Chief Minister Siddaramaiah: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 34639 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Brazil : ದಕ್ಷಿಣ ಬ್ರೆಜಿಲಿಯನ್ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್ನಾದ್ಯಂತ ವಿನಾಶಕಾರಿ ಪ್ರವಾಹದಿಂದ ಸಿಲುಕಿರುವ ಜನರನ್ನು ಸ್ಥಳಾಂತರಿಸಲು ರಕ್ಷಕರು ಧಾವಿಸಿದ್ದು, ಸಾವಿನ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಬದುಕುಳಿದವರು ಆಹಾರ ಮತ್ತು ಮೂಲ ಸಾಮಗ್ರಿಗಳನ್ನು ಹುಡುಕುತ್ತಿದ್ದಾರೆ.
ನೆರೆ ಸಂತ್ರಸ್ತರಿಗೆ ಸೂರು ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. 2019, 2020ರ ನೆರೆ ಸಂತ್ರಸ್ತರಿಗೆ ಸರ್ಕಾರ ಇನ್ನೂ ಸೂರು ಕಲ್ಪಿಸಿಲ್ಲ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ..
ನಮ್ಮ ರೈಲ್ವೇ ಸಚಿವ ಸುರೇಶ್ ಅಂಗಡಿ (Suresh Angadi) ಅವರ ಪಾರ್ಥಿವ ಶರೀರವನ್ನು ದೆಹಲಿಯಿಂದ ಇಲ್ಲಿಗೆ ತಂದು ದರ್ಶನಕ್ಕೆ ಅವಕಾಶ ನೀಡಿ ಅವರಿಗೆ ಇಲ್ಲಿ ಅಂತ್ಯಕ್ರಿಯೆ ಮಾಡಬಹುದಿತ್ತು- ಡಿ.ಕೆ ಶಿವಕುಮಾರ್
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವರೆಗಿನ ಅನುಭವದ ಪ್ರಕಾರ ರಾಜ್ಯದ ಹಿತಾಸಕ್ತಿ ರಕ್ಷಣೆಯ ಪರ ಗಟ್ಟಿಯಾಗಿ ನಿಂತು @PMOIndia ಅವರ ಜೊತೆ ಮಾತನಾಡಿ ಹೆಚ್ಚು ಪರಿಹಾರ ಪಡೆಯುವ ಶಕ್ತಿ @CMofKarnataka ಇಲ್ಲವೇ ಸಚಿವರಿಗಿಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಪ್ರವಾಹದಿಂದ ಉಂಟಾದ ಅಂದಾಜು ನಷ್ಟ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ. ರಾಜ್ಯದ ಪ್ರಸ್ತಾವ ಮತ್ತು ಕೇಂದ್ರ ಪರಿಶೀಲನಾ ತಂಡ ಸಲ್ಲಿಸಿರುವ ವರದಿ ತಾಳೆಯಾಗುತ್ತಿಲ್ಲ ಎಂದು ಹೇಳಿ ಪರಿಶೀಲಿಸಲು ತಿಳಿಸಿದೆ ಎಂದು ಸಿಎಂ ಹೇಳಿದ್ದಾರೆ.
ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ನರೇಂದ್ರ ಮೋದಿ ನೇತೃತ್ವದ ಸರಕಾರಕ್ಕಿಲ್ಲ. ನ್ಯಾಯಬದ್ಧ ಪರಿಹಾರ ಕೇಳಿ ವರದಿ ಸಲ್ಲಿಸುವ ಯೋಗ್ಯತೆ ನಿಮಗೂ ಇಲ್ಲ. ಆರ್ಥಿಕವಾಗಿ ಮಾತ್ರವಲ್ಲ, ಬೌದ್ದಿಕವಾಗಿಯೂ ನಿಮ್ಮ ಸರ್ಕಾರ ದಿವಾಳಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ದಾಖಲೆಗಳನ್ನು ಸಲ್ಲಿಸಿಲ್ಲ ಎಂದಿರುವ ಕೇಂದ್ರ ಸರ್ಕಾರ, ನಷ್ಟದ ಪ್ರಮಾಣವನ್ನು ದಾಖಲೆಗಳ ಪ್ರಮಾಣೀಕರಣದ ಸಮೇತ ಸಲ್ಲಿಸಲು ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿದೆ.
ರಾಜ್ಯಕ್ಕೆ ನೆರೆಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಂದಿಸಲಿದ್ದು, ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಪರಿಹಾರ ಬಿಡುಗಡೆಯಾಗಲಿದೆ ಎಂದು ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಯಡಿಯೂರಪ್ಪನವರೇ, ನಿಮಗೆ ಹಾಗೂ 25 ಬಿಜೆಪಿಯ ಸಂಸದರಿಗೆ ಪ್ರಧಾನಮಂತ್ರಿಗಳ ಜೊತೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯ ಇಲ್ಲ ಎಂದಾದರೆ ನಾವೂ ನಿಮ್ಮ ಜೊತೆ ದೆಹಲಿಗೆ ಬರುತ್ತೇವೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ ತುರ್ತು ಪರಿಹಾರಕ್ಕೆ ಅಗತ್ಯ ಹಣಕಾಸಿನ ನೆರವು ಒದಗಿಸಿದೆ. ಆದರಿಂದ ಪ್ರಧಾನಿ ಮೋದಿ ಬಳಿ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಅಗತ್ಯ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದ ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ನಷ್ಟವನ್ನು ಪರಿಹರಿಸಲು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ 1000 ಕೋಟಿ ರೂ. ವಿಶೇಷ ಪರಿಹಾರ ಪ್ಯಾಕೇಜ್ ಕೋರಿ ಪತ್ರ ಬರೆದಿದ್ದಾರೆ.
ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಮಳೆ ಕಡಿಮೆಯಾದ ಬಳಿಕ, ನಾಲ್ಕೈದು ದಿನಗಳಲ್ಲಿ ಈ ಭಾಗದಲ್ಲಿ ಸರ್ವೇ ಮಾಡಿ ವರದಿ ನೀಡಲಿದ್ದಾರೆ. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವರದಿಯನ್ನು ಆಧರಿಸಿ ವಿಶೇಷ ಪ್ಯಾಕೇಜ್ ಘೋಷಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಪ್ರವಾಹ ಪರಿಹಾರ ಕಾರ್ಯಕ್ಕೆ ಎಲ್ಲಾ ರಾಜ್ಯಗಳ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು, ಸಂಸದರು ಮತ್ತು ವಿಧಾನ ಪರಿಷತ್ ಸದಸ್ಯರು ಒಂದು ತಿಂಗಳ ವೇತನ ನೀಡುವಂತೆ ರಾಹುಲ್ ಗಾಂಧಿ ನಿರ್ದೇಶನ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.