ಜೂನ್ 13 ರಂದು ವಾಯುವ್ಯ ಪದವೀಧರ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು ಚುನಾವಣಾ ಅಖಾಡ ರಂಗೇರಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟ ಮೂರು ಜಿಲ್ಲೆಗಳ ವ್ಯಾಪ್ತಿಗೆ ಬರುವ ಕ್ಷೇತ್ರದಲ್ಲಿ ಎಲ್ಲಾ ನಾಯಕರು ಹೆಚ್ಚಿನ ಪ್ರಚಾರ ನಡೆಸುತ್ತಿರೋದು, ಗಮನ ವಹಿಸಿರೋದು ಉಪವಿಭಾಗ ಕೇಂದ್ರ ಸ್ಥಾನ ಬೆಳಗಾವಿಯಲ್ಲಿ. ಕಾರಣ ಮೂರು ಕ್ಷೇತ್ರಗಳ ಪೈಕಿ ಬೆಳಗಾವಿಯಲ್ಲೇ ಅತಿ ಹೆಚ್ಚು ಮತದಾರರಿದ್ದಾರೆ. ಇಂದು ವಾಯುವ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿ, ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.
ಅದೃಷ್ಟದ ಬಂಡಿ ಹತ್ತಿ ಬಂದು ನಾಮಪತ್ರ ಸಲ್ಲಿಕೆ ಮಾಡಿದ ಬಸವರಾಜ್ ಹೊರಟ್ಟಿ. ಪ್ರತಿ ಚುನಾವಣೆಗೂ ಇದೇ ಕಾರಿನಲ್ಲಿ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ನಾಮಿನೇಶನ್ ಮಾಡೋದು ಯಾಕೆ ಗೊತ್ತಾ?
Karnataka MLC polls: ವಿಧಾನ ಪರಿಷತ್ ಚುನಾವಣೆಗೆ ಇಂದು ನಾಮಿನೇಶನ್ ಮಾಡಲು ಕೊನೆಯ ದಿನ. ಈ ನಡುವೆ ಇಂದು ಎಲ್ಲ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದೆ. ಆದ್ರೆ ಬಿಜೆಪಿಯಲ್ಲಿ ಮುಂಚೂಣಿಯಲ್ಲಿ ಬಿವೈ ವಿಜಯೇಂದ್ರಗೆ ಟಿಕೆಟ್ ಮಿಸ್ ಆಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಪರಿಷತ್ತಿನ ಏಳು ಸ್ಥಾನಗಳ ಪೈಕಿ ಕಾಂಗ್ರೆಸ್ಗೆ ಎರಡು ಸ್ಥಾನಗಳು ಸಿಗಲಿವೆ. ಆ ಎರಡು ಸ್ಥಾನಗಳಲ್ಲಿ ಒಂದನ್ನು ಹಿಂದುಳಿದ ವರ್ಗ ಮತ್ತು ಇನ್ನೊಂದನ್ನು ಮುಸ್ಲಿಂ ಅಥವಾ ಕ್ರೈಸ್ತ ಸಮುದಾಯಕ್ಕೆ ಕೊಡಲು ಸಿದ್ದರಾಮಯ್ಯ ಹೈಕಮಾಂಡ್ಗೆ ಮನವಿ ಮಾಡಿದ್ದರು ಎನ್ನಲಾಗಿತ್ತು. ಆದರೆ ಹಿರಿಯ ನಾಯಕರು ಸೂಚಿಸಿದ್ದ ಹೆಸರುಗಳಿಗೆ ಮಣೆ ಹಾಕದ ಕಾಂಗ್ರೆಸ್ ಹೈಕಮಾಂಡ್ ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.