ಈ ವೇಳೆ ಶಾಖೆಯ ಮುಖ್ಯ ವ್ಯವಸ್ಥಾಪಕರು ಗ್ರಾಹಕರ ಕೋರಿಕೆಯನ್ನು ತಿರಸ್ಕರಿಸಿ, ಬ್ಯಾಂಕಿನ ನಿಯಮದಂತೆ ಮತ್ತು ಆಡಿಟ್ಗೆ ಸಂಬಂಧಪಟ್ಟಂತೆ ಹೆಚ್ಚುವರಿಯಾಗಿ ನೀಡಿದ ಗೃಹರಕ್ಷಕ ಪಾಲಸಿಯನ್ನು ರದ್ದುಗೊಳಿಸಲು ಬರುವುದಿಲ್ಲವೆಂದು ಹಿಂಬರಹ ನೀಡಿ ಕಳುಹಿಸಿದ್ದರು.
ಖಾತೆಯಿಂದ ಹಣವನ್ನು ವರ್ಗಾಹಿಸಲು ತಾವು ಯಾವುದೇ ತೆರನಾದ ಪ್ರಕ್ರಿಯೆಗಳನ್ನು ಪಾಲಿಸದೇ ಅವರ ಗಮನಕ್ಕೆ ಬಾರದಂತೆ ವರ್ಗಾವಣೆಗೊಂಡಿದ್ದರ ಮೊತ್ತದ ಬಗ್ಗೆ ಬ್ಯಾಂಕಿಂಗ್ ಓಂಬಡ್ಸ್ಮನ್ಗೆ ಮತ್ತು ಸಕ್ಷಮ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದರೂ ಯಾವುದೇ ಪರಿಹಾರ, ನ್ಯಾಯ ಸಿಕ್ಕಿರಲಿಲ್ಲ.
ದಾವಣಗೆರೆ ನಗರ ರಾಜ್ಯದಲ್ಲಿಯೇ ಮಾದರಿ, ಅಭಿವೃದ್ದಿ ಹೊಂದಿದ ನಗರವನ್ನಾಗಿಸಲು ಶಾಂತಿ, ಸೌಹಾರ್ದತೆ ಕಾಪಾಡಿಕೊಂಡು ಒಗ್ಗಟ್ಟಾಗಿ ಧಾರ್ಮಿಕ ಆಚರಣೆಯಲ್ಲಿ ಭಾಗವಹಿಸೋಣ. ಮುಂದಿನ ದಿನಗಳಲ್ಲಿ ಶಾಂತಯುತ ಮೆರವಣಿಗೆ ಮಾಡಲು ಜಿಲ್ಲಾಡಳಿತದಿಂದ ಮಾರ್ಗಸೂಚಿಗಳನ್ನು ರೂಪಿಸಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.
ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ.ಗಳ ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಪ್ರಾಧಿಕಾರ ಹಾಗೂ ಸಾರ್ವಜನಿಕ ಕುಂದುಕೊರತೆ ನಿವಾರಣಾ ಸಮಿತಿ ಅಧ್ಯಕ್ಷರಾದ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ನಗರದ ವಿದ್ಯಾನಗರವೊಂದರಲ್ಲಿ ಮನೆ ಬಾಗಿಲು ಮುರಿದು 31.34 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ 6 ಜನ ಕಳ್ಳರ ಬಂಧಿಸುವಲ್ಲಿ ದಾವಣಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.ಕಳ್ಳರಿಂದ 23.35 ಲಕ್ಷ ಚಿನ್ನಾಭರಣ, 60 ಸಾವಿರ ಮೌಲ್ಯದ ಬೆಳ್ಳಿ ಆಭರಣ, ಎರಡು ಬೈಕ್ ಗಳ ಜಪ್ತಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.