ಬೆಳಗಾವಿ ಮೇಯರ್, ಉಪಮೇಯರ್ ಚುನಾವಣೆ ವಿಚಾರ. ಇಷ್ಟು ವರ್ಷ ಭಾಷಾ ರಾಜಕಾರಣದ ಮೇಲೆ ಮೇಯರ್ ಆಗ್ತಿದ್ರು. ಅದಕ್ಕೆ ತೆರೆ ಎಳೆಯಲು ಪಕ್ಷದ ಆಧಾರದ ಮೇಲೆ ಚುನಾವಣೆ ನಡೆಯುತ್ತದೆ ಎಂದು ಬೆಳಗಾವಿಯಲ್ಲಿ ಶಾಸಕ ಅಭಯ ಪಾಟೀಲ್ ಹೇಳಿದ್ರು.
ಇಂದು ಬೆಳಗಾವಿ ಮೇಯರ್, ಉಪಮೇಯರ್ ಚುನಾವಣೆ. ಜೋರಾಗಿದೆ ಮೇಯರ್, ಉಪಮೇಯರ್ ಸ್ಥಾನ ಯಾರಿಗೆ ಎಂಬ ಚರ್ಚೆ. ಬೆಳಗಾವಿ ಮಹಾನಗರ ಪಾಲಿಕೆ ಒಟ್ಟು 58 ಸದಸ್ಯರ ಬಲ ಹೊಂದಿದೆ. ಮೊದಲ ಸಲ ಪಾಲಿಕೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ.
ಚುನಾವಣೆ ನಡೆದು ಒಂದೂವರೆ ವರ್ಷದ ನಂತರ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಹುದ್ದೆಗೆ ಚುನಾವಣೆ. 2021ರ ಸೆಪ್ಟೆಂಬರ್ 3ರಂದು ಪಾಲಿಕೆಗೆ ಚುನಾವಣೆ ನಡೆದಿತ್ತು. ಆದ್ರೆ ಮೇಯರ್, ಉಪಮೇಯರ್ ಆಯ್ಕೆ ನಡೆದಿರಲಿಲ್ಲ. ಈಗ ಮೇಯರ್, ಉಪಮೇಯರ್ ಆಯ್ಕೆ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.