2015ರಲ್ಲಿ ಗುಜರಾತ್ನಲ್ಲಿ ಪಾಟೀದಾರ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ವೇಳೆ ಮೆಹಸಾನಾದಲ್ಲಿ ನಡೆದ ದೊಂಬಿ ಪ್ರಕರಣದಲ್ಲಿ ಹಾರ್ದಿಕ್ಗೆ ಮೆಹಸಾನಾ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ನಮ್ಮ ರಕ್ಷಣಾ ಪಡೆಗಳನ್ನು ಸಾಮಾನ್ಯ ರಾಜಕೀಯ ಭಾಷಣಗಳಲ್ಲಿ ವ್ಯಾಖ್ಯಾನಿಸಲು ಸಾಧ್ಯವಿಲ್ಲ, ಹೀಗಾಗಿಯೇ ಕೆಲ ರಾಜಕಾರಣಿಗಳು ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಜನರಲ್ ವಿ.ಕೆ.ಸಿಂಗ್ ಹೇಳಿದ್ದಾರೆ.
ದೇಶದ ಭದ್ರತೆ, ಘನತೆ ಮತ್ತು ಸಮೃದ್ಧಿಗಾಗಿ ಮೋದಿ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಜನತೆಗೆ ವಿವರಿಸಲಾಗುವುದು ಎಂದು ಮುಕ್ತಾರ್ ಅಬ್ಬಾಸ್ ನಖ್ವಿ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಒರಿಸ್ಸಾ ವಿಧಾನಸಭೆ ಚುನಾವಣೆಯಲ್ಲಿ ಕೋರೈ ವಿಧಾನಸಭಾ ಕ್ಷೇತ್ರದಿಂದ ಕಾಜಲ್ ನಾಯಕ್ ಎನ್ನುವ ಮಂಗಳಮುಖಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ)ದಿಂದ ಕಣಕ್ಕೆ ಇಳಿಯಲಿದ್ದಾರೆ. ಬಿಎಸ್ಪಿ ಪಕ್ಷದಿಂದ ಟಿಕೆಟ್ ದೊರಕುವ ಮೊದಲು ಹಲವು ಪಕ್ಷಗಳನ್ನು ಸಂಪರ್ಕಿಸಲಾಗಿತ್ತು ಆದರೆ ಯಾವ ಪಕ್ಷಗಳು ತಮಗೆ ಸೂಕ್ತ ಬೆಂಬಲ ನೀಡಲಿಲ್ಲ ಎಂದು ಹೇಳಿದರು.
ಏಪ್ರಿಲ್-ಮೇ ತಿಂಗಳಿನಲ್ಲಿ ಒಟ್ಟು 7 ಹಂತಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್ ಮತ್ತು ಮಾಯಾವತಿ ಜಂಟಿಯಾಗಿ 11 ರ್ಯಾಲಿಗಳಲ್ಲಿ ಭಾಗವಹಿಸಲಿದ್ದು, ಎಸ್ಪಿ-ಬಿಎಸ್ಪಿ-ಆರ್ಎಡಿ ಮೈತ್ರಿ ಬೆಂಬಲಿಸುವಂತೆ ಮತದಾರರನ್ನು ಮನವಿ ಮಾಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.