ಚುನಾವಣೆ ಎರಡು ದಿನ ಇರುವಾಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಹಾಕ್ತಾರೆ. ಇದನ್ನ ಚುನಾವಣಾ ಆಯೋಗ ಗಮನಿಸಬೇಕು. ಸರ್ಕಾರದ ಹಣ ಕನ್ನಡಿಗರ ತೆರಿಗೆ ಹಣವನ್ನು ಚುನಾವಣೆ ವೇಳೆ ಹಾಕ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಗುಡುಗಿದರು..
ಕೆಂಪೇಗೌಡ ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ಕೇಂದ್ರ ವೈದ್ಯಕೀಯ ಮಂಡಳಿಯಿಂದ ಹೆಚ್ಚುವರಿಯಾಗಿ 100 ಯುಜಿ ಹಾಗೂ 68 ಪಿಜಿ ಸೀಟುಗಳ ಮಂಜೂರು ಮಾಡಿಸಿಕೊಡುವಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಕೇಂದ್ರದ ಆರೋಗ್ಯ ಸಚಿವ ಜೆಪಿ ನಡ್ಡಾ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಉಪಚುನಾವಣೆ ಪ್ರಚಾರದ ವೇಳೆ ಕುಮಾರಸ್ವಾಮಿ ಅವರ ಬಗ್ಗೆ ಜಮೀರ್ ಅವರು ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ಕೇಳಿದಾಗ, "ಅವರಿಬ್ಬರ ನಡುವೆ ಹಳೆಯ ಸ್ನೇಹ ಇದೆ. ಜಮೀರ್ ಅವರು ಕುಮಾರಸ್ವಾಮಿ ಯಾವ ಚಡ್ಡಿ ಹಾಕಿದ್ದಾರೆ ನೋಡಿದ್ದೇನೆ ಎನ್ನುತ್ತಾರೆ.
ಬಹಿರಂಗ ಪ್ರಚಾರದ ಕೊನೆಯ ಗಳಿಗೆಯಲ್ಲಿ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ನೀಡಿದ ಹೇಳಿಕೆ ಸಾಕಷ್ಟು ಸದ್ದು ಗದ್ದಲಕ್ಕೆ ಕಾರಣವಾಗುತ್ತಿದೆ. ಕುಮಾರಸ್ವಾಮಿಯವರನ್ನು ನಾನು ಪ್ರೀತಿಯಿಂದ ಕರಿಯಣ್ಣ ಅಂತಾನೇ ಕರೆಯೋದು. ಅವರು ನನ್ನನ್ನು ಕುಳ್ಳ ಅಂತಿದ್ರು” ಎಂದು ಜಮೀರ್ ಅಹ್ಮದ್ ಖಾನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಮಹಾರಾಷ್ಟ್ರದಲ್ಲಿ, ಕರ್ನಾಟಕದಲ್ಲಿ, ಗೋವಾದಲ್ಲಿ ಆಪರೇಶನ್ ಮಾಡಿ ಎಕ್ಸ್ಪರ್ಟ್ ಆಗಿರುವ ಬಿಜೆಪಿ ಚುನಾವಣೆಯ ಪಾವಿತ್ರ್ಯತೆಯನ್ನು ಕೆಡಿಸಲು ಹೊರಟಿದೆ. ಹಣದ ಹೊಳೆ ಹರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ನೆಲೆಘಟ್ಟನ್ನೇ ಅಲುಗಾಡಿಸಲು ಹೊರಟಿದೆ ಎಂದು ಚೆಲುವರಾಯಸ್ವಾಮಿ ಆರೋಪಿಸಿದ್ದಾರೆ.
Channapatna bypoll: ನಮಗೆ ರೈತರ, ಬಡ ಜನರ ಕಷ್ಟ ಸುಖಗಳ ಅರಿವಿದೆ. ಅವರ ಕಷ್ಟಕ್ಕೆ ಸ್ಪಂದಿಸುವ ಹೃದಯ ಯಾರಿಗಿರುತ್ತೋ ಅವರಿಗೆ ಮಾತೃ ಹೃದಯ ಇರುತ್ತದೆ. ಕಣ್ಣೀರಿನ ಬಗ್ಗೆ ವ್ಯಂಗ್ಯ ಮಾಡುವ ಜನರಿಗೆ ನಾನು ಇನ್ನೇನು ಹೇಳಲು ಬಯಸುವುದಿಲ್ಲ ಎಂದು ದೇವೇಗೌಡರು ಹೇಳಿದರು.
ಡಿಕೆಶಿಯನ್ನ ಎಚ್ಡಿಕೆಗೆ ಕಂಪೈರ್ ಮಾಡೋದು ಸರಿಯಲ್ಲ. ಪ್ರಧಾನಿ ಮೋದಿ ಅವರು ಕರೆದು ಎರಡು ಖಾತೆಗಳನ್ನು ಕೊಟ್ಟಿದ್ದಾರೆ. ಅಂತಹ ವ್ಯಕ್ತಿತ್ವವನ್ನ ಕುಮಾರಸ್ವಾಮಿ ಬೆಳೆಸಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮಹಾಜನತೆ ಹಣ ಹಾಕಿ ಕುಮಾರಸ್ವಾಮಿ ಗೆಲುವಿಗೆ ದುಡಿದರು. ಅವರನ್ನ ಸೋಲಿಸಲು ಎದುರಾಳಿ ಕಂಟ್ರಾಕ್ಟರ್ಗೆ 120 ಕೋಟಿ ರೂ. ಹಣವನ್ನ ರಿಲೀಸ್ ಮಾಡ್ತಾರೆ ಎಂದು ದೇವೇಗೌಡ ವಾಗ್ದಾಳಿ ನಡೆಸಿದರು.
HD Kumaraswamy: ಐಪಿಎಸ್ ಅಧಿಕಾರಿಯೊಬ್ಬರ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲು ಮಾಡಿರುವ ಎಫ್ಐಆರ್ ಹಾಸ್ಯಾಸ್ಪದ, ದುರುದ್ದೇಶಪೂರಿತ ಎಂದು ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
Channapatna bypoll: ಎಚ್.ಡಿ.ಕುಮಾರಸ್ವಾಮಿ ಅವರು ಯಾವುದಾದರೂ ಒಂದು ದೇವಾಲಯಕ್ಕೆ ಸಹಾಯ ಮಾಡಿದ್ದಾರಾ? ಸಮುದಾಯ ಭವನ ನಿರ್ಮಿಸಿದ್ದಾರಾ? ಸ್ಮಶಾನಕ್ಕೆ ಜಮೀನು ಕೊಡಿಸಿದ್ದಾರಾ? ಕೆರೆಗೆ ನೀರು ತುಂಬಿಸುವ ಕೆಲಸ ಮಾಡಿದ್ದಾರಾ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
Channapatna bypoll: ಕುತಂತ್ರದಿಂದ ನಿಖಿಲ್ ಅವರನ್ನು ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ, ರಾಮನಗರದಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಸೋಲಿಸಿದರು. ಇವತ್ತು ಡಿಸಿಎಂ ಹುದ್ದೆಯಲ್ಲಿರುವ ವ್ಯಕ್ತಿ ನಿಖಿಲ್ ಅವರನ್ನು ಕಂದ, ಶಿಶು ಎಂದು ಕರೆಯುತ್ತಿದ್ದಾರೆ. ಆ ಶಿಶುವನ್ನು ಕುತಂತ್ರದಿಂದ ಸೋಲಿಸಿದ್ದು ಯಾರು? ಅಭಿಮನ್ಯು ಕೂಡ ಶಿಶುವೇ ಅಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಉಪಚುನಾವಣೆಯಲ್ಲಿ ಜಿದ್ದಾಜಿದ್ದಿನ ಕಣ ಎಂದ್ರೆ ಅದು ಚನ್ನಪಟ್ಟಣ ಕ್ಷೇತ್ರ ತಮ್ಮ ಮಗನನ್ನು ಶತಾಯ ಗತಾಯ ಗೆಲ್ಲಿಸಿಕೊಳ್ಳು ಪಣ ತೊಟ್ಟಿದ್ದು, ಚನ್ನಪಟ್ಟಣ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ.. ಎಸ್ ಎಂ ಹಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವರಾದ ಎಚ್ಡಿ ಕುಮಾರಸ್ವಾಮಿ ಬೃಹತ್ ಪ್ರಚಾರ ಸಭೆ ನಡೆಸಿದ್ರು.. ನಿಖಿಲ್ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದ್ರು..
ಕುಮಾರಸ್ವಾಮಿ ನಮ್ಮ ಕೈ ಬಿಟ್ಟು ಹೋಗಿದ್ದಾರೆ ಎಂದು ಜನರಿಗೆ ಅರಿವಾಗಿದೆ. ಆ ಕ್ಷೇತ್ರದಲ್ಲಿ ಅವರು ಎರಡು ಬಾರಿ ನಿಂತರು, ಅವರ ಧರ್ಮಪತ್ನಿಯವರನ್ನು ನಿಲ್ಲಿಸಿದರು. ಈಗ ನಿರೀಕ್ಷೆಯಂತೆ ತಮ್ಮ ಪುತ್ರನನ್ನೂ ನಿಲ್ಲಿಸಿದ್ದಾರೆ. ಅವರು ಕಾರ್ಯಕರ್ತರಿಗೆ ಟಿಕೆಟ್ ನೀಡುವುದಿಲ್ಲ ಎಂದು ನಮಗೆ ಮುಂಚಿತವಾಗಿ ಖಚಿತವಾಗಿ ಗೊತ್ತಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಪ್ರಧಾನಮಂತ್ರಿ ಉದ್ಯೋಗ ಮೇಳ (ರೋಜ್ ಗಾರ್ ಮೇಳ)ದ 2ನೇ ಹಂತದಲ್ಲಿ ದೇಶದಾದ್ಯಂತ ವಿವಿಧ ಕೇಂದ್ರ ಸರಕಾರಿ ಇಲಾಖೆಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾದ 51,000 ಯುವಜನರಿಗೆ ದೇಶದ 40 ಸ್ಥಳಗಳಲ್ಲಿ ನೇರ ನೇಮಕಾತಿ ಪತ್ರ ನೀಡುವ ಕಾರ್ಯಕ್ರಮ ನಡೆಯಿತು.
Channapatna Assembly By-Election: ಮೈತ್ರಿ, ಒಗ್ಗಟ್ಟನ್ನು ಬದಿಗೆ ಸರಿಸಿ ಯೋಗೇಶ್ವರ್ ಕಾಂಗ್ರೆಸ್ಗೆ ಸೇರಿರುವುದರಿಂದ ಅವರ ರಾಜಕೀಯ ಭವಿಷ್ಯ ಹಾಳಾಗಿದೆ. ಎನ್ಡಿಎದಲ್ಲಿ ಯೋಗೇಶ್ವರ್ ಅವರಿಗೆ ಹಿರಿತನವಿತ್ತು. ಈಗ ಕಾಂಗ್ರೆಸ್ಗೆ ಸೇರಿ ಕೊನೆಯ ಸಾಲಿನಲ್ಲಿ ನಿಂತಿದ್ದಾರೆಂದು ಆರ್.ಅಶೋಕ್ ಹೇಳಿದ್ದಾರೆ.
ಕುತೂಹಲ ಮೂಡಿಸಿದ ಸಿ.ಪಿ.ಯೋಗೇಶ್ವರ್ ಮುಂದಿನ ನಡೆ
ಸ್ವತಂತ್ರ ಸ್ಪರ್ಧೆಯೋ..? ಇಲ್ಲ ಕೈ ಅಭ್ಯರ್ಥಿಯಾ..?
ಕಾಂಗ್ರೆಸ್ ಸೇರಿ ಸ್ಪರ್ಧೆ ಮಾಡ್ತಾರಾ ಯೋಗೇಶ್ವರ್..?
ಎಮ್ಎಲ್ಸಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿರುವ ಸಿಪಿವೈ
ಇಂದು ಸಭೆ ನಡೆಸಲಿರುವ ಸಿಎಂ, ಡಿಸಿಎಂ
ಸಭೆಯಲ್ಲಿ ಸಿಪಿವೈ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ..?
Channapatna By-Election 2024: ರಾಜೀನಾಮೆ ನೀಡಿದ ಬಳಿಕ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದೇನೆ ಎಂದು ಯೋಗೇಶ್ವರ್ ತಿಳಿಸಿದ್ದಾರೆ. ಮೂಲಗಳ ಪ್ರಕಾರ ಅವರು ಕಾಂಗ್ರೆಸ್ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.