ಒಂದೇ ಕುಟುಂಬದ ನಾಲ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಓರ್ವ ಮೃತಪಟ್ಟಿರುವ ಧಾರುಣ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ನಡೆದಿದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯು ಕುಟುಂಬಕ್ಕೆ ನೆರವಾದ ಘಟನೆ ಗುಂಡ್ಲುಪೇಟೆ ತಾಲೂಕಿನ ಕಾಳನಹುಂಡಿ ಗ್ರಾಮದಲ್ಲಿ ನಡೆದಿದೆ.
ವೈದ್ಯಕೀಯ ಲೋಕದಲ್ಲಿ ಅಪರೂಪವಾದ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಕಬ್ಬಹಳ್ಳಿ ಸಮುದಾಯದ ಆರೋಗ್ಯ ಕೇಂದ್ರದ ವೈದ್ಯ ಡಾ.ವೆಂಕಟಸ್ವಾಮಿ 2.5 ತಾಸು ಶಸ್ತ್ರಚಿಕಿತ್ಸೆ ನಡೆಸಿ 4.5 ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆದಿದ್ದಾರೆ.
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗದ ವ್ಯಾಪ್ತಿಯ ಮೊಳೆಯೂರು ವಲಯದ ಹಿಡುಗಲಪಂಚೀ ಕೆರೆ ಬಳಿ ನಡೆದಿದೆ.
ಕೊಳ್ಳೇಗಾಲದಿಂದ ಹನೂರಿನ ಒಡೆಯರಪಾಳ್ಯಕ್ಕೆ ತೆರಳುವ ಬಸ್ ನಲ್ಲಿ ಡೋರ್ ಬಳಿ ನಿಂತಿದ್ದ ಮಹಿಳೆಗೆ ಹಿಂದಕ್ಕೆ ಹೋಗಿ ಎಂದು ಕಂಡಕ್ಟರ್ ಹೇಳಿದ್ದಕ್ಕೆ ಮಾತಿಗೆ ಮಾತು ಬೆಳೆದು ಕಂಡಕ್ಟರ್ ಕೆನ್ನೆಗೆ ಮಹಿಳೆ ಬಾರಿಸಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಕುರಿ ಸಾಕಣಿಗೆ ಮಾಡುತ್ತಿದ್ದ ಮಾಲೀಕರು ಕಡು ಬಡವರಾಗಿದ್ದು, ಕುರಿಗಳನ್ನೆ ನಂಬಿ ಜೀವನ ನಡೆಸುತ್ತಿದ್ದರು.ಇದೀಗ 10 ಕುರಿಗಳು ಒಮ್ಮೆಲೆ ಸಾವನ್ನಪ್ಪಿರುವ ಕಾರಣ ಅಪಾರ ನಷ್ಟ ಉಂಟಾಗಿದೆ.ಇದನ್ನು ಗಂಭೀರವಾಗಿ ತೆಗೆದುಕೊಂಡು ಈ ಕೂಡಲೇ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಪುರ ಮಹದೇವಪ್ಪ ಒತ್ತಾಯಿಸಿದ್ದಾರೆ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆದು ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು (Drinking Water for Cattle) ಹಾಗೂ ಮೇವುಗಳ ಪೂರೈಕೆಗೆ ಸಂಬಂಧಪಟ್ಟಂತೆ ಸಂಪರ್ಕಿಸಲು ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.
Lok Sabha Election 2024: ಲಿಂಗ ಸಮಾನತೆ ಹಾಗೂ ಮತದಾನದಲ್ಲಿ ಮಹಿಳೆಯರ ಭಾಗವಹಿಸುವಿಕೆ ಉತ್ತೇಜಿಸಲು 'ಸಖಿ ಸೌರಭ ಶೀರ್ಷಿಕೆಯಡಿ ಮತಗಟ್ಟೆಗಳನ್ನು ವಿಶೇಷವಾಗಿ ಅಲಂಕರಿಸಿ ಮಹಿಳೆಯರನ್ನು ಮತದಾನಕ್ಕೆ ಪ್ರೇರೆಪಿಸಲಾಗಿದ್ದು ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 16 ಸಖಿ ಸೌರಭ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.
ವರಸೆಯಲ್ಲಿ ಸ್ವಂತ ತಂಗಿ ಎಂದು ಗೊತ್ತಿದ್ದರೂ ಸಿದ್ದಮಲ್ಲು ಅಪ್ರಾಪ್ತೆಯನ್ನು ಅಪಹರಿಸಿ ಮದುವೆ ಮಾಡಿಕೊಳ್ಳುವೆ ಎಂದು ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಇದಕ್ಕೂ ಮುನ್ನ, ಇವರಿಬ್ಬರ ಪ್ರೀತಿ ವಿಚಾರ ತಿಳಿದಿದ್ದ ಮಹೇಶ್ ಪ್ರಸಾದ್ ಬಾಲಕಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ.
ಚಾಮರಾಜನಗರದಲ್ಲಿ ಬಿರುಸು ಪಡೆದ ಲೋಕ ಪ್ರಚಾರದ ಅಬ್ಬರ
ಇಂದು ಗಡಿ ಜಿಲ್ಲೆಯಲ್ಲಿ ರೋಡ್ ಶೋ ನಡೆಸಲಿರುವ ವಿಜಯೇಂದ್ರ
ಸಿದ್ದರಾಮಯ್ಯ ರಣವ್ಯೂಹದ ಬಳಿಕ ಕಮಲಕ್ಕೆ ಮತ ಸೆಳೆಯಲು ತಂತ್ರ
ಬೆಳಗ್ಗೆ ಕೊಳ್ಳೇಗಾಲ, ಮಧ್ಯಾಹ್ನ ಹನೂರಿನಲ್ಲಿ ಕಮಲಪಡೆ ಮತಬೇಟೆ
ನಾಮಪತ್ರ ಸಲ್ಲಿಕೆ ವೇಳೆ ಬಾಲರಾಜು ಪರ ರೋಡ್ ಶೋ ನಡೆಸಿದ್ದ ಬಿವೈವಿ
Lok Sabha Election 2024: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು ಹೋದ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.