಟಪಡಿಸಿದ್ದಾರೆ.
Encounters in Kashmir: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ನಲ್ಲಿ 2-3 ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದಿರುವ ಭದ್ರತಾ ಪಡೆಗಳು ಎಲ್ಲಾ ಕಡೆಯಿಂದ ಭಯೋತ್ಪಾದಕರನ್ನು ಸುತ್ತುವರಿದಿವೆ. ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ಕೌಂಟರ್ ಮುಂದುವರಿದಿದೆ.
Anantnag Encounter: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ನಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಎನ್ಕೌಂಟರ್ ನಲ್ಲಿ, ಸೇನಾ ಸಿಬ್ಬಂದಿಯಿಂದ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಂಟಿ ತಂಡವು ಶಂಕಿತ ಸ್ಥಳವನ್ನು ಸುತ್ತುವರೆದಿದ್ದರಿಂದ, ತಲೆಮರೆಸಿಕೊಂಡ ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಜಂಟಿ ತಂಡವು ಪ್ರತೀಕಾರಕ್ಕೆ ಮುಂದಾಗಿದ್ದು ಮೂವರು ಭಯೋತ್ಪಾದಕರು ಹತರಾಗಿದ್ದಾರೆ.
ಅನಂತ್ನಾಗ್ನ ವಾನ್ಪೋ ಪ್ರದೇಶದಲ್ಲಿ ಬೆಳಿಗ್ಗೆ ಗಸ್ತು ತಿರುಗುತ್ತಿದ್ದಾಗ ಭದ್ರತಾ ಪಡೆಗಳು ಐಇಡಿ(IED) ಪತ್ತೆ ಹಚ್ಚಿವೆ. ನಂತರ ಇದನ್ನು ಬಾಂಬ್ ವಿಲೇವಾರಿ ದಳದಿಂದ ಪರಿಶೀಲಿಸಲಾಯಿತು. ಇದರಿಂದಾಗಿ ನಡೆಯಬೇಕಿದ್ದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.
ಟ್ರಕ್ ಚಾಲಕನನ್ನು ಹತ್ಯೆಗೈದ ಪ್ರದೇಶದಲ್ಲೇ ರಾತ್ರಿಯಿಡೀ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಮೂಲಗಳ ಪ್ರಕಾರ, ಇತರ ಇಬ್ಬರು ಭಯೋತ್ಪಾದಕರು ಕಾರ್ಯಾಚರಣೆಯ ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕ ಸ್ಥಳೀಯನೇ ಎನ್ನಲಾಗಿದ್ದು, ಟ್ರಕ್ ಚಾಲಕ ಆತನನ್ನು ಗುರುತಿಸಿದ್ದಾನೆ.
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಕೆ.ಪಿ ರಸ್ತೆಯಲ್ಲಿ ಬುಧುವಾರ ಸಂಜೆ ಉಗ್ರರ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಸೈನಿಕರು ಮೃತಪಟ್ಟಿದ್ದಾರೆ .ಜಮ್ಮು ಮತ್ತು ಕಾಶ್ಮೀರ ಸ್ಟೇಶನ್ ಹೌಸ್ ಆಫೀಸರ್ (ಎಸ್ಒಒ), ಸಿಆರ್ಪಿಎಫ್ ಜವಾನ್ ಮತ್ತು ಸ್ಥಳೀಯ ಮಹಿಳೆ ಸೇರಿದಂತೆ ಮೂವರು ಮಂದಿ ಗಾಯಗೊಂಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ನ ಕಾಜ್ವಾನ್ ಅರಣ್ಯ ಪ್ರದೇಶ ಖುಂಡ್ರು ಬಳಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಎನ್ಕೌಂಟರ್ ಮೂಲಕ ಹತ್ಯೆಗೈದಿದ್ದಾರೆ. ಆದರೆ ಇದುವರೆಗೂ ಉಗ್ರರ ಮೃತದೇಹಗಳನ್ನು ವಶಪಡಿಸಿಕೊಂಡಿಲ್ಲವೆನ್ನಲಾಗಿದೆ. ಈ ಪ್ರದೇಶದಲ್ಲಿ ಇನ್ನು ಅಧಿಕ ಉಗ್ರರು ಸೇರೆ ಸಿಕ್ಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಭಾರತದ ಚುನಾವಣಾ ಇತಿಹಾಸದಲ್ಲಿ ಮೊದಲ ಬಾರಿಗೆ, ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಲೋಕಸಭಾ ಕ್ಷೇತ್ರದ ಮತದಾನ ಮೂರು ಹಂತಗಳಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಭಾನುವಾರ ಪ್ರಕಟಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.