Lok Sabha Election 2024: ಲೋಕಸಭೆ ಚುನಾವಣೆ ಮುಗಿಯುವವರೆಗೂ ಮನೆಮನೆಗೆ ತೆರಳಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೆಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಹೋಗುವ ಸಂಕಲ್ಪ ಮಾಡಿದ್ದಾರೆ. ನಾವೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಬಸವರಾಜ ಬೊಮ್ಮಾಯಿಯವರನ್ನು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರ ಶಿವಮೊಗ್ಗದಲ್ಲಿನ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಹೆಸರನ್ನು ನಾಮಕರಣ ಮಾಡಲು ನಿರ್ಧಿಸಿದ ಬೆನ್ನಲೇ ಈಗ ಬಿಎಸ್ವೈ ಅವರು ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಬೇಡ, ಆದರೆ ತಮ್ಮ ಹೆಸರಿನ ಬದಲಾಗಿ ನಾಡಿಗೆ ಕೊಡುಗೆ ನೀಡಿರುವ ಇತರ ಮಹನೀಯರ ಹೆಸರನ್ನು ನಾಮಕರಣ ಮಾಡಬೇಕೆಂದು ಹೇಳಿದ್ದಾರೆ.
ಮೊದಲ ಅಲೆಯ ಅನುಭವ ಇದ್ದರೂ, ಎರಡನೇ ಅಲೆ ಜನವರಿಯಲ್ಲಿ ಬರುವುದಾಗಿ ಮಾಹಿತಿ ಇದ್ದರೂ ಈ ಸರಕಾರಗಳು ಎಚ್ಚೆತ್ತುಕೊಳ್ಳಲಿಲ್ಲ. ಎಲ್ಲರಿಗೂ ಲಸಿಕೆ ಕೊಡುವುದೇ ಇದಕ್ಕೆ ಪರಿಹಾರ ಎಂದು ತಜ್ಞರು ಹೇಳುತ್ತಿದ್ದಾರೆ. ನರೇಂದ್ರ ಮೋದಿ ಹಾಗೂ ಯಡಿಯೂರಪ್ಪನವರ ಸರ್ಕಾರ ನಿದ್ರಾವಸ್ಥೆಯಲ್ಲಿವೆ. ಹೀಗಾಗಿ ಯಾವುದೇ ಪೂರ್ವ ಸಿದ್ಧತೆ ಮಾಡಿಕೊಳ್ಳಲಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಟೀಕಾ ಪ್ರಹಾರ ನಡೆಸಿದ್ದಾರೆ.
ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಕರೋನವೈರಸ್ (ಸಿಒವಿಐಡಿ -19) ಕಾರಣದಿಂದಾಗಿ ಬುಧವಾರ ಮೊದಲ ಸಾವಿನ ಪ್ರಕರಣ ದೃಢಪಟ್ಟ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಒಂದು ವಾರಗಳ ಕಾಲ ಎಲ್ಲ ಮಾಲ್ ಗಳು, ಸಿನಿಮಾ ಹಾಲ್, ಪಬ್, ಮದುವೆ ಸಮಾರಂಭ ಹಾಗೂ ಇತರ ಸಾಮೂಹಿಕ ಕಾರ್ಯಕ್ರಮಗಳನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.