ಪರ್ಸೆಂಟೇಜ್ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್ ಚಿಕ್ಕದೊಡ್ಡಪ್ಪನ ಮಕ್ಕಳು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ.. ರಾಯಚೂರಲ್ಲಿ ಮಾತನಾಡಿದ ಸಿ.ಎಂ.ಇಬ್ರಾಹಿಂ, ಬರಗಾಲ, ಅತಿವೃಷ್ಟಿ, ಅನಾವೃಷ್ಟಿಯಲ್ಲೂ ಒಂದು ರೂ.ಕೊಟ್ಟಿಲ್ಲ. ಇನ್ನು ಕಾಂಗ್ರೆಸ್ ಒಡೆದ ಮನೆ. ಇವರು 20%, ಅವರು 40% ಅಂತಾ ಕಾಂಗ್ರೆಸ್, ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ರು..
ಸ್ವಾತಂತ್ರ್ಯ ಪಡೆದು ಇಷ್ಟು ವರ್ಷಗಳಾದರೂ ಕೇಂದ್ರದ ನಿರ್ಲಕ್ಷ್ಯ ಧೋರಣೆಯಿಂದಾಗಿ ನಮ್ಮ ನೀರು ನಾವು ಪಡೆಯಲು ಆಗಲಿಲ್ಲ. ಭವಿಷ್ಯದಲ್ಲಿ ನೀರು ಪೂರೈಕೆ ಬಹಳ ಕಷ್ಟವಾಗಲಿದೆ. ಈಗಲೇ ನಾವು ಸಮಸ್ಯೆ ಪರಿಹರಿಸಿಕೊಳ್ಳದಿದ್ದರೆ ಮುಂದೆ ನೀರಿನ ಹಾಹಾಕಾರ ಎದುರಿಸಬೇಕಾಗಲಿದೆ
ಅಜು೯ನರಾಗಿ ಕುಮಾರಸ್ವಾಮಿ ಇದ್ದಾರೆ, ಅವರಿಗೆ ಸಾರಥಿಯಾಗಿ ನಾನಿದ್ದೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.. ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ಮಾಡಿದ್ರೆ ಜೆಡಿಎಸ್ ಸ್ಪರ್ಧೆ ವಿಚಾರ ಮಾತನಾಡಿದ ಸಿ.ಎಂ.ಇಬ್ರಾಹಿಂ, ಯಾರು ನಿಂತರೂ ನನಗೇನು ಪ್ರಶ್ನೆ ಇಲ್ಲ. ನನ್ನ ಗುರಿಯೊಂದೇ ಮಹಾಭಾರತ ಇದು. ಕುದುರೆ ಹೊಡೆಯೋದು ನನ್ನ ಕೆಲಸ, ಬಾಣ ಬಿಡೋದು ಎಚ್ಡಿಕೆ ಕೆಲಸ ಎಂದಿದ್ದಾರೆ..
ಯಾರು ನಿಂತರೂ ನನಗೇನು ಪ್ರಶ್ನೇ ಇಲ್ಲ.ನನ್ನ ಗುರಿಯೊಂದೇ ಮಹಾಭಾರತ ಇದು.ಎದುರು ಸೈನ್ಯ ಕೌರವರ ಸೈನ್ಯ, ನಮ್ಮದು ಪಾಂಡವರ ಸೈನ್ಯ. ಅರ್ಜುನರಾಗಿ ಕುಮಾರಸ್ವಾಮಿ ಇದ್ದಾರೆ, ಅವರಿಗೆ ಸಾರಥಿಯಾಗಿ ನಾನಿದ್ದೇನೆ. ಕುದುರೆ ಹೊಡೆಯೋದು ನನ್ನ ಕೆಲಸ, ಬಾಣ ಬಿಡೋದು ಅವರ ಕೆಲಸ.
ಇಂದು ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆದಿದೆ. ಈ ಸಂದರ್ಭದಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯದಲ್ಲಿ ವಯೋವೃದ್ದ ರಾಜಕಾರಣಿ ಅವರು ಅಜಾತ ಶತ್ರು. ನಮ್ಮನಡೆ ಅವರ ಜೊತೆಯಲ್ಲಿ, ಇದು ಸರ್ವಸಮ್ಮತ ಅಭಿಪ್ರಾಯವಾಗಿದೆ. ಮುಂದಿನ ದಿನಗಳಲ್ಲಿ ಅನೇಕ ಜನ ಬರ್ತಾರೆ ಯಾರಿಗೂ ಬಲವಂತ ಮಾಡೋದಿಲ್ಲ. ಯುಗಾದಿ ಮುಗಿದ ಮೇಲೆ ಎಪ್ರಿಲ್ ಮೇ ತಿಂಗಳಲ್ಲಿ ದೊಡ್ಡ ಪ್ರವಾಹ ಬರುತ್ತದೆ. ರಾಜಕೀಯ ಚಿತ್ರಣವೇ ಬದಲಾಗಲಿದೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.
ಎರಡು ಬಾರಿ ಇಬ್ರಾಹಿಂಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಲಾಯಿತು. 2019 ರಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನ ಕೇಳಿದರು. ಎಸ್.ಆರ್. ಪಾಟೀಲರನ್ನು ತೆಗೆದು ತಮ್ಮನ್ನು ನಾಯಕರನ್ನಾಗಿ ಮಾಡುವಂತೆ ಕೇಳಿದರು.
ಅಂತರ್ಜಲ ವಿವಾದ ಸಂಬಂಧಿಸಿದಂತೆ ಮಹದಾಯಿ ಹಿತವನ್ನು ಕರ್ನಾಟಕ ಬಿಟ್ಟುಕೊಡಲು ಸಾಧ್ಯವಿಲ್ಲ. ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತುಕತೆ ಮೂಲಕ ಬಗೆಹರಿಸಿ ಕೊಳ್ಳುತ್ತೇವೆ ಅಂತಾ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಜೆಡಿಎಸ್ (JDS) ಸೇರ್ಪಡೆ ಬಗ್ಗೆ ಹೇಳ್ತೇನೆ. ನಾನು ಕಾಂಗ್ರೆಸ್ ಪಕ್ಷದಿಂದ ಹೊರಬಿದ್ದಿದ್ದೇನೆ. ಎಂಎಲ್ ಸಿ ಸ್ಥಾನಕ್ಕೆ ಇನ್ನೂ ರಾಜೀನಾಮೆ ಕೊಟ್ಟಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ಸಿಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷ ತೊರೆಯುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರಾಜಕೀಯ ಬೇರೆ, ವೈಯಕ್ತಿಕ ಬೇರೆ, ಅವನಿಗೆ ಕೋಪ ಕಡಿಮೆ ಆದ ಮೇಲೆ ಹೋಗಿ ಮಾತಾಡ್ತೇನೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.