CET Result 2022: ಸೋಮವಾರ ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿತ್ತು ಎಂದಿದ್ದಾರೆ.
CET Exam 2022: ಸಿಇಟಿ-2022ಕ್ಕೆ ಒಟ್ಟು 2,16,525 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ರಾಜ್ಯಾದ್ಯಂತ 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಈ ಪೈಕಿ 87 ಪರೀಕ್ಷಾ ಕೇಂದ್ರಗಳು ಬೆಂಗಳೂರಿನಲ್ಲಿದ್ದು, 399 ಕೇಂದ್ರಗಳು ರಾಜ್ಯದ ಉಳಿದ ಭಾಗಗಳಲ್ಲಿವೆ ಎಂದು ಕರ್ನಾಟಕ ಉನ್ನತ ಶಿಕ್ಷಣ ಸಚಿವರು ತಿಳಿಸಿದ್ದಾರೆ.
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗೆ ಬರುವ ಅಭ್ಯರ್ಥಿಗಳು ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಹಾಲ್ಗೆ ಪ್ರವೇಶ ಇಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಣೆಯಲ್ಲಿ ತಿಳಿಸಿದೆ.
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ತೆಗೆದುಕೊಳ್ಳಲು ಹಿಜಾಬ್ ಧರಿಸಿರುವ ವಿದ್ಯಾರ್ಥಿಗಳು ಪರೀಕ್ಷಾ ಹಾಲ್ಗೆ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಕ್ರವಾರ ಪ್ರಕಟಿಸಿದೆ.
ಕಳೆದ ವರ್ಷ ಕೋವಿಡ್ ಕಾರಣಕ್ಕೆ ಕೇವಲ ಪರೀಕ್ಷೆಯಲ್ಲಿನ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲಾಗಿತ್ತು. ಆದರೆ, ಈ ಬಾರಿ ಸಿಇಟಿಯಲ್ಲಿ ಪಡೆಯುವ ಅಂಕಗಳು (ಶೇ. 50) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂಕಗಳು (ಶೇ.50) ಸೇರಿ ಎರಡನ್ನು ಪರಿಗಣಿಸಿ ಮೆರಿಟ್ ಲಿಸ್ಟ್ ರೂಪಿಸಲಾಗುವುದು ಎಂದು ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.