ಕರ್ನಾಟಕದಲ್ಲಿ ಯಡಿಯೂರಪ್ಪ ಇಲ್ಲದಿದ್ದರೆ ಬಿಜೆಪಿ ಸರ್ವನಾಶ ಆಗಲಿದೆ. ನಳೀನ್ ಕುಮಾರ್ ಕಟೀಲ್, ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಹೊರಟಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸ್ಪೀಕರ್ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡುವುದಾಗಿ ಹೇಳಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೆಲವೇ ಕ್ಷಣಗಳಲ್ಲಿ ಟ್ವೀಟ್ ಡಿಲೀಟ್ ಮಾಡಿದ್ದಾರೆ.
ವಿಜಯದಶಮಿಯ ಅಂಗವಾಗಿ ಮಂಗಳವಾರ ನಡೆಯುವ ಜಂಬೂ ಸವಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದು, ಮೈಸೂರು ಅರಮನೆಯ ಉತ್ತರ ದ್ವಾರದಲ್ಲಿ ಮಧ್ಯಾಹ್ನ 2.15 ರಿಂದ 2.58 ರ ನಡುವೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜ ಪೂಜೆ ನೆರವೇರಿಸಲಿದ್ದಾರೆ.
ರಾಜ್ಯದಲ್ಲಿ ಪ್ರವಾಹದಿಂದ ಉಂಟಾದ ಅಂದಾಜು ನಷ್ಟ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ. ರಾಜ್ಯದ ಪ್ರಸ್ತಾವ ಮತ್ತು ಕೇಂದ್ರ ಪರಿಶೀಲನಾ ತಂಡ ಸಲ್ಲಿಸಿರುವ ವರದಿ ತಾಳೆಯಾಗುತ್ತಿಲ್ಲ ಎಂದು ಹೇಳಿ ಪರಿಶೀಲಿಸಲು ತಿಳಿಸಿದೆ ಎಂದು ಸಿಎಂ ಹೇಳಿದ್ದಾರೆ.
ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ನರೇಂದ್ರ ಮೋದಿ ನೇತೃತ್ವದ ಸರಕಾರಕ್ಕಿಲ್ಲ. ನ್ಯಾಯಬದ್ಧ ಪರಿಹಾರ ಕೇಳಿ ವರದಿ ಸಲ್ಲಿಸುವ ಯೋಗ್ಯತೆ ನಿಮಗೂ ಇಲ್ಲ. ಆರ್ಥಿಕವಾಗಿ ಮಾತ್ರವಲ್ಲ, ಬೌದ್ದಿಕವಾಗಿಯೂ ನಿಮ್ಮ ಸರ್ಕಾರ ದಿವಾಳಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಕ್ಕೆ ನೆರೆಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಂದಿಸಲಿದ್ದು, ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಪರಿಹಾರ ಬಿಡುಗಡೆಯಾಗಲಿದೆ ಎಂದು ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಯಡಿಯೂರಪ್ಪನವರೇ, ನಿಮಗೆ ಹಾಗೂ 25 ಬಿಜೆಪಿಯ ಸಂಸದರಿಗೆ ಪ್ರಧಾನಮಂತ್ರಿಗಳ ಜೊತೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯ ಇಲ್ಲ ಎಂದಾದರೆ ನಾವೂ ನಿಮ್ಮ ಜೊತೆ ದೆಹಲಿಗೆ ಬರುತ್ತೇವೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಮ್ಮ ಕಾಲದ ಕ್ರಾಂತಿಕಾರಿ ಎಸ್ಸಿಪಿ-ಟಿಎಸ್ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ಹೊರಟರೆ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ ತುರ್ತು ಪರಿಹಾರಕ್ಕೆ ಅಗತ್ಯ ಹಣಕಾಸಿನ ನೆರವು ಒದಗಿಸಿದೆ. ಆದರಿಂದ ಪ್ರಧಾನಿ ಮೋದಿ ಬಳಿ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಅಗತ್ಯ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
'ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತದೆ' ಎಂಬ ಮಾತೊಂದಿತ್ತು. ಯಡಿಯೂರಪ್ಪ ಹೆಸರಿನ ಹಿಂದೆ 'ಹೋರಾಟಗಾರ' ಎಂಬ ವಿಶೇಷಣವನ್ನು ಸೇರಿಸಲಾಗುತ್ತಿತ್ತು. ಬಲ್ಲವರು, ಬಗಿಲಲ್ಲಿರುವವರು 'ಛಲದಂಕ ಮಲ್ಲ' ಎಂಬ ಬಿರುದನ್ನು ನೀಡಿದ್ದರು.
ಸೆಪ್ಟೆಂಬರ್ 29ರಂದು ಬೆಳಿಗ್ಗೆ 9 ಗಂಟೆಗೆ ಚಾಮುಂದೆಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ದಸರಾ ಮಹೋತ್ಸವದ ಉದ್ಘಾಟನೆ ನೆರವೇರಲಿದ್ದು, ಅಕ್ಟೋಬರ್ 8ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.