Shocking News: ಒಂದೇ ವರ್ಷದಲ್ಲಿ ತುಮಕೂರು ಜಿಲ್ಲೆಯಲ್ಲಿ ಬರೊಬ್ಬರಿ 326 ಬಾಲೆಯರು ಮದುವೆಗೂ ಮುನ್ನವೇ ಗರ್ಭಿಣಿಯರಾಗಿದ್ದಾರೆ. ಅದರಲ್ಲಿ ನಾಲ್ವರು ಬಾಲೆಯರು 11 ವರ್ಷದವರು ಅನ್ನೋದು ಮತ್ತಷ್ಟು ಆಘಾತಕಾರಿ ಅಂಶ.
ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಯಲಬುರ್ಗಾ ತಾಲ್ಲೂಕಿನ ಲಿಂಗನಬಂಡಿ ಗ್ರಾಮದ ಅಪ್ರಾಪ್ತೆ ಬಾಲಕಿಯನ್ನು ಬಾಲ್ಯ ವಿವಾಹದಿಂದ ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದೆ.
ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲೂಕಿನ ಮಾಲಗಿತ್ತಿ ಗ್ರಾಮದ ಅಪ್ರಾಪ್ತ ಬಾಲಕಿಯ ಜೊತೆ ಯಲಬುರ್ಗಾ ತಾಲ್ಲೂಕಿನ ಸಂಗನಾಳ ಗ್ರಾಮದ ವ್ಯಕ್ತಿವೊಬ್ಬರೊಂದಿಗೆ ಸಂಗನಾಳ ಗ್ರಾಮದಲ್ಲಿ ಜನವರಿ 01 ರಂದು ಬಾಲ್ಯವಿವಾಹ ಮಾಡಿದ ಹಿನ್ನೆಲೆಯಲ್ಲಿ ಸಂಬಂಧಿಸಿದವರ ವಿರುದ್ಧ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅಪ್ರಾಪ್ತ ಬಾಕಿಯನ್ನು ಬಲವಂತದಿಂದ ಮದುವೆ ಮಾಡಿಕೊಂಡಿದ್ದ ಯುವಕ ಹಾಗೂ ಇದಕ್ಕೆ ಸಹಕರಿಸಿದ್ದ ಈತನ ತಾಯಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ಜಿಲ್ಲಾ ಮಕ್ಕಳ ಸ್ನೇಹಿ ನ್ಯಾಯಾಲಯವು ಆದೇಶ ನೀಡಿದೆ.
ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಿದ್ದ ಕೆಎಸ್ಆರ್ ಟಿಸಿ ಕಂಡಕ್ಟರ್ ರವಿಕುಮಾರ್ ಹಾಗೂ ಆತನ ಮದುವೆಗೆ ಸಹಕಾರ ನೀಡಿದ್ದ ಅರ್ಚಕರಾದ ಕೆ.ಎನ್.ಶಾಸ್ತ್ರಿ ಮತ್ತು ರಾಜೇಶ್ವರ್ ಶಾಸ್ತ್ರಿ ಶಿಕ್ಷೆಗೊಳಗಾದ ಅಪರಾಧಿಗಳು.
ಪ್ರಪಂಚ ಎಷ್ಟೇ ಅಭಿವೃದ್ಧಿ ಹೊಂದಿದರೂ ಕೆಲವು ಪಿಡುಗಗಳು ಮಾತ್ರ ಸಮಾಜದಿಂದ ಇನ್ನೂ ದೂರಾಗದೆ ಉಳಿದಿವೆ. ಅದರಲ್ಲೂ ಬಾಲ್ಯ ವಿವಾಹದಂತಹ ಪದ್ಧತಿಗಳು ಒಂದು ಹೆಣ್ಣು ಮಗುವಿನ ಜೀವನದ ಪ್ರಶ್ನೆಯಾಗಿ ಇಂದಿಗೂ ನಮ್ಮ ಮುಂದಿದೆ.
ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ತಡೆಯುವುದು ಸಮಾಜದಲ್ಲಿನ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಅಭಿವೃದ್ಧಿಗೆ ಮಾರಕವಾಗಿರುವ ಬಾಲ್ಯ ವಿವಾಹ ಎಂಬ ಅನಿಷ್ಟ ಪದ್ಧತಿ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದೆ- ಶಾಸಕ ನಾರಾಯಣಸ್ವಾಮಿ
ನವೆಂಬರ್ 4.2021 ರಂದು ಗಂಗಾವತಿ ನಗರದ ಪಾಡಗುತ್ತಿ ಕಲ್ಯಾಣ ಮಂಟಪದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮದುವೆಯನ್ನು ಮಾಡಿದ ತಂದೆ, ತಾಯಿ, ವರ ಮತ್ತು ವರನ ತಂದೆ, ತಾಯಿಗಳು ಹಾಗೂ ವಿವಾಹಕ್ಕೆ ಅವಕಾಶ ನೀಡಿದ ಪಾಡಗುತ್ತಿ ಕಲ್ಯಾಣ ಮಂಟಪದ ವ್ಯವಸ್ಥಾಪಕರ ವಿರುದ್ಧ ಗಂಗಾವತಿ ನಗರ ಠಾಣೆಯಲ್ಲಿ ದಿನಾಂಕ: 11.01.2022ರಂದು ಪ್ರಕರಣ ದಾಖಲಾಗಿದೆ.
ಮನೆಯಲ್ಲಿ ತನ್ನ ತಾಯಿ ತೀರಿಕೊಂಡಿದ್ದಾರೆ. ಹೀಗಾಗಿ ತಂದೆ ನನಗೆ ಈ ವಯಸ್ಸಿನಲ್ಲಿಯೇ ಮದುವೆಯಾಗಲು ಒತ್ತಾಯಿಸುತ್ತಿದ್ದಾರೆ. ದಯವಿಟ್ಟು ನನಗೆ ಸಹಾಯ ಮಾಡಿ ಎಂದು ಆ 15 ವರ್ಷದ ಬಾಲಕಿ ತನ್ನ ಚಿಕ್ಕಪ್ಪನೊಂದಿಗೆ ಸಿಎಂ ನಿವಾಸಕ್ಕೆ ತೆರಳಿ ಮನವಿ ಮಾಡಿದ್ದಾಳೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.