Eshwara Khandre: ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಸೂಚನೆ ಮಾಡಿರುವ ಕಸ್ತೂರಿ ರಂಗನ್ ವರದಿಯ ಕುರಿತಂತೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದೂ ತಿಳಿಸಿದ್ದಾರೆ.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ನಾಳೆಯಿಂದಲೇ ಪಶ್ಚಿಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದ ಬಳಿ ಮೃತ ಮಾದಣ್ಣನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪ ನಮನ ಸಲ್ಲಿಸಿದ ಈಶ್ವರ ಖಂಡ್ರೆ, ಆನೆಗಳ ಇರುವಿಕೆಯನ್ನು ತಿಳಿಯುವಲ್ಲಿ ನೈಪುಣ್ಯತೆ ಹೊಂದಿದ್ದ ಮಾದಣ್ಣ ನಿಧನದಿಂದ ಇಲಾಖೆ ಒಬ್ಬ ಪ್ರಾಮಾಣಿಕ ಸಿಬ್ಬಂದಿಯನ್ನು ಕಳೆದುಕೊಂಡಿದೆ ಎಂದರು.
Eshwara Khandre: ಕಳದ ವರ್ಷ ಏಪ್ರಿಲ್ ನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ವತಿಯಿಂದ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
Basanagowda Patil Yatnal: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ, ಅವರ ಹೆಣ್ಣುಮಕ್ಕಳನ್ನು ಹೊತ್ತೊಯ್ಯುತ್ತಾರೆ ಎಂದು ಊಹಾತ್ಮಕ ಹೇಳಿಕೆ ನೀಡಿ, ಮತದಾರರಲ್ಲಿ ಭೀತಿ ಹುಟ್ಟಿಸುತ್ತಿರುವ ಮತ್ತು ದ್ವೇಷ ಬಿತ್ತುತ್ತಿರುವ ಯತ್ನಾಳ್ ವಿರುದ್ಧ ಚುನಾವಣಾ ಆಯೋಗ ತತ್ ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Eshwara Khandre: ಇದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.
Eshwara Khandre: ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2024-25ನೇ ಸಾಲಿನ ಆಯವ್ಯಯ ವಂಚಿತರು, ಬಡವರು, ಮಹಿಳೆಯರು ಮತ್ತು ಮಧ್ಯಮ ವರ್ಗದ ಆಶಾಕಿರಣವಾಗಿ ಹಾಗೂ ರಾಜ್ಯದ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಸರ್ವಸ್ಪರ್ಶಿ ಬಜೆಟ್ ಆಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
Environment Minister Eshwara Khandre: ಸುತ್ತೂರು ಆದಿ ಶಿವರಾತ್ರೀಶ್ವರ ಶಿವಯೋಗಿಯವರ ಜಾತ್ರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಮೇಳಕ್ಕೆ ಚಾಲನೆ ನೀಡಿ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಗಿಡದಲ್ಲಿ ಹೂ ಬಿಡುವುದು ಪ್ರಕೃತಿ, ಅದನ್ನು ಕಿತ್ತು ಎಸೆದರೆ ವಿಕೃತಿ, ಅದನ್ನು ದಾರದಿಂದ ಪೂಣಿಸಿದರೆ ಆಗುತ್ತದೆ ಆಕೃತಿ, ಆ ಆಕೃತಿಯನ್ನು ದೇವರಿಗೆ ಅರ್ಪಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿದರು.
ರಾಜ್ಯದಲ್ಲಿ ಆನೆ ಮತ್ತು ಮಾನವ ಸಂಘರ್ಷ ತಪ್ಪಿಸಲು 200 ಕೋಟಿ ರೂ ವೆಚ್ಚದಲ್ಲಿ ಬ್ಯಾರಿಕೇಡ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ವಿಧಾನ ಪರಿಷತ್ನಲ್ಲಿ ತಿಳಿಸಿದರು.
ಬಿಜೆಪಿ ಜನಸ್ಪಂದನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ಈಶ್ವರ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಬಿಜೆಪಿ ನಾಯಕರು ಅಂಜುಬುರುಕರು. ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿ ಅವರಿಗೆ ಭಯ. ಹಾಗಾಗಿ ಸಿದ್ದರಾಮಯ್ಯ ವಿರುದ್ಧ ಟೀಕೆ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.