“ನ್ಯಾಯಾಂಗ ವ್ಯವಸ್ಥೆಯನ್ನು ಬದಿಗೊತ್ತಿ ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ರಕ್ಷಣೆಗೆ ಮುಂದಾಗಿದ್ದ ಗುಜರಾತ್ ಸರ್ಕಾರವನ್ನು ವಜಾಗೊಳಿಸಬೇಕು ಹಾಗೂ ಗುಜರಾತ್ ಸರ್ಕಾರದ ಜತೆ ಕೈಜೋಡಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು. ಈ ಪ್ರಕರಣದಲ್ಲಿ ಮೌನವಹಿಸಿರುವ ಪ್ರಧಾನಮಂತ್ರಿಗಳು ಜನರ ಕ್ಷಮೆ ಕೇಳಬೇಕು” ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಅವರು ಆಗ್ರಹಿಸಿದರು.
2002 ರ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ತನ್ನ ಕುಟುಂಬವನ್ನು ಕೊಂದ 11 ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೋ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರಲು ಸಮಿತಿಯನ್ನು ರಚಿಸಲು ಗುಜರಾತ್ ಸರ್ಕಾರ ನಿರ್ಧರಿಸಿದೆ ಎಂದು ಶನಿವಾರ ತಿಳಿಸಿದೆ. ಮುಂದಿನ ವಾರದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಿರುವುದರಿಂದ ಪ್ರಸ್ತುತ ಬಿಜೆಪಿ ಸರ್ಕಾರದ ಕೊನೆಯ ಸಭೆಯಾಗಬಹುದಾದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಾಂಘವಿ ಮತ್ತು ಕೇಂದ್ರ ಸಚಿವ ಪರಶೋತ್ತಮ್ ರೂಪಾಲಾ ಅವರು ಈ ನಿರ್ಧಾರವನ್ನು ಸುದ್ದಿಗಾರರಿಗೆ ತಿಳಿಸಿದರು.
Shrimad Bhagavad Gita Lessons - ಶಾಲಾ ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿಯ ಜ್ಞಾನ (Indian Culture) ನೀಡಲು ಗುಜರಾತ್ ಸರ್ಕಾರ (Gujarat Government) ಮಹತ್ವದ ಹೆಜ್ಜೆಯನ್ನಿಟ್ಟಿದೆ. ಹೌದು, ಇದೀಗ ಅಲ್ಲಿನ ಅಲ್ಲಿನ ಶಾಲೆಗಳಲ್ಲಿ 'ಶ್ರೀಮದ್ ಭಗವದ್ಗೀತೆ'ಯ (Shrimad Bhagavad Gita) ಪಾಠವನ್ನು ಹೇಳಿಕೊಡಲು ಸರ್ಕಾರ ನಿರ್ಧರಿಸಿದೆ. 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೋಸ್ಕರ ಈ ಉಪಕ್ರಮವನ್ನು ಆರಂಭಿಸಲಾಗುವುದು ಎನ್ನಲಾಗಿದೆ.
ನಿನ್ನೆಯಷ್ಟೇ ಫೈಝಾಬಾದ್ ಜಿಲ್ಲೆಯನ್ನು ಅಯೋಧ್ಯೆ ಎಂದು ಮರುನಾಮಕರಣ ಮಾಡುವುದಾಗಿ ಹೇಳಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈಗ ಅವರದೇ ಹಾದಿಯಲ್ಲಿ ಗುಜರಾತ್ ಸರಕಾರ ಮುನ್ನಡೆಯಿಟ್ಟಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.