ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. @CMofKarnataka
ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಪೌರಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ.. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪೌರಕಾರ್ಮಿಕರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಸಿಎಂ ಭರವಸೆಯನ್ನು ಬರವಣಿಗೆ ಮೂಲಕ ನೀಡಬೇಕು ಎಂದು ಪೌರ ಕಾರ್ಮಿಕರು ಪಟ್ಟು ಹಿಡಿದಿದ್ದಾರೆ..
ಪರಿಷತ್, ರಾಜ್ಯಸಭೆ ಚುನಾವಣೆಯಲ್ಲಿ ಬ್ಯೂಸಿ ಇದ್ದೇವೆ. ನಿನ್ನೆಯಷ್ಟೇ ಕೊರ್ ಕಮಿಟಿ ಸಭೆ ಆಗಿದೆ. ಸಭೆಯ ನಿರ್ಧಾರದ ಬಗ್ಗೆ ಹೈ ಕಮಾಂಡ್ ಗಮನಕ್ಕೆ ತಂದು ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗದಗಿನ ಡಾ. ತೋಂಟದಾರ್ಯ ಸಿದ್ಧಲಿಂಗ ಸ್ವಾಮೀಜಿ ಹುಟ್ಟಿದ ದಿನವನ್ನು ಭಾವೈಕ್ಯದ ದಿನ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿರುವುದಕ್ಕೆ ದಿಂಗಾಲೇಶ್ವರ ಸ್ವಾಮೀಜಿ ವಿರೋಧ ಮಾಡಿದ್ದಾರೆ. ತೋಂಟದಾರ್ಯ ಮಠದ ಮೇಲೆ ಜನರಿಗೆ ಇರುವ ಪೂಜ್ಯ ಭಾವನೆ ಗದಗದ ಶಿರಹಟ್ಟಿ ಮಠದ ಮೇಲೂ ಇದೆ. ಅದೂ ಭಾವೈಕ್ಯತೆಗೆ ಹೆಸರಾದ ಮಠ.
ಗೋವಿಂದ ಕಾರಜೋಳ ಹಾಗೂ ಸುಧಾಕರ್ ಅವರ ವಿರುದ್ಧವೂ ಆರೋಪಗಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಯಾರೇ ಇರಲಿ. ಯಾವುದೇ ಕಚೇರಿ ಇರಲಿ. ನಿರ್ದಿಷ್ಟ ಆರೋಪಗಳಿದ್ದರೆ ಅದಕ್ಕೆ ಉತ್ತರ, ಪ್ರತಿಕ್ರಿಯೆ ನೀಡಬಹುದು" ಎಂದರು.
ಸಿಎಂ ಬಸವರಾಜ ಬೊಮ್ಮಾಯಿ 2 ದಿನಗಳ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.. ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಭೇಟಿ ಮಾಡಿ ಮೇಕೆದಾಟು ವಿಚಾರ ಚರ್ಚಿಸಲಿದ್ದಾರೆ.. ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ.
Mid-day Meal: ಡಾ. ಶ್ರೀ ಶಿವಕುಮಾರ ಸ್ವಾಮೀಜಿ (Dr Sri Sivakumara Swamiji) ಅವರು ಸುಮಾರು 88 ವರ್ಷಗಳ ಕಾಲ ಈ ನಾಡಿನ ಸೇವೆಯನ್ನು ಮಠದ ಮುಖಾಂತರ ಮಾಡಿರುವುದು ಒಂದು ದಾಖಲೆ. ಯಾವುದೇ ಪರಪೂಜ್ಯರು ಇಷ್ಟು ದೀರ್ಘಕಾಲದ ಸೇವೆಯನ್ನು ಇಡೀ ಭಾರತ ದೇಶದಲ್ಲಿ ಮಾಡಿಲ್ಲ ಎನ್ನುವುದು ನಮ್ಮೆಲ್ಲರಿಗೂ ಅಭಿಮಾನದ ಸಂಗತಿ. ಅದಕ್ಕಾಗಿಯೇ ಅವರಿಗೆ ನಡೆದಾಡುವ ದೇವರು ಎಂಬ ಬಿರುದು ಬಂದಿದೆ. ಅವರು ಹಚ್ಚಿದ ಒಲೆಯ ಕಿಚ್ಚು ಸುಮಾರು 100 ವರ್ಷಕ್ಕಿಂತ ಹೆಚ್ಚಿನದಾಗಿದ್ದು,ಇಂದಿಗೂ ಉರಿಯುತ್ತಿದೆ. ಎಲ್ಲಿಯವರೆಗೆ ಈ ಅಡಿಗೆ ಒಲೆಯ ಕಿಚ್ಚು ಉರಿಯುತ್ತಿರುತ್ತದೆ, ಅಲ್ಲಿಯವರೆಗೆ ಬಡ ಮಕ್ಕಳ ಹೊಟ್ಟೆ ತಣ್ಣಗಾಗುತ್ತದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.