ಇತ್ತೀಚೆಗೆ ಬಿಡಿಎ ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್ ಅವರು ಸದರಿ ಜಾಗ ಸೇರಿದಂತೆ ಇನ್ನಿತರೆ ಒತ್ತುವರಿ ಮತ್ತು ಬಿಡಿಎ ಜಾಗವನ್ನು ಕಬ್ಜ ಮಾಡಿಕೊಂಡಿರುವ ಪ್ರದೇಶಗಳಿಗೆ ಭೇಟಿ ನೀಡಿ, ಕೂಡಲೇ ಇಂತಹ ಜಾಗಗಳನ್ನು ಮರುವಶಕ್ಕೆ ಪಡೆದುಕೊಳ್ಳಬೇಕೆಂದು ಬಿಡಿಎ ಅಧಿಕಾರಿಗಳು ಮತ್ತು ಎಂಜಿನಿಯರ್ ಗಳಿಗೆ ಸೂಚನೆ ನೀಡಿದ್ದರು.
ಬೆಂಗಳೂರು ಮತದಾರರ ಮಾಹಿತಿಗೆ ಕನ್ನ ಆರೋಪ ಇಂದು ದೆಹಲಿಗೆ ರಾಜ್ಯ ಕಾಂಗ್ರೆಸ್ ನಾಯಕರು ಭೇಟಿ ಕೇಂದ್ರ ಚುನಾವಣಾ ಆಯೋಗಕ್ಕೆ ಲಿಖಿತ ದೂರು DKS ನೇತೃತ್ವದಲ್ಲಿ ಚುನಾವಣಾ ಆಯೋಗಕ್ಕೆ ದೂರು ನಾಳೆ ದೂರು ಕೊಡಲಿರುವ ಕಾಂಗ್ರೆಸ್ ನಾಯಕರು
ಬೆಂಗಳೂರಿನ ಬಸವನಗುಡಿಯಲ್ಲಿ ನಿನ್ನೆಯಿಂದ 3 ದಿನಗಳ ಕಾಲ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದ್ದು, ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಪರಿಷೆಗೆ ಚಾಲನೆ ನೀಡಿದ್ದಾರೆ.. ಮೊದಲ ದಿನವೇ ಕಡಲೆಕಾಯಿ ಪರಿಷೆಗೆ ಜನ ಸಾಗರವೇ ಹರಿದು ಬಂದಿದೆ.
ಚಿಲುಮೆ ಕಚೇರಿ ಮೇಲೆ ಈಗಾಗಲೇ ಕೇಂದ್ರ ವಿಭಾಗ ಪೊಲೀಸರು ದಾಳಿ ನಡೆಸಿ ಕೆಲ ದಾಖಲೆಗಳನ್ನ ಸೀಜ್ ಮಾಡಿದ್ದಾರೆ. ಇನ್ನು ಮುಖ್ಯವಾಗಿ ಈ ದಾಖಲಾತಿಗಳಲ್ಲಿ ಸರ್ಕಾರ ಪ್ರಭಾವಿ ಸಚಿವರೊಬ್ಬರು ಸಹಿ ಮಾಡಿರುವ ಚೆಕ್ ಗಳು, ಬ್ರೋಚರ್ಸ್ ಹಾಗೂ ಎನ್ವಲಪ್ ಗಳು ಪತ್ತೆಯಾಗಿದ್ದು ಸಾಕಷ್ಟು ಅನುಮಾನ ಮೂಡಿಸಿದೆ.
Engineering students shouting Pak slogans in college: ದಾವಣೆಗೆರೆ ಮೂಲದ ರಿಯಾ (18), ಮುಂಬೈ ಮೂಲದ ಆರ್ಯನ್ (18) ಮತ್ತು ಆಂಧ್ರಪ್ರದೇಶದ ಮೂಲದ ದಿನಕರ್ (17) ಮೂರು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಹಿನ್ನೆಲೆ ಹಲಸೂರು ಗೇಟ್ ಪೊಲೀಸರು ಮಲ್ಲೇಶ್ವರದಲ್ಲಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ದಿ ಸಂಸ್ಥೆ ಮೇಲೆ ನಗರ ಕೇಂದ್ರ ವಿಭಾಗದ ಪೊಲೀಸರು ದಾಳಿ ಮಾಡಿದ್ದಾರೆ.
ನಮ್ಮ ನಗರಗಳಲ್ಲಿ ತ್ಯಾಜ್ಯ, ಮಾಲಿನ್ಯ, ಧೂಳು, ಇಂಗಾಲದ ಕಾರುವಿಕೆ ಎಲ್ಲವೂ ಅಂಕೆ ಮೀರಿವೆ. ಇವುಗಳನ್ನು ಬಗೆಹರಿಸಲು ಎಷ್ಟೇ ಪ್ರಯತ್ನಪಟ್ಟರೂ ಯಶಸ್ವಿಯಾಗಿಲ್ಲವೆಂದು ಬಿಬಿಎಂಪಿ ವಿಶೇಷ ಆಯುಕ್ತ ಡಾ.ತ್ರಿಲೋಕಚಂದ್ರ ಹೇಳಿದ್ದಾರೆ.
Bangalore Crime : ಸಿಲಿಕಾನ್ ಸಿಟಿಯಲ್ಲೊಬ್ಬ ಖತರ್ನಾಕ್ ಕಳ್ಳನೊಬ್ಬ ಪೆಟ್ರೋಲ್ ಬಂಕ್ ಗಳನ್ನು ಟಾರ್ಗೆಟ್ ಮಾಡುತ್ತಿದ್ದಾನೆ. ಮೂರ್ನಾಲ್ಕು ದಿನ ಪೆಟ್ರೋಲ್ ಬಂಕ್ ಬಳಿ ವಾಚ್ ಮಾಡಿ ನಂತರ ಕಿಲಾಡಿ ಕೆಲಸ ಮಾಡುತ್ತಿದ್ದಾನೆ.
ಬೆಂಗಳೂರಿನಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ಅವರ ಪ್ರದರ್ಶನವನ್ನು ಹಿಂದೂ ಬಲಪಂಥೀಯ ಗುಂಪುಗಳ ಪ್ರತಿಭಟನೆಯ ನಂತರ ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಯಿತು. ಇದಾದ ನಂತರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒ'ಬ್ರೇನ್ ಅವರು ವೀರ್ ದಾಸ್ ಅವರನ್ನು ಕೋಲ್ಕತ್ತಾಕ್ಕೆ ಆಹ್ವಾನಿಸಿದ್ದಾರೆ.
Cooperative Bank : ರಾಜಧಾನಿಯಲ್ಲಿ ಮತ್ತೊಂದು ಸೌಹಾರ್ದ ಬ್ಯಾಂಕ್ ನ ಕರ್ಮಕಾಂಡ ಬಯಲಾಗಿದೆ. ಠೇವಣಿದಾರರ ಹಣವನ್ನ ದುರ್ಬಳಕೆ ಮಾಡಿಕೊಂಡು ಕುರುಹಿನ ಶೆಟ್ಟಿ ಸೌಹಾರ್ದ ಸಹಕಾರ ಬ್ಯಾಂಕ್ ನಲ್ಲಿದ್ದ ಕೋಟ್ಯಂತರ ರೂಪಾಯಿ ಸಾಲ ನೀಡಿ ಆರ್ಥಿಕ ದಿವಾಳಿಗೆ ನೂಕಿ ಅಕ್ರಮವೆಸಗಿದ್ದ ಆರೋಪದಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸೇರಿ ಐವರನ್ನು ಕೆಂಪೇಗೌಡನಗರ ಪೊಲೀಸರು ಬಂಧಿಸಿದ್ದಾರೆ.
ಗೂಂಡಾಗಳಂತೆ ನಡು ರಸ್ತೆಯಲ್ಲಿ ವರ್ತಿಸಿದ ಸಬ್ ಇನ್ಸ್ಪೆಕ್ಟರ್. ಸಬ್ ಇನ್ಸ್ಪೆಕ್ಟರ್ ಗೂಂಡಾ ವರ್ತನೆಯಿಂದ ಬೇಸತ್ತ ನಿವಾಸಿಗಳು. ನಡು ರಸ್ತೆಯಲ್ಲಿ ಅಪಾರ್ಟ್ಮೆಂಟ್ ನಿವಾಸಿ ಮೇಲೆ ಹಲ್ಲೆ. ಬೆಂಗಳೂರಿನ ಚೂಡಸಂದ್ರದ ಬಳಿ ಘಟನೆ.
ನಿಮ್ಮ ಮನೆಯಲ್ಲಿ ಯಾರಾದರೂ ಮೃತಪಟ್ಟಿದ್ದಾರೆಯೇ ಅಥವಾ ನಿಮಗೆ ಅರೋಗ್ಯ ಸರಿಯಿಲ್ಲವೇ..ಹಾಗಾದರೆ ಮಾತ್ರ ರಜೆ ತೆಗೊಳ್ಳಿ. ಸೂಕ್ತ ಕಾರಣವಿಲ್ಲದೆ ರಜೆ ಕೇಳಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಆದೇಶ ಹೊರಡಿಸಿದ್ದಾರೆ.
ಜಾಗತಿಕ ಉದ್ದಿಮೆಗಳಿಗೆ ಬೆಂಗಳೂರೇ ಗಮ್ಯವಾಗಿದೆ. ಎಲ್ಲಾ ಜಾಗತಿಕ ಉದ್ದಿಮೆಗಳ ಹಾದಿಗಳು ಬೆಂಗಳೂರಿಗೆ ಬಂದು ಸೇರುತ್ತಿವೆ. ನಾಳೆಯಿಂದ ಪ್ರಾರಂಭವಾಗುವ ಮೂರು ದಿನಗಳ ಇನ್ವೆಸ್ಟ್ ಕರ್ನಾಟಕ ಸಮ್ಮೇಳನ ಅತ್ಯಂತ ಯಶಸ್ವಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.