ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆಯಾಗುತ್ತದೆ. ಈ ಸಂಬಂಧ ಹಣಕಾಸಿನ ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆಯಾಗಿದೆ. ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು.
ಅಸೆಂಬ್ಲಿ ಹಾಲ್ ನಲ್ಲಿ ಸಾವರ್ಕರ್ ಫೋಟೋ ಹಾಕಿದ್ದನ್ನು ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸುವರ್ಣಸೌಧದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸುವರ್ಣಸೌಧದ ವಿಐಪಿ ಗೇಟ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಯುತ್ತಿದೆ.
ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಿದೆ. ರಾಜ್ಯವನ್ನು ಮುನ್ನಡೆಸುವ ದಿಸೆಯಲ್ಲಿ ಹತ್ತು ಹಲವಾರು ವಿಷಯಗಳ ಬಗ್ಗೆ ಚರ್ಚೆಯಾಗಬೇಕಿದೆ. ಹಲವಾರು ಕಾನೂನುಗಳ ರಚನೆಗಳ ಉದ್ದೇಶದಿಂದ ಕಲಾಪ ನಡೆಸಲಾಗುತ್ತಿದೆ ಎಂದರು.
ಜೆ.ಪಿ. ನಡ್ಡಾ ನೇತೃತ್ವದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ಬೆನ್ನಲ್ಲೇ ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ನಿಂದ ರಣತಂತ್ರ. ಇಂದು ʻಕೈʼನಿಂದ ಕುಷ್ಟಗಿಯಲ್ಲಿ ಸಾಧನಾ ಸಮಾವೇಶ. ಬಿಜೆಪಿ ಸಮಾವೇಶ ನಡೆಸಿದ ಮರು ದಿನವೇ ಸಮಾವೇಶ.
ʻಕೈʼ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆ ವಿಚಾರ. ತಡ ಯಾಕೆ, ತಕ್ಷಣವೇ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲಿ. ಇವರು ಆಪರೇಷನ್ ಲೋಟಸ್ ಎಕ್ಸ್ಪರ್ಟ್ ಎಂದು ಸದಾಶಿವನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
46 ಸಾವಿರ ನೇಕಾರ ಕುಟುಂಬದ ವಿದ್ಯಾರ್ಥಿಗಳ ದಾಖಲೆಗಳನ್ನು ಹದಿನೈದು ದಿನದೊಳಗೆ ಪಡೆದು ಪಟ್ಟಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಗಳು, ವಿದ್ಯಾರ್ಥಿಗಳಿಗೆ ಕೂಡಲೇ ವಿದ್ಯಾನಿಧಿಯನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದರು. ಮಕ್ಕಳಿಂದ ಯಾವುದೇ ರೀತಿಯ ಅರ್ಜಿಯನ್ನು ಪಡೆಯುವುದಲ್ಲ. ವಿದ್ಯಾನಿಧಿ ಮಕ್ಕಳ ಹಕ್ಕು ಎಂದು ತಿಳಿಸಿದರು.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಲಿದ್ದಾರೆ.. ಸಭೆಯಲ್ಲಿ ಸುಪ್ರೀಂ ವರದಿ ಬಗ್ಗೆ ಗೃಹ ಸಚಿವರಿಗೆ ಸಿಎಂ ಮಾಹಿತಿ ನೀಡಿದ್ದಾರೆ.
ಕೇಂದ್ರ ಗೃಹ ಸಚಿವರು ಗಡಿವಿವಾದ ದ ಬಗ್ಗೆ ಚರ್ಚಿಸಲೆಂದೇ ಎರಡೂ ರಾಜ್ಯ ಗಳ ಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆದಿದ್ದಾರೆ. ಅಲ್ಲಿ ನಮ್ಮ ನಿಲುವಿನ ಬಗ್ಗೆ ಹೇಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಮ್ಮ ಕ್ಲಿನಿಕ್ ಗಳನ್ನು ಉದ್ಘಾಟಿಸಲಿದ್ದಾರೆ. ಆರಂಭದಲ್ಲಿ 114 ಕ್ಲಿನಿಕ್ಗಳು ಏಕಕಾಲಕ್ಕೆ ಲೋಕಾರ್ಪಣೆಯಾಗಲಿದೆ. ರಾಜ್ಯದಲ್ಲಿ ಒಟ್ಟು 438 ನಮ್ಮ ಕ್ಲಿನಿಕ್ಗಳನ್ನು ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದ್ದು, ಜನವರಿ ಅಂತ್ಯಕ್ಕೆ ಎಲ್ಲವೂ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.
CM Bommai on Controversial graffiti: ಈ ಸಂಬಂಧ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, “ಶಿವಮೊಗ್ಗದಲ್ಲಿ ಪಿಎಫ್ಐ ಅಂಗಸಂಸ್ಥೆ ಸಿಎಫ್ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸೂಚನೆ ನೀಡಲಾಗಿದೆ” ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.