"ರಾಜ್ಯದ ಒಂದಿಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲು ಅವರು ನಿಜಕ್ಕೂ ತಯಾರಿಲ್ಲದಿದ್ದರೆ ತಕ್ಷಣವೇ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗಲಿ ಹಾಗೆಯೇ ಕೇಂದ್ರ ಗೃಹ ಸಚಿವರು ಈ ವಿಷಯದ ಬಗ್ಗೆ ಸಾರ್ವಜನಿಕವಾಗಿ ಭರವಸೆ ನೀಡಲಿ" ಎಂದು ಡಿಕೆಶಿ ಸವಾಲೆಸೆದಿದ್ದಾರೆ.
ಕೋವಿಡ್ ನೆಪವೊಡ್ಡಿ ಚುನಾವಣೆಯನ್ನು ಮುಂಚಿತವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂಬ ಅನಧಿಕೃತ ಮಾಹಿತಿ ಬಂದಿದೆ. ಅವರು ಯಾವಾಗ ಚುನಾವಣೆ ಮಾಡಿದರೂ ನಮ್ಮ ಪಕ್ಷ ಸಿದ್ಧವಿದೆ ಎಂದು ಡಿಕೆಶಿ ಹೇಳಿದ್ದಾರೆ.
ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ಡಿಕೆಶಿ ಹೇಳಿಕೆ ವಿಚಾರ. ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ. ಮಂಗಳೂರಿನ ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಸ್ಪಷ್ಟವಿದೆ. ಅವನು ಟೆರರ್ ಲಿಂಕ್ ಇರುವುದು ಸ್ಪಷ್ಟವಾಗಿ ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರ ಹೇಳಿಕೆ ಶೋಭೆ ತರುವುದಿಲ್ಲ. ಚುನಾವಣೆಯಲ್ಲಿ ಮೈನಾರಿಟಿ ವೋಟು ಬರುತ್ತೆ ಅಂತ ಹೀಗೆ ಮಾಡ್ತಾರೆ ಎಂದು ಸಿಎಂ ತಿರುಗೇಟು ನೀಡಿದ್ದಾರೆ.
ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ಮತ್ತೆ ಸಮರ್ಥಿಸಿಕೊಂಡ ಡಿಕೆಶಿ. ಸ್ಫೋಟದ ಬಗ್ಗೆ ನಾನು ಕೊಟ್ಟಿರೋ ಹೇಳಿಕೆಯಲ್ಲಿ ಸತ್ಯಾಂಶ ಇದೆ ಎಂದು ಸದಾಶಿವನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಗಡಿ ವಿವಾದ ಈಗಾಗಲೇ ಇತ್ಯರ್ಥ ಆಗಿರುವ ವಿಚಾರ. ನಮ್ಮ ಗಡಿಯೊಳಗಿನ ಪ್ರದೇಶ ನಮ್ಮದು, ಅವರ ಗಡಿಯೊಳಗಿನ ಪ್ರದೇಶ ಅವರದ್ದು. ಇಲ್ಲಿರುವವರೆಲ್ಲರೂ ನಮ್ಮವರೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅರ್ಜಿ ಸಲ್ಲಿಸುವಾಗ ಆಕಾಂಕ್ಷಿಗಳಿಂದ ದೇಣಿಗೆ ಸಂಗ್ರಹ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಇದು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ ಈ ಬಾರಿ ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ.
ಸರ್ಕಾರದಿಂದ ಮತದಾರರ ಮಾಹಿತಿ ಕಳ್ಳತನ ಆರೋಪ. ಕಮಿಷನರ್ ಪ್ರತಾಪ್ ರೆಡ್ಡಿ ಕಚೇರಿಗೆ ಕಾಂಗ್ರೆಸ್ ದೂರು. ಸಿದ್ದರಾಮಯ್ಯ, ಡಿಕೆಶಿವಕುಮಾರ್, ರಾಮಲಿಂಗರೆಡ್ಡಿ, ಯು ಟಿ ಖಾದರ್ ನೇತೃತ್ವದ ನಿಯೋಗದಿಂದ ದೂರು. ಉನ್ನತ ತನಿಖೆ ನಡೆಸುವಂತೆ ದೂರಿನಲ್ಲಿ ಮನವಿ.
ಇಂದು ದೆಹಲಿಯಲ್ಲಿ ಮತ್ತೆ ವಿಚಾರಣೆ..- ಯಂಗ್ ಇಂಡಿಯಾದಲ್ಲಿ ಅಕ್ರಮ ಹಣ ಹೂಡಿಕೆ ಆರೋಪ.. ಕೆಪಿಸಿಸಿ ಅಧ್ಯಕ್ಷರಿಗೆ ತಪ್ಪದ ಜಾರಿ ನಿರ್ದೇಶನಾಲಯ ವಿಚಾರಣೆ.. ದೆಹಲಿ ಕಚೇರಿಯಲ್ಲಿ ಇಂದೇ ವಿಚಾರಣೆ ಮುಕ್ತಾಯ ಅನುಮಾನ..
ನನಗೆ ಯಾರೂ ಮಾಲೆ ಹಾಕಬೇಡಿ; ಚುನಾವಣೆಯಲ್ಲಿ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿ ಗೆಲುವಿನ ಮಾಲೆ ಹಾಕಿ- ಭಾರತ್ ಜೋಡೋ ಯಾತ್ರೆಯ ಫೂರ್ವಭಾವಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್
ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಅಂತ ಒಕ್ಕಲಿಗರಲ್ಲೇ ಫೈಟ್ ಆರಂಭಗೊಂಡಿದೆ. ಕಾಂಗ್ರೆಸ್ನಲ್ಲಿ ಡಿ.ಕೆ.ಶಿವಕುಮಾರ್, ಜೆಡಿಎಸ್ನಲ್ಲಿ ಹೆಚ್.ಡಿ.ಕುಮಾರಸ್ವಾಮಿ ನಡುವೆ ಫೈಟ್ ಆರಂಭಗೊಂಡಿದ್ದು, ಚಿತ್ರದುರ್ಗದ ಹಿರಿಯೂರು ನಗರದಲ್ಲಿ ನಡೆದ ಒಕ್ಕಲಿಗರ ಸಮಾವೇಶದಲ್ಲಿ ನಂಜಾವಧೂತ ಶ್ರೀಗಳು ಡಿಕೆ - ಹೆಚ್ಡಿಕೆ ಯಾರೇ ಆದರೂ ಆಗಲಿ. ಆದರೆ ನಮ್ಮವರೇ ಆಗಲೇಬೇಕು ಎಂದು ಫತ್ವಾ ಹೊರಡಿಸಿದರು.
ಇದುವರೆಗೂ ನನಗೆ ಎಐಸಿಸಿಯಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ದಾವಣಗೆರೆಯಲ್ಲಿ ಶಾಸಕ ಜಮೀರ್ ಅಹಮದ್ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ವೇಳೆ ಅಧ್ಯಕ್ಷರು ದೊಡ್ಡವರು ಇದ್ದಾರೆ ಎಂದು ಡಿಕೆಶಿಗೆ ಟಾಂಗ್ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಬಂದಿದೆ. ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಡಿಕೆಶಿ ನಿನ್ನೆ ರಾತ್ರಿ 9 ಗಂಟೆ ಡಿಕೆಶಿ ದೆಹಲಿಗೆ ತೆರಳಿದ್ದು, ಇಂದು ಹೈಕಮಾಂಡ್ ಭೇಟಿಯಾಗಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.