Laxman Savadi joined Congress: ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ರಾಜಕೀಯ ಚಟುವಟಿಕೆಗಳು ಕೂಡ ಗರಿಗದರಿವೆ. ಚುನಾವಣಾ ರಣರಂಗದ ಕಾವು ಹೆಚ್ಚಾಗಿದೆ. ಶತಾಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕು ಎಂದು ಪಣತೊಟ್ಟ ಕಾಂಗ್ರೆಸ್ಗೆ ಈಗ ಮತ್ತೊಬ್ಬ ಪ್ರಭಾವಿ ನಾಯಕ ಬಿಜೆಪಿ ತೊರೆದು ʻಕೈʼ ಹಿಡಿದಿದ್ದಾರೆ.
Karnataka Election 2023 : ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಬೇಸರ ತರಿಸಿದೆ ಎಂದಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇಂದು ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ಆಯೋಜನೆ ಮಾಡಲಾಗಿದೆ.. ಸಭೆ ಮಾಡಿ ಫೈನಲ್ ಪಟ್ಟಿಯನ್ನ ಕೇಂದ್ರಕ್ಕೆ ಕಳಿಸ್ತೀವಿ ಎಂದು ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
BJP : ಭಾರತೀಯ ಜನತಾ ಪಕ್ಷವು (ಬಿಜೆಪಿ) ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ನಾಲ್ಕು ಹಂತದ "ಚುನಾವಣೆಯ ಮೊದಲ ಆಯ್ಕೆ" ಯ ವಿಸ್ತಾರವಾದ ಮತ್ತು ವಿಶಿಷ್ಟ ಮಾದರಿಯನ್ನು ಅಳವಡಿಸಿಕೊಂಡಿದೆ.
ಕಾರ್ಮಿಕ ಮಹಿಳೆಯರಿಗೆ ಬಸ್ ಪಾಸ್ ಕೊಡದ ವಿಚಾರ ಪ್ರತಿಕ್ರಿಯೆ ನೀಡಿದ ಡಿಕೆಶಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.. ಬೊಮ್ಮಾಯಿಯದ್ದು ಯಾವಾಗಲೂ ಫೂಲ್ ಮಾಡುವ ಕೆಲಸ ಎಂದು ಕಿಡಿಕಾರಿದ್ದಾರೆ..
ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಪ್ಲ್ಯಾನ್ ಮಾಡಲಾಗಿದೆ. ಶಿಗ್ಗಾಂವಿ ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿ ಅಭ್ಯರ್ಥಿ ಆಗುತ್ತಾರೆ ಎಂದು ಹಾವೇರಿಯಲ್ಲಿ ʻಕೈʼ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಶಾಸಕರಿಗೆ ಡಿಕೆಶಿ ಕರೆ ಮಾಡಿ ಆಹ್ವಾನ ನೀಡಿರೋ ವಿಚಾರ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಿಜೆಪಿಯ 18 ಶಾಸಕರನ್ನು ಕರೆದುಕೊಂಡು ಹೋದರಲ್ಲಾ ಆಗ ಅವರ ನೈತಿಕತೆ ಎಲ್ಲಿಗೆ ಹೋಗಿತ್ತು? ಎಂದು ಪ್ರಶ್ನೆ ಮಾಡಿದ್ದಾರೆ.
ಇಂದು ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲಾ ಪ್ರವಾಸ. ಬೆಳಗ್ಗೆ 11ಕ್ಕೆ ಯಲಬುರ್ಗಾದಿಂದ ರಾಣೇಬೆನ್ನೂರುನತ್ತ ಪ್ರಯಣ. ಅಭಿವೃದ್ಧಿ ಕಾಮಗಾರಿ.. ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿ.
Karnataka Assembly Elections 2023: ಒಳಮೀಸಲಾತಿ ಹೆಚ್ಚಳ, ನೆನೆಗುದಿಗೆ ಬಿದ್ದ ಸಮಸ್ಯೆಗಳಿಗೆ ಪರಿಹಾರ, ಒಬಿಸಿ ಯಲ್ಲಿ ಬದಲಾವಣೆ ಜನಮಾನಸದಲ್ಲಿ ಪಕ್ಷ ಹಾಗೂ ಸರ್ಕಾರದ ಪರವಾಗಿ ಜನತಾ ಜನಾರ್ದನ ಇದೆ. ಈ ಬಾರಿ ನಮ್ಮ ಕೆಲಸಗಳ ಆಧಾರದ ಮೇಲೆ ಸಕಾರಾತ್ಮಕ ತೀರ್ಪನ್ನು ಕೇಳುತ್ತಿದ್ದೇವೆ. ಜನರ ಆಶೀರ್ವಾದ ನಮ್ಮ ಪರವಾಗಿದೆ - ಸಿಎಂ ಬಸವರಾಜ ಬೊಮ್ಮಾಯಿ
ನಂದಿಗಿರಿದಾಮದ ರೋಪ್ ವೇ ನಿರ್ಮಾಣಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.. 93.4 ಕೋಟಿ ವೆಚ್ಚದ 2.9 KM ಮೀಟರ್ ಉದ್ದದ ರೋಪ್ ವೇ ನಿರ್ಮಾಣಕ್ಕೆ ಸಿಎಂ ಚಾಲನೆ ನೀಡಿದ್ದಾರೆ.
ಬೆಳ್ಳಂಬೆಳಗ್ಗೆ ಸಿಎಂ ನಿವಾಸಕ್ಕೆ ಆಗಮಿಸಿ ರಮೇಶ್ ಜಾರಕಿಹೊಳಿ. ಹುಬ್ಬಳ್ಳಿ ಆದರ್ಶ ನಗರದಲ್ಲಿನ ನಿವಾಸಕ್ಕೆ ಜಾರಕಿಹೊಳಿ ಭೇಟಿ. ಕುತೂಹಲ ಕೆರಳಿಸಿದ ಗೋಕಾಕ್ ಸಾಹುಕಾರ್ ಭೇಟಿ. ಗೋಕಾಕ್ ಮತಕ್ಷೇತ್ರದ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಸಿಎಂ ಜತೆಗೆ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ. ಅಥಣಿ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ನಾಯಕರು ಚರ್ಚೆ..? ಸುದೀರ್ಘ ಚರ್ಚೆ ನಡೆಸಿ ವಾಪಸ್ ಹೊರಟ ಜಾರಕಿಹೊಳಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.