ಲೋಕಾಯುಕ್ತ ಕಳೆದ ಆರು ತಿಂಗಳಿನಿಂದ ತನಿಖೆ ಮಾಡುತ್ತಿದೆ. ಎರಡು ಗಂಟೆಗಳಿಗೂ ಹೆಚ್ಚು ಕಾಲ ನನ್ನನ್ನು ವಿಚಾರಣೆ ಮಾಡಿದರು. ಇವರಿಗಿಂತ ಸಿಬಿಐನವರೇ ಪರವಾಗಿಲ್ಲ. ಲೋಕಾಯುಕ್ತದವರು ವಿಚಿತ್ರ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
DK Shivakumar : ನಾನೇನು ತಪ್ಪು ಮಾಡಿಲ್ಲ. ಎಲ್ಲಾ ಬೆಳವಣಿಗೆಗಳನ್ನು ನೀವು (ಮಾಧ್ಯಮದವರು) ಜನರು ನೋಡಿದ್ದಾರೆ. ನಾನು ಕೇವಲ ಪಕ್ಷದ ಕೆಲಸ ಮಾತ್ರ ಮಾಡಿದ್ದೇನೆ. ಪಕ್ಷದ ಕೆಲಸ ಮಾಡಿದ ಕಾರಣ ಸಾಕಷ್ಟು ತೊಂದರೆ ಅನುಭವಿಸಿದ್ದೇನೆ. ಮುಂದಕ್ಕೂ ತೊಂದರೆ ಕೊಟ್ಟರೆ ಕಾಪಾಡಲು ಆ ಭಗವಂತನಿದ್ದಾನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.