“ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಿದರೆ ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿರುತ್ತದೆ. ಮಣ್ಣಿನ ಮಕ್ಕಳು ಸ್ವತಃ ಶ್ರಮಜೀವಿಗಳು ಉದ್ಯಮಶೀಲತೆಯ ಸ್ಫೂರ್ತಿ ಹೊಂದಿರುವವರು” ಎಂದು ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.
ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳೊಂದಿಗೆ ನಿರಂತರ ಸಮಾಲೋಚನೆ ನಡೆಸಿ ಸಾಧಕ-ಬಾಧಕಗಳನ್ನು ಪರಿಗಣಿಸಿ ವಿದ್ಯಾರ್ಥಿಗಳ ಅರೋಗ್ಯ ಹಾಗೂ ಅವರ ಮುಂದಿನ ಭವಿಷ್ಯದ ದೃಷ್ಟಿಯಿಂದ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ವ್ಯವಸಾಯಕ್ಕೆ ಮತ್ತು ಗೃಹ ಬಳಕೆಗೆ ನೀರು ಸಿಗುವಂತೆ ಮಾಡುವುದು ಪ್ರತಿ ಸರಕಾರದ ಕರ್ತವ್ಯ. ಇದನ್ನು ಯಡಿಯೂರಪ್ಪ ಅವರ ಸರಕಾರ ಅರ್ಥ ಮಾಡಿಕೊಂಡಿದೆ ಎಂದು ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ನಾವು ಬದಲಾವಣೆಗೆ ಎಷ್ಟೊಂದು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಹೊಂದಿಕೊಂಡಿದ್ದೇವೆ ಎಂದರೆ ಕೆಲವೊಂದು ವಿಭಾಗಗಳಲ್ಲಿ ಮಾತ್ರ ಲಾಕ್ಡೌನ್ ನಿಂದ ತೊಂದರೆಯಾಗಿದೆಯೇ ಹೊರತು ಬಹುತೇಕ ಕ್ಷೇತ್ರಗಳಲ್ಲಿ ಹೆಚ್ಚಿನ ದುಷ್ಪರಿಣಾಮ ಆಗಲಿಲ್ಲ.
ಸದ್ಯ ಕರ್ನಾಟಕದ ಮೂಲದ 1904 ಮಂದಿ ಯುಎಇಯಲ್ಲಿದ್ದು, ಈ ಪೈಕಿ 121 ಗರ್ಭಿಣಿಯರಿದ್ದಾರೆ. ವೀಸಾ ಅವಧಿ ಮುಗಿದ 522 ನಿರೋದ್ಯೋಗಿಗಳು, 157 ರೋಗಿಗಳು ಇತರ 95 ಮಂದಿ ಇತರೆ ಕಾರಣಗಳಿಂದ ವಾಪಸ್ ಬರಲಾರದೆ ಸಂಕಷ್ಟಕ್ಕೆ ಸಿಲುಕಿ ತಾಯ್ನಾಡಿಗೆ ವಾಪಸಾಗಲು ಸರ್ಕಾರದ ನೆರವನ್ನು ಕೋರಿರುತ್ತಾರೆ.
ಕೋವಿಡ್ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ದುಬೈ ಕನ್ನಡಿಗರಿಗೆ ಆಹಾರ, ಆರೋಗ್ಯ ಹಾಗೂ ಕಾನೂನು ಸೇವೆ ಒದಗಿಸಲು ಅಲ್ಲಿನ ಅನಿವಾಸಿ ಭಾರತೀಯ ಉದ್ಯಮಿಗಳು, ವೃತ್ತಿಪರರು ವೆಬ್ಸೈಟ್ ಆರಂಭಿಸಿ ನೆರವು ಒದಗಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ವಿದೇಶಗಳಿಂದ ಬರುವ 10-12 ಸಾವಿರ ಜನರಿಗೆ ಕ್ವಾರಂಟೈನ್ ವ್ಯವಸ್ಥೆಯನ್ನೂ ರಾಜ್ಯ ಸರ್ಕಾರದ ಕಡೆಯಿಂದ ಮಾಡಲಾಗುತ್ತದೆ ಎಂದರು.
ಯಾವುದೇ ಹೊಸ ಕೆಲಸದ ಆರ್ಡರ್ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕಂಪನಿ ಬಾಗಿಲು ಹಾಕುವುದು ಅಥವಾ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದು ಸರಿ ಅಲ್ಲ. ಏಕೆಂದರೆ ಈಗ ಹೊಸ ಕೆಲಸ ಹುಡುಕಿಕೊಳ್ಳುವುದು ಕಷ್ಟವಾಗುತ್ತದೆ. ಕಂಪನಿ ಮುಚ್ಚುವ ಬದಲು ಸಂಬಳ ಕಡಿತ ಮುಂತಾದ ಮಾರ್ಗೋಪಾಯಗಳನ್ನು ಕಂಡುಕೊಳ್ಳುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಎಲ್ಲ ಕಂಪನಿಗಳು ಇದೇ ನಿಯಮ ಪಾಲಿಸಬೇಕು ಎಂದು ಅವರು ಹೇಳಿದರು.
ದೆಹಲಿಯ ತಬ್ಲೀಗಿ ಜಮಾತ್ ಮತ್ತು ನಂಜನಗೂಡಿನ ಜೂಬಿಲಿಯಂಟ್ ಕಾರ್ಖಾನೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಟ್ರೇಸಿಂಗ್ ಪೂರ್ಣವಾಗಿದ್ದು, ಪಾಸಿಟಿವ್ ಇರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕ್ವಾರಂಟೈನ್ನಲ್ಲಿ ಇರುವವರ ಮೇಲೆ ನಿಗಾ ಇಡಲಾಗಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.
ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಪಾಠ ಪ್ರವಚನಗಳು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಪರೀಕ್ಷೆ ಯಾವಾಗ, ಹೇಗೆ ನಡೆಸಬೇಕು ಎಂಬ ಬಗ್ಗೆ ಕುಲಪತಿಗಳ ಸಲಹೆ ಕೇಳಲಾಗಿದೆ. ಆನ್ಲೈನ್ ಮೂಲಕ ಪಾಠ ಪೂರ್ಣಗೊಳಿಸಿ ಪರೀಕ್ಷೆ ನಡೆಸಬೇಕೇ ಅಥವಾ ತರಗತಿಗಳು ಆರಂಭವಾದ ನಂತರ ತಡವಾಗಿ ಪರೀಕ್ಷೆ ನಡೆಬೇಕೇ ಎಂಬ ಬಗ್ಗೆ ಮಾಹಿತಿ ಕೋರಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.