ವಿದ್ಯಾರ್ಥಿ ಜೀವನ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯ. ಶಾಲಾ ಶಿಕ್ಷಣದೊಂದಿಗೆ ನಮ್ಮ ಆಡಳಿತ ವ್ಯವಸ್ಥೆ, ರಾಜಕೀಯ ಪದ್ದತಿಗಳನ್ನು ಅರ್ಥೈಸಿಕೊಳ್ಳಬೇಕು. ವಿಧಾನಮಂಡಲ ಅಧಿವೇಶನವು ವಿದ್ಯಾರ್ಥಿಗಳು ಸೇರಿದಂತೆ ಅಧಿವೇಶನಕ್ಕೆ ಆಗಮಿಸುವ ಎಲ್ಲರಿಗೂ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವದ ಜ್ಞಾನ ನೀಡುತ್ತದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು.
“ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಮೋಡಬಿತ್ತನೆ ಮಾಡುವ ಬಗ್ಗೆ ನಾನು ಸಕಾರಾತ್ಮಕ ಭಾವನೆ ಹೊಂದಿದ್ದು, ಈ ವಿಚಾರವಾಗಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.
ಬರಗಾಲಕ್ಕೆ ತುತ್ತಾಗಿ ತೀವ್ರ ಸಂಕಷ್ಟದಲ್ಲಿರುವ ಕರ್ನಾಟಕದ ರೈತರಿಗೆ ಪರಿಹಾರ ನೀಡಬೇಕೆಂದು ತಿಂಗಳುಗಳಿಂದ ಮನವಿ ಸಲ್ಲಿಸಿ ಒತ್ತಾಯಿಸುತ್ತಿದ್ದರೂ ಇಲ್ಲಿಯ ವರೆಗೆ ಪೈಸೆ ಹಣವನ್ನೂ ನೀಡದ ಪ್ರಧಾನಿ ನರೇಂದ್ರ ಮೋದಿ ಅವರು ಕೀನ್ಯಾ ದೇಶದ ಕೃಷಿ ಕ್ಷೇತ್ರದ ಆಧುನೀಕರಣಕ್ಕಾಗಿ 250 ಮಿಲಿಯನ್ ಡಾಲರ್ಗಳಷ್ಟು ನೆರವು ನೀಡಿರುವುದನ್ನು ನೋಡಿದಾಗ ಸಹಜವಾಗಿಯೇ ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾಕೆ ಇಷ್ಟೊಂದು ಅಸಡ್ಡೆ ಎಂಬ ಪ್ರಶ್ನೆ ಕೇಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಆರ್ ವಿ ದೇಶಪಾಂಡೆ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿರುವ ಹಿನ್ನಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಭಿನಂದನಾ ಭಾಷಣ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯ ವಯಸ್ಸಿನ ಬಗ್ಗೆ ಚರ್ಚೆ ಎಲ್ಲರ ಗಮನ ಸೆಳೆಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.