ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ
ಕಳೆದ 15 ದಿನಗಳಿಂದ ರಾಜ್ಯಾದ್ಯಂತ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವುದು ಸರಕಾರದ ಗಮನಕ್ಕಿದೆ. ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಭರವಸೆ ನೀಡಿದರು.
Guest Lecture Recruitment: ಕಳೆದ ವರ್ಷ ನೇಮಕದ ಸಂದರ್ಭದಲ್ಲಿ ನಿಯಮಗಳು ಪಾಲನೆಯಾಗಿಲ್ಲವೆಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಈ ಬಾರಿ ನಿಯಮ ಉಲ್ಲಂಘಿಸಿದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
Minister Ashwatha Narayan : ಎನ್ಇಪಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹೆಚ್ಚಿನ ಉಪನ್ಯಾಸಕರ ಅಗತ್ಯವಿದೆ. ಹೀಗಾಗಿ ಮುಂಬರುವ ವರ್ಷಗಳಲ್ಲಿ ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ಅಗತ್ಯ ಬೀಳುತ್ತದೆ. ಆದ್ದರಿಂದ ಈಗಿರುವ 11 ಸಾವಿರ ಅತಿಥಿ ಉಪನ್ಯಾಸಕರು ಅಭದ್ರತೆಯ ಭಾವನೆ ಒಳಗಾಗುವ ಅಗತ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಅತಿಥಿ ಉಪನ್ಯಾಸಕರಲ್ಲಿ 9,881 ಮಂದಿ ಉದ್ಯೋಗಕ್ಕೆ ಕುತ್ತು ಉಂಟಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಕ್ರಮ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.
'ಈವರೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಂದಾಜು 14 ಸಾವಿರ ಮಂದಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಗ ಕಾರ್ಯಭಾರ ಮತ್ತು ವೇತನ ಎರಡನ್ನೂ ಸೂಕ್ತವಾಗಿ ನಿಗದಿಪಡಿಸಿ ಇವರ ಪೈಕಿ 10,600 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ವಾಸ್ತವ ಹೀಗಿರುವಾಗ, 9,881 ಮಂದಿ ಕೆಲಸ ಕಳೆದುಕೊಳ್ಳುವ ಪ್ರಶ್ನೆ ಎಲ್ಲಿ ಉದ್ಭವವಾಗುತ್ತದೆ?’ ಎಂದರು.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯದಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳ ಶಿಕ್ಷಕರಿಗೆ ಕಳೆದ ಏಪ್ರಿಲ್ ನಿಂದ ವೇತನ ಸಿಗದೇ ದೈನಂದಿನ ಜೀವನ ಸಾಗಿಸಲು ಪರದಾಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.