ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ತೀರ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Basavaraj Bommai: ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಕಣ ಸಿದ್ದವಾಗಿದೆ. ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ.ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದರು.
ಕಂದಾಯ ಸಚಿವರು ಕೊಡಗು ಮತ್ತು ಮಂಗಳೂರಿಗೆ ಹೋಗಿ ಬಂದಿದ್ದಾರೆ. ಇಡೀ ಸರ್ಕಾರವೇ ಈ ಬಗ್ಗೆ ಕಾರ್ಯನಿರ್ವಹಿಸುತ್ತಿದೆ. ನಾನೂ ಸಹ ಇಂದು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯವಿರುವ ಸೂಚನೆ ಸಲಹೆಗಳನ್ನುನೀಡಲಿದ್ದೇನೆ. ಕೊಡಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಾಣ ಮತ್ತು ಆಸ್ತಿ ಹಾನಿಯಾಗಿರುವ ಪ್ರದೇಶಗಳಲ್ಲಿ ಜನರ ಮನ ಓಲೈಸುವ ಕೆಲಸ ಮಾಡುತ್ತೇವೆ. ಸೆಸ್ಮಿಕ್ ವಲಯಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗುತ್ತಿದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.