Guarantee schemes: ರಾಜ್ಯ ಸರ್ಕಾರ ಚುನಾವಣೆ ವೇಳೆ ಘೋಷಣೆ ಮಾಡಿದ್ದಂತೆ ಗ್ಯಾರಂಟಿಗಳನ್ನ ಜಾರಿ ಮಾಡಲು ಸಜ್ಜಾಗಿದೆ. ಈಗಾಗಲೇ ಸರ್ಕಾರದ ಮೊದಲ ಗ್ಯಾರಂಟಿಯಾದ ಶಕ್ತಿಯೋಜನೆ ಜಾರಿಯಾಗಿದ್ದು, ಮಹಿಳೆಯರಿಂದ ಉತ್ತಮ ರೆಸ್ಪಾನ್ಸ್ ಸಿಗ್ತಿದೆ. ಆದ್ರೆ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಕೆ ಮಾತ್ರ ಪದೇ ಪದೇ ಮುಂದೂಡ್ತಿರೋದು ಹಲವು ಪ್ರಶ್ನೆಗಳನ್ನು ಮೂಡಿಸಿದೆ.
ಒಂದು ಆರ್.ಆರ್.ಸಂಖ್ಯೆಯ ಒಂದಕ್ಕೆ ಮಾತ್ರ ಉಚಿತ ವಿದ್ಯುತ್ ಸಂಪರ್ಕ
ಬಾಡಿಗೆ ಮನೆಯಲ್ಲಿ ವಾಸವಿರುವವರು ಗೃಹ ಜ್ಯೋತಿ ಯೋಜನೆಯಿಂದ ವಂಚಿತರು
ಉಚಿತ ವಿದ್ಯುತ್ ಪಡೆಯೋದು ಹೇಗೆ?
ಅರ್ಜಿದಾರರು ಬಳಕೆದಾರರ ಗುರುತಿನ ಸಂಖ್ಯೆ ಆಧಾರ್ ಗೆ ಜೋಡಿಸಬೇಕು
ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು
ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಯಾವ ನೈತಿಕ ಹಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ನನ್ನ ಅಂದಾಜಿನ ಪ್ರಕಾರ ಪ್ರತಿ ವರ್ಷ ಈ ಯೋಜನೆಗಳಿಗೆ 85 ಸಾವಿರ ಕೋಟಿ ಬೇಕಾಗುತ್ತೆ ಎಲ್ಲಿಂದ ತರ್ತೀರಿ? ಅಂತ ಇದಕ್ಕೆ ಉತ್ತರ ಕೊಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.
ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳು ರಾಜ್ಯದ ವಾತಾವರಣವನ್ನು ಹಾಳುಮಾಡುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
HD Kumarswamy: ಈ ಆತ್ಮಾವಲೋಕನ ಸಭೆಯಲ್ಲಿ ಪಕ್ಷದ ಸಂಘಟನೆ ಬಗ್ಗೆ ಹೆಚ್ಚು ಒತ್ತು ಕೊಟ್ಟು ಚರ್ಚೆ ಮಾಡುತ್ತೇವೆ. ಕಾರ್ಯಕರ್ತರಲ್ಲಿ ವಿಶ್ವಾಸದ ಕೊರತೆ ಇದೆ. ಯುವಕರಿಗೆ, ಕಾರ್ಯಕರ್ತರಿಗೆ ಹೊಸ ಜವಾಬ್ದಾರಿ ಕೊಡಬೇಕು ಎಂಬ ಉದ್ದೇಶ ಇದೆ ಎಂದು ಎಚ್ಡಿಕೆ ಹೇಳಿದ್ದಾರೆ.
ಜನರು ವಿದ್ಯುತ್ ಬಿಲ್ ಕಟ್ಟುತ್ತಿಲ್ಲ, ಬಸ್ ಟಿಕೆಟ್ ಪಡೆಯಲು ನಿರಾಕರಿಸುತ್ತಿದ್ದಾರೆ. ನುಡಿದಂತೆ ನಡೆಯಬೇಕು, ಮಾತು ತಪ್ಪಿದರೆ ಜನರಿಗೆ ಮೋಸ ಮಾಡಿದಂತೆ ಆಗುತ್ತದೆ. ನಾವು ಜನರ ಪರ ನಿಲ್ಲುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
Assembly Elections 2023: ರಾಜ್ಯದ ಎಲ್ಲಾ ಜನರಿಗೂ ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಇದೀಗ ಕೊಟ್ಟ ಭರವಸೆಗಳಿಗೆ ಷರತ್ತು ಅನ್ವಯ ಅಂತಾ ಹೇಳುತ್ತಿದ್ದಾರೆ. ಜನರಿಗೆ ನೀಡಿದ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಲೇಬೇಕು ಎಂದು ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ್ ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.