ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿಚಾರವಾಗಿ ಶಾಸಕ ವಿನಯ್ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವರು ಯಾರು ಮನೆಯಲ್ಲಿ ಒಂದು ಆಕಳು ಕಟ್ಟಿಲ್ಲ. ಮಾತು ಆಡುತ್ತಾರೆ ಅಷ್ಟೇ. ಪ್ಲ್ಯಾಸ್ಟಿಕ್ ಆಕಳನ್ನು ಪೂಜೆ ಮಾಡುತ್ತಾರೆ. ಮಾತಾಡಿ ಜನರಿಗೆ ದಾರಿ ತಪ್ಪಿಸುವುದು ಬೇರೆ. ವಾಸ್ತವವಾಗಿ ಅನುಭವಿಸುವುದು ಬೇರೆ ಎಂದ ಗೋ ಹತ್ಯೆ ಕಾಯ್ದೆ ತಿದ್ದುಪಡಿಯನ್ನು ಸಮರ್ಥಿಸಿಕೊಂಡರು.
ಗೋವುಗಳನ್ನು ಏಕೆ ಕಡಿಯಬಾರದು ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ಸಚಿವರ ಹೇಳಿಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.