ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು, ಕೆಲವು ಜಿಹಾದಿ ಪುಂಡರು ನಿಯಮ ಉಲ್ಲಂಘಿಸಿದರು ಎಂಬ ಕಾರಣಕ್ಕೆ ಅವರ ಮೇಲೆ ಕ್ರಮ ಕೈಗೊಳ್ಳಲು ಮುಂದಾದರೆ, ಹಾಡುಹಗಲೇ ಸಮವಸ್ತ್ರ ಧರಿಸಿದ ಪೊಲೀಸ್ ಮೇಲೆ ಗುಂಪು ಹಲ್ಲೆ ನಡೆಸುವಷ್ಟರ ಮಟ್ಟಿಗೆ ಜಿಹಾದಿಗಳು ಸೊಕ್ಕಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
ಕುಮಾರಸ್ವಾಮಿಯವರಿಗೆ ಸುಲಭದಲ್ಲಿ ಸಿಗುವ ಹೈಕಮಾಂಡ್ ಬಿಜೆಪಿ ನಾಯಕರಿಗೆ ಸಿಗದಿರುವುದೇಕೆ ? ಕರ್ನಾಟಕದಲ್ಲಿ ಸಾಂವಿಧಾನಿಕ ಹುದ್ದೆಯಾದ ವಿಪಕ್ಷ ನಾಯಕನ ಸ್ಥಾನ ಹಲವು ತಿಂಗಳುಗಳಿಂದ ಖಾಲಿಯಿರುವುದು ಬಿಜೆಪಿಗೆ ಗಂಭೀರ ವಿಷಯವಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಬಿ.ಎಸ್.ಯಡಿಯೂರಪ್ಪ ಸರ್ಕಾರವು ಕೊರೊನಾವನ್ನು ನಿಭಾಯಿಸುವುದರ ವಿಚಾರವಾಗಿ ಕೇಂದ್ರ ನಾಯಕತ್ವಕ್ಕೆ ತೃಪ್ತಿ ಇದೆ, ಸದ್ಯ ರಾಜ್ಯದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಹಿರಿಯ ಬಿಜೆಪಿ ನಾಯಕ ಸದಾನಂದ ಗೌಡ ಹೇಳಿದ್ದಾರೆ.
ರಸಗೊಬ್ಬರಗಳ ಬೆಲೆ ಏರಿಕೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ರಸಗೊಬ್ಬರಗಳ ಬೆಲೆ ಹೆಚ್ಚಾಗಿದೆ, ಇದು ಈಗ ದೇಶೀಯ ಮಾರುಕಟ್ಟೆಯಲ್ಲಿ ಪ್ರತಿಫಲಿಸಿದೆ
ಪ್ಯಾರಾಸೆಟಮೊಲ್, ಅಜಿತ್ರೋಮೈಸಿನ್, ಹೈಡ್ರೋಕ್ಸಿಕ್ಲೋರೋಕ್ವಿನ್ ಸೇರಿದಂತೆ ಎಲ್ಲ ಅತ್ಯವಶ್ಯಕ ಔಷಧಗಳು ಹಾಗೂ ಅವನ್ನು ತಯಾರಿಸಲು ಬೇಕಾಗುವ ಮೂಲ ರಾಸಾಯನಿಕಗಳು (ಎಪಿಐ) ಮುಂದಿನ ಹಲವು ತಿಂಗಳ ತನಕ ಸಾಕಾಗುವಷ್ಟು ದಾಸ್ತಾನು ಇದೆ. ಔಷಧಗಳ ಸಾಗಣೆ, ಸರಬರಾಜು ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜೊತೆ ಸೇರಿ ಹಲವು ತುರ್ತು ಕ್ರಮಗಳನ್ನು ಕೈಗೊಂಡಿದೆ.
ಕೊರೋನಾವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇದರ ಪರಿಣಾಮ ಈಗ ರಾಜ್ಯದಲ್ಲಿಯೂ ಕೂಡ ಬೀರಿದೆ. ಈ ಹಿನ್ನಲೆಯಲ್ಲಿ ವಿಶೇಷವಾಗಿ ರಾಜ್ಯದಲ್ಲಿನ ಮೈಸೂರು ಮತ್ತು ಬೆಂಗಳೂರು ನಗರಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ವಿಚಾರವಾಗಿ ಸ್ವತಃ ಪ್ರಧಾನಿ ಕಚೇರಿ ಕಾಳಜಿ ವಹಿಸುತ್ತಿದೆ.
ನೆರೆ ಪರಿಹಾರ ಕಾರ್ಯಗಳಿಗಾಗಿ ಈಗಾಗಲೇ ಕೇಂದ್ರ ಸರ್ಕಾರ 380 ಕೋಟಿ ರೂ.ಗಳನ್ನು ತುರ್ತಾಗಿ ಬಿಡುಗಡೆ ಮಾಡಿದೆ. ಮಧ್ಯಂತರ ಪರಿಹಾರವನ್ನು ಒಂದು ತಿಂಗಳೊಳಗೆ ಬಿಡುಗಡೆ ಮಾಡಲಿದೆ ಎಂದು ಡಿವಿಎಸ್ ಹೇಳಿದರು.
ಬಿಜೆಪಿ ವಿರುದ್ಧ ದಂಗೆ ಏಳುವಂತೆ ಜನತೆಗೆ ಕರೆ ನೀಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ದೂರು ಸಲ್ಲಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.