ಕಾಂಗ್ರೆಸಿನ 68 ಶಾಸಕರಲ್ಲಿ 48 ಶಾಸಕರು, ಬಿಜೆಪಿಯ 15 ಶಾಸಕರ ಪೈಕಿ 14 ಶಾಸಕರು, ಛತ್ತೀಸ್ಗಢ್ ಜನತಾ ಕಾಂಗ್ರೆಸ್ ನ ಐದು ಶಾಸಕರು ಮತ್ತು ಬಹುಜನ ಸಮಾಜವಾದಿ ಪಕ್ಷದ ಇಬ್ಬರು ಶಾಸಕರು ಕೋಟ್ಯಾಧಿಪತಿಗಳಾಗಿದ್ದಾರೆ.
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮಧ್ಯಪ್ರದೇಶದ ಫಲಿತಾಂಶವೊಂದನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳ ಫಲಿತಾಂಶವನ್ನು ಬೇಗನೆ ಘೋಷಣೆ ಮಾಡಲಾಗಿತ್ತು. ಆದರೆ ಮಧ್ಯಪ್ರದೇಶದ ಚುನಾವಣೆ ಫಲಿತಾಂಶ ಬೇಗನೆ ಘೋಷಣೆಯಾಗದಿರುವುದು ಹಲವರಲ್ಲಿ ಗೊಂದಲ ಮೂಡಿಸಿತ್ತು. ಕಾರಣ ಮತ ಎಣಿಕೆ ಪ್ರಕ್ರಿಯೆ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಹಾವು ಏಣಿ ಆಟದಂತೆ ಅದರ ಸ್ಥಾನಗಳು ಏರಿಳಿತವನ್ನು ಕಂಡಿದ್ದವು.
ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ನೀಡಿರುವ ಪ್ರದರ್ಶನಕ್ಕೆ ಸಂತಸ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ ಈ ಗೆಲುವು ಸಣ್ಣ ಉದ್ದಿಮೆದಾರರು,ರೈತರು,ಹಾಗೂ ಜನಸಾಮಾನ್ಯರಿಗೆ ದೊರಕಿದಂತಹ ಗೆಲುವು ಎಂದು ಬಣ್ಣಿಸಿದರು.
ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ಪಂಚ ರಾಜ್ಯಗಳ ಚುನಾವಣೆಯಲ್ಲಿನ ಫಲಿತಾಂಶಕ್ಕೆ ಪ್ರತಿಕ್ರಿಯಿಸಿಸುತ್ತಾ ಕೊನೆಗೂ ಸತ್ಯವೇ ಗೆದ್ದಿದೆ ಸೋತವರಿಗೆ ಭಾವಪೂರ್ಣ ಸಂತಾಪಗಳು ಎಂದು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ದೇಶದ ಜನರೇ ಯಾವಾಗಲೂ ಪ್ರಜಾಪ್ರಭುತ್ವದ ಮ್ಯಾನ್ ಆಫ್ ದಿ ಮ್ಯಾಚ್ ಆಗಿರುತ್ತಾರೆ ಎಂದು ತಿಳಿಸಿದ್ದಾರೆ.
ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಫಲಿತಾಂಶ ಇಂದು ಹೊರಬೀಳಲಿದೆ. ಕೇಂದ್ರದ ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷಗಳು ಈ ಚುನಾವಣೆಯನ್ನು ತಮ್ಮದೇ ಆದ ದೃಷ್ಟಿಕೋನದಲ್ಲಿ ನೋಡುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.