BESCOM UG Transformer: ಈ ಯೋಜನೆಯಡಿ ವಿತರಣ ಪರಿವರ್ತಕಗಳು, ರಿಂಗ್ ಮೇನ್ ಯೂನಿಟ್ಗಳು, ಫಿಡರ್ ಪಿಲ್ಲರ್ ಬಾಕ್ಸ್ಗಳು ಸೇರಿದಂತೆ ಸಂಪೂರ್ಣ ವ್ಯವಸ್ಥೆಯನ್ನು ಭೂಗತವಾಗಿ ಪರಿವರ್ತಿಸಲಾಗುತ್ತಿದ್ದು, ಇದರಿಂದ ವಿದ್ಯುತ್ ಅವಘಡಗಳನ್ನು ತಪ್ಪಿಸುವುದರ ಜೊತೆಗೆ ವಿದ್ಯುತ್ ಪೂರೈಕೆ ನಷ್ಟವನ್ನು ತಗ್ಗಿಸಬಹುದಾಗಿದೆ.
ಅಶ್ವತ್ಥ್ ನಾರಾಯಣ ಅವರು ತಮ್ಮ ಇಲಾಖೆಯಲ್ಲಿ ಹಾಗೂ ಬೆಂಗಳೂರಿನಲ್ಲಿ ಏನೆಲ್ಲಾ ಮಾಡಿದ್ದಾರೆ ಎಂಬ ವಿಚಾರವನ್ನು ಬಿಚ್ಚಿಟ್ಟಿಲ್ಲ. ಈ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಸಮಯ ಬಂದಾಗ ಅವರ ಎಲ್ಲಾ ಅಕ್ರಮಗಳನ್ನು ಬಿಚ್ಚಿಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಮಾತೆತ್ತಿದ್ರೆ ಹೊಡಿ, ಬಡಿ, ಕೊಲೆ ಮಾಡಿ ಅಂತ ಹೇಳ್ತಾರೆ. ಎಲ್ಲಿಯವರೆಗೂ ರಾಜ್ಯದ ಜನರ ಆಶೀರ್ವಾದ ಇರುತ್ತೋ ಅಲ್ಲಿಯವರೆಗೂ ನನ್ನನ್ನು ಯಾರೂ ಮುಗಿಸಲು ಆಗಲ್ಲ ಎಂದು ಅಶ್ವತ್ಥ್ ನಾರಾಯಣ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಅಶ್ವತ್ಥ್ ನಾರಾಯಣ ಓರ್ವ ಮಂತ್ರಿಯಾಗಿ ಮಾಜಿ ಸಿಎಂರನ್ನು ಕೊಲೆ ಮಾಡುವ ಪ್ರಚೋದನೆ ಕೊಟ್ಟಿದ್ದಾರೆ. ಕ್ಷಮಾಪಣೆ ಕೇಳುವುದೆಲ್ಲಾ ಬೇಡ, ಭಾರತದ ಕಾನೂನು ಏನಿದೆ ಅದನ್ನು ರಾಜ್ಯ ಸರ್ಕಾರ ಪ್ರಯೋಗ ಮಾಡಲಿ ಎಂದು ಒತ್ತಾಯಿಸಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಕುರಿತು ಮಂಡ್ಯದ ಸಾರ್ವಜನಿಕ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಅಶ್ವಥ್ ನಾರಾಯಣ್ ಪ್ರಚೋದನಕಾರಿ ಹೇಳಿಕೆಗೆ ಕುರುಬ ಸಮುದಾಯ ಕೆಂಡಾಮಂಡಲವಾಗಿದೆ. ಅಶ್ವಥ್ ನಾರಾಯಣ ವಿರುದ್ಧ ಕಾನೂನು ಕ್ರಮವಾಗಬೇಕು ಅಂತಾ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ದೂರು ದಾಖಲಿಸಿದೆ.
siddaramaiah : ಹೊಡಿ, ಬಡಿ, ಕಡಿ ಅನ್ನೋದು ಬಿಜೆಪಿ ಸಂಸ್ಕೃತಿ ಮಹಾತ್ಮಾ ಗಾಂಧೀಜಿಯಂರವರನ್ನೇ ಕೊಂದವರು ಇವರು, ಆರ್ ಎಸ್ ಎಸ್ ನವರು ಇಂತವರ ಬಾಯಿಯಿಂದ ಹೇಳಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಸಚಿವ ಅಶ್ವಥ್ ನಾರಾಯಣ್ ಹೇಳಿಕೆಗೆ ಪ್ರಕ್ರಿಯೆ ನೀಡಿದ್ದಾರೆ.
ಮಂಡ್ಯಕ್ಕೆ ಸಚಿವ ಅಶ್ವಥ್ ನಾರಾಯಣ ಆಗಮಿಸಿದ್ದಾರೆ.. ಮಂಡ್ಯದಲ್ಲಿ ಕಮಲ ಅರಳಿಸಲು ಅಶ್ವತ್ಥ್ ನಾರಾಯಣ್ ಪ್ಲಾನ್ ಮಾಡಿದ್ದಾರೆ. ಉಸ್ತುವಾರಿ ಸಚಿವರ ಗೈರಿನಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ..
ಕಾಂಗ್ರೆಸ್ ಟಿಕೆಟ್ ಸೇಲ್ ಮಾಡ್ತಿದ್ದಾರೆ ಎಂಬ ಅಶ್ವತ್ಥ್ ನಾರಾಯಣ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಯಾರಾದರೂ ಹೆಂಗಸು ಕೇಳಿದ್ದರೆ ಉತ್ತರ ನೀಡಬಹುದಿತ್ತು. ಅವರು ಗಂಡಸು ಅಲ್ವಾ ಅವರಿಗೆ ಏನು ಹೇಳೋದು ಹೇಳಿ ಎಂದು ಲೇವಡಿ ಮಾಡಿದ್ದಾರೆ.
ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಉತ್ತರ ಪ್ರದೇಶದ ಚುನಾವಣೆ ವೇಳೆ ಪ್ರಿಯಾಂಕಾ ಗಾಂಧಿ ರಾಜ್ಯ ಪ್ರವಾಸ ನಡೆಸಿ ಅವಿರತವಾಗಿ ಪ್ರಯತ್ನ ಮಾಡಿದರೂ ಏನು ಪ್ರತಿಫಲ ತಂದುಕೊಂಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಅಲ್ಲಿ ಅವರು ಸಿಂಗಲ್ ಡಿಜಿಟ್ ಗೂ ಬರಲಿಲ್ಲ. ಅವರು ಇಲ್ಲಿ ಬಂದು ಏನು ಮಾಡುತ್ತಾರೆ. ಅವರು ಕೂಡ ಇಲ್ಲಿರುವ ನಮ್ಮ ಸ್ನೇಹಿತರ ಜೊತೆ ಸೇರಿಕೊಳ್ಳಲಿದ್ದಾರೆ ಅಷ್ಟೆ.
ಬೆಂಗಳೂರಿನ ವಿಧಾನಸೌಧದಲ್ಲಿ ಹಣ ಸಿಕ್ಕ ವಿಚಾರ. ಎಲ್ಲಾ ಕಾಲದಲ್ಲೂ ಹಣ ಸಿಕ್ಕಿದೆ.. ತನಿಖೆಗೆ ಹೇಳಿದ್ದೀವಿ. ಯಾವ ದುಡ್ಡನ್ನು ಭ್ರಷ್ಟಾಚಾರ ಮಾಡಲಿಕ್ಕೆ ಬಿಡಲ್ಲ ಎಂದು ರಾಮನಗರದಲ್ಲಿ ಸಚಿವ ಡಾ.ಅಶ್ವತ್ಥ್ ನಾರಾಯಣ್ ಹೇಳಿದ್ರು.
ಎಲ್ಲಾ ಕಾಲದಲ್ಲೂ ಹಣ ಸಿಕ್ಕಿದೆ.. ತನಿಖೆಗೆ ಹೇಳಿದ್ದೀವಿ ಎಂದು ರಾಮನಗರದಲ್ಲಿ ಸಚಿವ ಡಾ.ಅಶ್ವತ್ಥ್ ನಾರಾಯಣ್ ಸಮರ್ಥನೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಹಣ ಸಿಕ್ಕ ವಿಚಾರ ಪ್ರತಿಕ್ರಿಯೆ ನೀಡಿದ ಅವರು, ಯಾವ ದುಡ್ಡನ್ನು ಭ್ರಷ್ಟಾಚಾರ ಮಾಡಲಿಕ್ಕೆ ಬಿಡಲ್ಲ. ಭ್ರಷ್ಟಾಚಾರ ಬಗ್ಗೆ ಮಾತನಾಡಲು ಕಾಂಗ್ರೆಸ್ಗೆ ನೈತಿಕ ಹಕ್ಕಿಲ್ಲ ಎಂದಿದ್ದಾರೆ.
ಚಿಲುಮೆ ಹಗರಣ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿರೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ಅಶ್ವತ್ಥ್ ನಾರಾಯಣ್, ನಮ್ಮ ಸರ್ಕಾರದಲ್ಲಿ ಪಾರದರ್ಶಕವಾಗಿ ತನಿಖೆ ಮಾಡಲಾಗ್ತಿದೆ. ಇದರಲ್ಲಿ ಯಾರೇ ಏನೇ ತಪ್ಪು ಮಾಡಿದ್ರೂ ಅವರಿಗೆ ಕಠಿಣ ಶಿಕ್ಷೆ ನೀಡಲಾಗೋದು ಅಂತಾ ಹೇಳಿದ್ದಾರೆ.
ಚಿಲುಮೆ ಹಗರಣ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿರೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ಅಶ್ವತ್ಥ್ ನಾರಾಯಣ್, ನಮ್ಮ ಸರ್ಕಾರದಲ್ಲಿ ಪಾರದರ್ಶಕವಾಗಿ ತನಿಖೆ ಮಾಡಲಾಗ್ತಿದೆ. ಇದರಲ್ಲಿ ಯಾರೇ ಏನೇ ತಪ್ಪು ಮಾಡಿದ್ರೂ ಅವರಿಗೆ ಕಠಿಣ ಶಿಕ್ಷೆ ನೀಡಲಾಗೋದು ಅಂತಾ ಹೇಳಿದ್ದಾರೆ.
ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದಂತೆ ಸಿಇಟಿ ರ್ಯಾಂಕಿಂಗ್ನ ಪರಿಷ್ಕೃತ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶನಿವಾರ ಬಿಡುಗಡೆ ಮಾಡಿದೆ. ಜುಲೈ 30ರಂದು ಹೊರಡಿಸಿದ್ದ ರ್ಯಾಂಕಿಂಗ್ ಪಟ್ಟಿ ಮತ್ತು ಈಗಿನ ಪರಿಷ್ಕೃತ ಪಟ್ಟಿಯಲ್ಲಿ ಮೊದಲ 500 ರ್ಯಾಂಕಿಂಗ್ನಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
CM Basavaraj Bommai : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ಮೈಸೂರಿಗೆ ತೆರಳಿದರು. ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಖ್ಯಾತ ಚಿತ್ರ ನಟ ಯಶ್ ಅವರ ಜೊತೆ ಹೆಲಿ ಕ್ಯಾಪ್ಟರ್ ನಲ್ಲಿ ಮೈಸೂರಿಗೆ ತೆರಳಿದರು.
ದಾವಣಗೆರೆಯಲ್ಲಿ ಸಿದ್ದರಾಮಯ್ಯ 75ನೇ ಜನ್ಮದಿನ ಅಮೃತಮಹೋತ್ಸವ ವಿಚಾರವಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಶುಭಕೋರುತ್ತಲೇ ಟಾಂಗ್ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.