ಈಗ ಗೂಳಿಹಟ್ಟಿ ಶೇಖರ್ ಅವರಿಗೆ ಆಗಿರುವ ಅವಮಾನ ಮತ್ತು ಅನ್ಯಾಯಕ್ಕೆ ಉತ್ತರಿಸುವ ಧೈರ್ಯ ತೋರುವರೇ? 'ಹಿಂದುಗಳೆಲ್ಲ ಒಂದು' ಎನ್ನುವ ಘೋಷಣೆ ಪ್ರಾಮಾಣಿಕತೆಯಿಂದ ಕೂಡಿದ್ದರೆ, ಮೊದಲು ಆರ್.ಎಸ್.ಎಸ್ ಸರಸಂಘಚಾಲಕ ಹುದ್ದೆಗೆ ಒಬ್ಬ ದಲಿತನನ್ನು ನೇಮಕ ಮಾಡಬೇಕು. ಇಲ್ಲದೆ ಇದ್ದರೆ ಈ ರೀತಿ "ಹಿಂದೂ..ಒಂದು" ಎಂದು ಸುಳ್ಳುಹೇಳಿ ಜನರನ್ನು ನಂಬಿಸಿ ಮೋಸಮಾಡುವುದನ್ನು ನಿಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಉತ್ತಮ ಎಂದು ಕಣದಲ್ಲಿರುವ ಇತರ ಅಭ್ಯರ್ಥಿ ಶಶಿ ತರೂರ್ಗೆ ಹೇಳಿರುವುದಾಗಿ ಕಾಂಗ್ರೆಸ್ನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಖರ್ಗೆ ಅವರು ಮೂಲತಃ ಕರ್ನಾಟಕದವರು ಮತ್ತು ದಲಿತ ಸಮುದಾಯಕ್ಕೆ ಸೇರಿದವರು. ಖರ್ಗೆ ಅವರು ಅಧ್ಯಕ್ಷರಾಗಿ ಆಯ್ಕೆಯಾದರೆ 51 ವರ್ಷಗಳ ನಂತರ ಕಾಂಗ್ರೆಸ್ಗೆ ದಲಿತ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ. ಬಾಬು ಜಗಜೀವನ್ ರಾಮ್ ನಂತರ ಯಾವ ದಲಿತ ನಾಯಕನು ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡಿಲ್ಲ.
ಉತ್ತರ ಪ್ರದೇಶದ ಹತ್ರಾಸ್ನಲ್ಲಿ 20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿರುದ್ಧ ರಾಷ್ಟ್ರವ್ಯಾಪಿ ಆಕ್ರೋಶದ ಮಧ್ಯೆ, ಬಿಹಾರದ ಗಯಾ ಜಿಲ್ಲೆಯ ದಲಿತ ಬಾಲಕಿಯೊಬ್ಬಳ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ನಂತರ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸಂಸದ ಎ.ನಾರಾಯಣಸ್ವಾಮಿ ಅವರು ದಲಿತ ಎಂಬ ಕಾರಣಕ್ಕೆ ಗ್ರಾಮಸ್ಥರು ಗ್ರಾಮಕ್ಕೆ ಪ್ರವೇಶಿಸಲು ನಿರ್ಬಂಧಿಸಿದ್ದು, ಯಾವುದೇ ಕೆಳಜಾತಿಯವರಿಗೆ ಗ್ರಾಮಕ್ಕೆ ಪ್ರವೇಶಿಸಲು ಅನುಮತಿ ನೀಡುವುದಿಲ್ಲ ಎಂದಿದ್ದಾರೆ.
ಕುಟುಂಬ ಸದಸ್ಯರೊಂದಿಗೆ ತಮ್ಮ ಮನೆಯ ಹೊರಗೆ ಮಲಗಿದ್ದಾಗ 12 ವರ್ಷದ ದಲಿತ ಬಾಲಕಿಯನ್ನು ಅಪಹರಿಸಿ ಹತ್ಯೆಗೈದಿರುವ ಘಟನೆ ಇಲ್ಲಿನ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹನುಮಾನ್ ಜಾತೀಯ ಹುಡುಕಾಟ ಈಗ ತೀವ್ರಗೊಂಡಿದೆ.ಈ ಹಿಂದೆ ಉತ್ತರಪ್ರದೇಶದ ಸಿಎಂ ಆದಿತ್ಯನಾಥ್ ಹನುಮಾನ್ ನ್ನು ದಲಿತ ಸಮುದಾಯಕ್ಕೆ ಸೇರಿದವನು ಎಂದು ಕರೆದಿದ್ದರು.ಇದಾದ ಬೆನ್ನಲ್ಲಿ NCST ಅಧ್ಯಕ್ಷ ನಂದ ಕುಮಾರ್ ಅವರು ಆದಿವಾಸಿ ಸಮುದಾಯ ಎಂದು ತಿಳಿಸಿದ್ದರು.
ಮೈಸೂರು ವಿವಿಯಲ್ಲಿನ ಲೋಪದೋಷಗಳನ್ನು ಎತ್ತಿಹಿಡಿದಿದ್ದಕ್ಕೆ ಮಹೇಶ ಸೋಸಲೆ ಎನ್ನುವ ಸಂಶೋಧನಾ ವಿದ್ಯಾರ್ಥಿಯನ್ನು ಕಪ್ಪುಪಟ್ಟಿಗೆ ಸೇರಿಸಿ ವಸತಿ ನಿಲಯವನ್ನು ನಿರಾಕರಿಸಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಮೂರು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.