Wrestlers protest: ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳ ಪ್ರತಿಭಟನೆಯ ನಡುವೆ ಬಿಜೆಪಿ ಸಂಸದ ಪ್ರೀತಮ್ ಮುಂಡೆ ಅವರು ಯಾವುದೇ ಮಹಿಳೆ ನೀಡಿದ ಯಾವುದೇ ದೂರನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
Wrestler Protest: ಭಾನುವಾರ ಪ್ರಧಾನಿ ಮೋದಿ ಉದ್ಘಾಟಿಸಿದ ಹೊಸ ಸಂಸತ್ತಿನ ಕಟ್ಟಡದಿಂದ ಕೇವಲ ಮೂರು ಕಿಲೋಮೀಟರ್ ದೂರದಲ್ಲಿರುವ ಜಂತರ್ ಮಂತರ್ನಲ್ಲಿ ಪೊಲೀಸರು ಮತ್ತು ಕುಸ್ತಿಪಟುಗಳ ನಡುವೆ ಸಂಭವಿಸಿದ ಘರ್ಷಣೆಯ ಬಳಿಕ ಖ್ಯಾತ ಕುಸ್ತಿಪಟು ಭಜರಂಗ್ ಪುನಿಯಾ ಮತ್ತು ಅಸ್ಥಾನಾ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಹೊಸ ಸಂಸತ್ ಭವನದತ್ತ ಸಾಗಲು ಯತ್ನಿಸುತ್ತಿದ್ದರು ಎಂದು ಆಪಾದಿಸಲಾಗಿದೆ. ಈ ಹಿನ್ನೆಲೆ ಪೊಲೀಸರು ಅನೇಕ ಕುಸ್ತಿಪಟುಗಳನ್ನು ಬಂಧಿಸಿದ್ದಾರೆ.
Wrestlers Protest in Delhi: ಜಂತರ್ ಮಂತರ್ ನಲ್ಲಿ 109 ಪ್ರತಿಭಟನಾಕಾರರು ಸೇರಿದಂತೆ ದೆಹಲಿಯಾದ್ಯಂತ 700 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ವಿನೇಶ್ ಫೋಗಟ್, ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್ ಐ ಆರ್ ದಾಖಲಿಸಲು ದೆಹಲಿ ಪೊಲೀಸರು ಏಳು ದಿನಗಳನ್ನು ತೆಗೆದುಕೊಂಡರು, ಆದರೆ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಲು ಏಳು ಗಂಟೆಗಳನ್ನೂ ತೆಗೆದುಕೊಂಡಿಲ್ಲ ಎಂದು ಹೇಳಿದರು
ಐಎಎನ್ಎಸ್ ಸುದ್ದಿ ಸಂಸ್ಥೆಗೆ ತಿಳಿಸಿರುವ ಮೂಲಗಳ ಪ್ರಕಾರ ಭಜರಂಗ್ ಪುನಿಯಾ ಅವರಿಗೆ ಕುಸ್ತಿ ಕ್ಷೇತ್ರದಲ್ಲಿನ ಸತತ ಪ್ರದರ್ಶನದಿಂದಾಗಿ ಅವರಿಗೆ ಪ್ರಶಸ್ತಿ ನೀಡಲಾಗುವುದು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.