ಕಾಂಗ್ರೆಸ್ ಗೆ ನಾಯಕತ್ವವೇ ಇಲ್ಲ, ಕಾಂಗ್ರೆಸ್ ಗೆ ಭವಿಷ್ಯ ಇಲ್ಲ. ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ. ರಾಷ್ಟ್ರೀಯ ಅಧ್ಯಕ್ಷರಾಗಿರುವ
ಮಲ್ಲಿಕಾರ್ಜುನ ಖರ್ಗೆ ಅವರಿಗೂ ಕೂಡ ವಯಸ್ಸಾಗಿದೆ. 75 ವರ್ಷ ಆದವರು ರಾಜಕೀಯದಿಂದ ನಿವೃತ್ತಿ ಆಗಲಿ. ಅವರ ರಾಷ್ಟ್ರೀಯ ಅಧ್ಯಕ್ಷರು ಕೂಡ 75 ವರ್ಷ ಆದವರು ಎಲ್ಲರೂ ರಾಜಕೀಯ ನಿವೃತ್ತಿ ಪಡೆಯಬೇಕು ಎಂದರು.
ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ವಿತರಿಸುವ ಟೂಲ್ಕಿಟ್ ಖರೀದಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಜನರನ್ನು ವಂಚಿಸುತ್ತಿರುವ ಸಚಿವ ಅಶ್ವಥ್ ನಾರಾಯಣ್ ರವರನ್ನು ತಕ್ಷಣವೇ ವಜಾಗೊಳಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆಗ್ರಹಿಸಿದರು.
ರಾಜಕಾರಣದಲ್ಲಿ ಪ್ರತಿಭಾವಂತರು ಮತ್ತು ಅರ್ಹರ ಅಪಾರ ಕೊರತೆ ಇದ್ದು, ದೊಡ್ಡ ಶೂನ್ಯ ಸೃಷ್ಟಿಯಾಗಿದೆ. ಆದ್ದರಿಂದ ಯುವ ಉದ್ಯಮಿಗಳು ಆರ್ಥಿಕ ಸಮೃದ್ಧಿಯನ್ನು ಸಾಧಿಸಿದ ಮೇಲೆ ರಾಜಕೀಯಕ್ಕೆ ಧುಮುಕಿ, ದೇಶ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಾದ ಅಗತ್ಯ ಸಾಕಷ್ಟಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಕರೆ ಕೊಟ್ಟಿದ್ದಾರೆ.
ರಾಜ್ಯದ ಎಲ್ಲ ಖಾಸಗಿ ವಿಶ್ವವಿದ್ಯಾಲಯಗಳು, ತಮ್ಮ ಮ್ಯಾನೇಜ್ಮೆಂಟ್ ಕೋಟಾದ ಎಂಜಿನಿಯರಿಂಗ್ ಸೀಟುಗಳ ಭರ್ತಿಗೆ ಸದ್ಯ ಪ್ರತ್ಯೇಕವಾದಂತಹ ಪ್ರವೇಶ ಪರೀಕ್ಷೆಗಳನ್ನು ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಹೀಗಾಗಿ ಎಲ್ಲ ವಿ.ವಿಗಳೂ ಒಪ್ಪುವುದಾದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ ರಾಷ್ಟ್ರ ಮಟ್ಟದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಸರ್ಕಾರ ಸಿದ್ಧ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಗುರುವಾರ ಇಲ್ಲಿ ತಿಳಿಸಿದರು.
ಒಂದಷ್ಟು ನಿರೀಕ್ಷೆಗಳ ಒಡ್ಡೋಲಗದ ನಡುವೆ ಬಿಡುಗಡೆಗೆ ಸಜ್ಜಾಗಿರುವ ಹೋಪ್ ಸಿನಿಮಾ ಜುಲೈ 8ರಂದು ರಾಜ್ಯಾದ್ಯಂತ ರಿಲೀಸ್ ಆಗ್ತಿದೆ. ಈಗಾಗ್ಲೇ ಪೋಸ್ಟರ್, ಟೀಸರ್ ಮೂಲಕ ಸದ್ದು ಮಾಡ್ತಿರುವ ಹೋಪ್ ಟ್ರೇಲರ್ ನ್ನು ಸಚಿವ ಅಶ್ವತ್ಥ್ ನಾರಾಯಣ್ ಇಂದು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ಕೋವಿಡ್ ಸೇರಿದಂತೆ ದೇಶಕ್ಕೆ ಸವಾಲೊಡ್ಡಿದ ಹಲವಾರು ಸಂಕಷ್ಟಗಳನ್ನು ಜನಪರ ಕಾಳಜಿಯಿಂದ ಪರಿಹರಿಸಲು ಬಿಜೆಪಿ ಪರಿಶ್ರಮಿಸಿರುವುದನ್ನು ಮತದಾರರು ಬೆಂಬಲಿಸಿರುವುದನ್ನು ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಸ್ಪಷ್ಟ ಮುನ್ನಡೆ ಪಡೆದಿರುವ ಫಲಿತಾಂಶ ಸೂಚಿಸುತ್ತದೆ ಎಂದು ಉನ್ನತ ಶಿಕ್ಷಣ ಹಾಗೂ ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟಿದಾರೆ.
ಭಾರತದ ಐಟಿ ರಾಜಧಾನಿ ಎನಿಸಿಕೊಂಡಿರುವ ಬೆಂಗಳೂರಿನಲ್ಲಿ 12 ಲಕ್ಷಕ್ಕೂ ಹೆಚ್ಚು ಸಾಫ್ಟ್ವೇರ್ ಎಂಜಿನಿಯರುಗಳಿದ್ದು, ಇಷ್ಟು ಅಪಾರ ಸಂಖ್ಯೆಯ ಪ್ರತಿಭಾವಂತರು ಹೀಗೆ ಬೇರೆಲ್ಲೂ ಒಂದೇ ನಗರದಲ್ಲಿ ನೆಲೆಗೊಂಡಿಲ್ಲ. ಇಂತಹ ಪ್ರತಿಭಾ ಸಮೃದ್ಧಿಯಿಂದಾಗಿಯೇ ರಾಜ್ಯದ ರಾಜಧಾನಿಯು ಭಾರತದ ಸಿಲಿಕಾನ್ ಕಣಿವೆಯೆಂಬ ಹೆಗ್ಗಳಿಕೆ ಪಡೆದಿದೆ ಎಂದು ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (C. N. Ashwath Narayan) ಸಂತಸ ವ್ಯಕ್ತಪಡಿಸಿದ್ದಾರೆ.
ಕೊರೋನಾ ನೆಪ ಮಾಡಿಕೊಂಡು ರಾಜ್ಯದಲ್ಲಿ ಹಿಂದೆಂದೂ ಕಂಡು ಕೇಳರಿಯದಂತ ಭ್ರಷ್ಟಾಚಾರ ನಡೆದಿದೆ. ಸ್ವತಃ ವೈದ್ಯರಾಗಿರುವ, ಅಲ್ಲದೇ ಅನೇಕ ವೈದ್ಯಕೀ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾಗಿರುವ ಸಿ.ಅಶ್ವಥ್ ನಾರಾಯಣ ಅವರು ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ 2 ಸಾವಿರ ಕೋಟಿಯಷ್ಟು ಭ್ರಷ್ಟಾಚಾರ ನಡೆಯಲು ಹೇಗೆ ಅನುವು ಮಾಡಿಕೊಟ್ಟರು ಎನ್ನುವುದೇ ಯಕ್ಷ ಪ್ರಶ್ನೆಯಾಗಿದೆ ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ ಸದಂ ಅವರು ವ್ಯಂಗ್ಯವಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.