Champions Trophy former captain dies: ಚಾಂಪಿಯನ್ಸ್ ಟ್ರೋಫಿ ವೇಳೆ ಕ್ರಿಕೆಟ್ ಜಗತ್ತಿನಲ್ಲಿಆಘಾತವೊಂದು ಸಂಭವಿಸಿದೆ. ಬಿಸಿಸಿಐ ದುಃಖದ ಸುದ್ದಿಯನ್ನು ಹಂಚಿಕೊಂಡಿದ್ದು, ಮಾಜಿ ನಾಯಕ ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ICC Champions Trophy: ಉಭಯ ತಂಡಗಳ ಏಕದಿನ ಪಂದ್ಯಗಳ ಮುಖಾಮುಖಿಯ ಅಂಕಿ ಅಂಶ ನೋಡಿದ್ರೆ ಭಾರತವೇ ಮೇಲುಗೈ ಸಾಧಿಸಿದೆ. ಈ ಎರಡೂ ತಂಡಗಳು ಏಕದಿನ ಕ್ರಿಕೆಟ್ನಲ್ಲಿ 41 ಬಾರಿ ಮುಖಾಮುಖಿಯಾಗಿವೆ. ಇವುಗಳಲ್ಲಿ ಭಾರತ 32 ಪಂದ್ಯಗಳನ್ನು ಗೆದ್ದಿದ್ದರೆ, ಬಾಂಗ್ಲಾದೇಶ ಕೇವಲ 8 ಪಂದ್ಯಗಳನ್ನು ಗೆದ್ದಿದೆ.
ICC Men's odi Batting rankings: ಐಸಿಸಿ ಹೊಸ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಭಾರತದ ಶುಭಮನ್ ಗಿಲ್ ನಂಬರ್ ಒನ್ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಬಾಬರ್ ಅಜಮ್ ತಮ್ಮ ನಂಬರ್ ಒನ್ ಸ್ಥಾನವನ್ನ ಕಳೆದುಕೊಂಡಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಮೊದಲ ದಿನವೇ ಈ ದೊಡ್ಡ ಬದಲಾವಣೆ ಕಂಡುಬಂದಿದೆ.
Champions trophy 2025: ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬ್ಯಾಟ್ನಿಂದ ಅದ್ಭುತಗಳನ್ನು ಮಾಡಲು ಸಿದ್ಧರಾಗಿದ್ದಾರೆ. ಈ ಸಮಯದಲ್ಲಿ, ಅನೇಕ ದೊಡ್ಡ ದಾಖಲೆಗಳು ಅವರ ಗುರಿಯ ಮೇಲೆ ಇರುತ್ತವೆ.
India Playing XI against Bangladesh: ರಿಷಭ್ ಪಂತ್ ತಮ್ಮ ಬ್ಯಾಟಿಂಗ್ ಮೂಲಕ ಪಂದ್ಯದ ದಿಕ್ಕನ್ನೇ ಬದಲಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ, ಆದರೆ ರಾಹುಲ್ ಈ ಸ್ವರೂಪದಲ್ಲಿ ಹೆಚ್ಚು ವಿಶ್ವಾಸಾರ್ಹ ಬ್ಯಾಟ್ಸ್ಮನ್. 2023ರ ಏಕದಿನ ವಿಶ್ವಕಪ್ನಲ್ಲಿ ರಾಹುಲ್ ಉತ್ತಮ ಪ್ರದರ್ಶನ ನೀಡಿದರು.
ಈಗ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಲು ಸಜ್ಜಾಗುತ್ತಿರುವ ವಿರಾಟ್ ಕೊಹ್ಲಿ ಈಗ ಬೃಹತ್ ವಿಶ್ವ ದಾಖಲೆಯ ಹೊಸ್ತಿಲಲ್ಲಿದ್ದಾರೆ.36 ವರ್ಷ ವಯಸ್ಸಿನ ಕೊಹ್ಲಿ, ಟೂರ್ನಿಯ ಸಾರ್ವಕಾಲಿಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲು ಕೇವಲ 263 ರನ್ಗಳ ಅವಶ್ಯಕತೆಯಿದೆ.
2025 ರ ಚಾಂಪಿಯನ್ಸ್ ಟ್ರೋಫಿಯ ಬಹುಮಾನದ ಹಣವನ್ನು ಐಸಿಸಿ ಘೋಷಿಸಿದೆ. ಪಂದ್ಯಾವಳಿಯನ್ನು ಗೆಲ್ಲುವ ತಂಡಕ್ಕೆ 2.24 ಮಿಲಿಯನ್ ಯುಎಸ್ ಡಾಲರ್ ಬಹುಮಾನವಾಗಿ ನೀಡಲಾಗುವುದು, ಇದು ಭಾರತೀಯ ರೂಪಾಯಿ ಮೌಲ್ಯದಲ್ಲಿ 19.45 ಕೋಟಿ ರೂ.ಗಳಾಗಿವೆ. ಅದಾಗ್ಯೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಕೆಲವು ಭಾರತೀಯ ಆಟಗಾರರು 2025 ರ ಚಾಂಪಿಯನ್ಸ್ ಟ್ರೋಫಿಯ ಬಹುಮಾನದ ಮೊತ್ತಕ್ಕೆ ಹೋಲಿಸಿದರೆ 2025 ರ ಋತುವಿನಲ್ಲಿ ಹೆಚ್ಚಿನ ಸಂಬಳವನ್ನು ಹೊಂದಿದ್ದಾರೆ.ಈಗ ಆ ಭಾರತೀಯ ಆಟಗಾರರು ಯಾರು ಎನ್ನುವುದನ್ನು ತಿಳಿಯೋಣ ಬನ್ನಿ.
ವಿಶ್ವದ ಅಗ್ರ ಕ್ರಿಕೆಟಿಗರಲ್ಲಿ ಒಬ್ಬರಾದ ಕೇನ್ ವಿಲಿಯಮ್ಸನ್ ಕೂಡ ಫಿಟ್ನೆಸ್ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.ಪಾಕಿಸ್ತಾನದಲ್ಲಿ ನಡೆದ ತ್ರಿಕೋನ ಸರಣಿಯಲ್ಲಿ ಅವರು ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು.ಅವರಿಗೆ 34 ವರ್ಷ ವಯಸ್ಸಾಗಿದ್ದು, ನ್ಯೂಜಿಲೆಂಡ್ ಕ್ರಿಕೆಟ್ನೊಂದಿಗಿನ ಒಪ್ಪಂದವನ್ನೂ ಅವರು ತಿರಸ್ಕರಿಸಿದ್ದಾರೆ.
ಶಿಖರ್ ಧವನ್ ಪ್ರಸ್ತುತ ಈ ಗಣ್ಯರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಮಾಜಿ ಆರಂಭಿಕ ಆಟಗಾರ ಎರಡು ಚಾಂಪಿಯನ್ಸ್ ಟ್ರೋಫಿಗಳಲ್ಲಿ (2013 ಮತ್ತು 2017) ಆಡಿದ 10 ಪಂದ್ಯಗಳಲ್ಲಿ 701 ರನ್ ಗಳಿಸಿದ್ದಾರೆ. ಅವರು ಎರಡೂ ಐಸಿಸಿ ಟೂರ್ನಿ ಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದರು.
ಭಾರತದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಅವರು ಟೂರ್ನಿಯ ಕುರಿತಾಗಿ ಮಾತನಾಡುತ್ತಾ ಚಾಂಪಿಯನ್ಸ್ ಟ್ರೋಫಿ ಕೊಹ್ಲಿ, ರೋಹಿತ್ ಮತ್ತು ಜಡೇಜಾ ಅವರಿಗೆ ಕೊನೆಯ ಐಸಿಸಿ ಟೂರ್ನಿಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
Champions Trophy Prize Money : ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬಹುಮಾನದ ಹಣವನ್ನು ಘೋಷಿಸಿದೆ. 2025 ರ ಚಾಂಪಿಯನ್ಸ್ ಟ್ರೋಫಿ ವಿಜೇತ ತಂಡವು 2.24 ಮಿಲಿಯನ್ ಡಾಲರ್, ಅಂದರೆ ಸುಮಾರು 19.46 ಕೋಟಿ ರೂ.ಗಳನ್ನು ಪಡೆಯಲಿದೆ.
Champions Trophy 2025: ಫೆಬ್ರವರಿ 19 ರಿಂದ ಪಾಕಿಸ್ತಾನ ಮತ್ತು ದುಬೈನಲ್ಲಿ ಪ್ರಾರಂಭವಾಗುವ ಚಾಂಪಿಯನ್ಸ್ ಟ್ರೋಫಿಗೆ ನಾರ್ಖಿಯಾ ಸಮಯಕ್ಕೆ ಚೇತರಿಸಿಕೊಳ್ಳುವ ಸಾಧ್ಯತೆ ಕಡಿಮೆ ಎಂದು ಕಳೆದ ತಿಂಗಳು ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್ಎ) ಹೇಳಿತ್ತು.
ಚಾಂಪಿಯನ್ಸ್ ಟ್ರೋಫಿಗಾಗಿ ಫೆಬ್ರವರಿ 12 ರವರೆಗೆ ತಂಡಗಳಲ್ಲಿ ಬದಲಾವಣೆಗಳನ್ನು ಮಾಡಲು ಅವಕಾಶವಿರುವುದರಿಂದ, ಬುಮ್ರಾ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಭಾರತಕ್ಕೆ ಎಂಟು ದಿನಗಳ ಕಾಲಾವಕಾಶವಿದೆ.
2025 ರ ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ ಆರಂಭವಾಗಿದೆ. ಪಾಕಿಸ್ತಾನ ಆತಿಥ್ಯ ವಹಿಸುತ್ತಿರುವ ಈ ಐಸಿಸಿ ಟೂರ್ನಮೆಂಟ್ ಈ ತಿಂಗಳ 19 ರಿಂದ ಪ್ರಾರಂಭವಾಗಲಿದೆ. 2017ರ ನಂತರ ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸಲಾಗುತ್ತಿದೆ. ರಿಕಿ ಪಾಂಟಿಂಗ್ರಿಂದ ರವಿಶಾಸ್ತ್ರಿವರೆಗೆ, ಅನೇಕ ದಿಗ್ಗಜ ಕ್ರಿಕೆಟಿಗರು ಚಾಂಪಿಯನ್ಸ್ ಟ್ರೋಫಿಯ ಫೈನಲಿಸ್ಟ್ ಮತ್ತು ಸೆಮಿಫೈನಲಿಸ್ಟ್ ತಂಡಗಳ ಬಗ್ಗೆ ಭವಿಷ್ಯ ನುಡಿಯುತ್ತಿದ್ದಾರೆ.
ಈಗ ನಾವು ಚಾಂಪಿಯನ್ಸ್ ಟ್ರೋಫಿ ವಿಚಾರಕ್ಕೆ ಬರುವುದಾದರೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 5 ಪಂದ್ಯಗಳು ನಡೆದಿದ್ದು, ಅದರಲ್ಲಿ ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ. ಇನ್ನೊಂದೆಡೆಗೆ ಭಾರತ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.
ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಸರಣಿಗೆ ಭಾರತ ತಂಡದ ಉಪನಾಯಕನಾಗಿ ಶುಭ್ಮನ್ ಗಿಲ್ ಅವರನ್ನು ನೇಮಿಸಿರುವುದು ಟೀಕೆಗೆ ವ್ಯಕ್ತವಾಗಿದೆ. ಈ ಕುರಿತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ವಿವರಣೆ ನೀಡಿದ್ದಾರೆ.
Four star players injured: ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡದಲ್ಲಿ ದೀರ್ಘಕಾಲದ ಗಾಯದ ನಂತರ ಮೂವರು ಆಟಗಾರರು ಮರಳಲಿದ್ದಾರೆ. ಜಸ್ಪ್ರೀತ್ ಬುಮ್ರಾ ಆಟದ ಪರಿಸ್ಥಿತಿ ಸ್ಪಷ್ಟವಾಗಿಲ್ಲ. ಸ್ಕ್ಯಾನಿಂಗ್ ನಂತರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು.
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ಗೂ ಮುನ್ನ ಕೊಹ್ಲಿ ಇಂಜೆಕ್ಷನ್ ತೆಗೆದುಕೊಳ್ಳಬೇಕು. ಏನಾಯ್ತು ಕೊಹ್ಲಿಗೆ ಎನ್ನುವ ಪ್ರಶ್ನೆ ಎಲ್ಲರಲ್ಲಿಯೂ ಕಾಡುತ್ತಿದೆ. ವಿರಾಟ್ ಕೊಹ್ಲಿಯಿಂದ ಗ್ರೀನ್ ಸಿಗ್ನಲ್ ಪಡೆದ ನಂತರ ರಣಜಿಗೆ ಕೊಹ್ಲಿ ಹೆಸರನ್ನು ಘೋಷಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.