ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿಕೆ.ಕೇಂದ್ರ ಹಿಂದಿ ಸಪ್ತಾಹ ದಿವಸ್ ಕಾರ್ಯಕ್ರಮ ಮಾಡುತ್ತಿದೆ. ಅವತ್ತಿನ ಕಾರ್ಯಕ್ರಮ ಧಿಕ್ಕಾರಿಸಿ ನಾವು ಕರಾಳ ದಿನ ಆಚರಿಸುತ್ತಿದ್ದೇವೆ.
ಹಿಂದಿ ದಿವಸ್ ಅನ್ನು ಪ್ರತಿ ವರ್ಷ ಸೆಪ್ಟೆಂಬರ್ 14 ರಂದು ಎಲ್ಲಾ ಶಾಲೆಗಳು, ಕಾಲೇಜುಗಳಲ್ಲಿ ಭಾಷೆಯ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಆಚರಿಸಲಾಗುತ್ತದೆ.
ಸೆಪ್ಟೆಂಬರ್ 14, 1949 ರಂದು, ಭಾರತೀಯ ಸಂವಿಧಾನ ಸಭೆಯು ಹಿಂದಿಯನ್ನು ಭಾರತದ ರಾಷ್ಟ್ರೀಯ ಭಾಷೆ ಎಂದು ಘೋಷಿಸಿತು.ಈ ಹಿನ್ನೆಲೆಯಲ್ಲಿ ಈ ದಿನವನ್ನು ಹಿಂದಿ ದಿನವನ್ನಾಗಿ ಆಚರಿಸಲಾಗುತ್ತದೆ.
ಹಜಾರಿ ಪ್ರಸಾದ್ ದ್ವಿವೇದಿ, ಕಾಕಾ ಕಾಲೇಲ್ಕರ್, ಮೈಥಿಲಿ ಶರಣ್ ಗುಪ್ತ್ ಮತ್ತು ಸೇಠ್ ಗೋವಿಂದ್ ದಾಸ್ ಸೇರಿದಂತೆ ಬೆಯೋಹರ್ ರಾಜೇಂದ್ರ ಸಿಂಹ ಮತ್ತು ಇತರ ಕೆಲವರ ಪ್ರಯತ್ನಗಳಿಂದಾಗಿ ಹಿಂದಿಯನ್ನು ಎರಡು ಅಧಿಕೃತ ಭಾಷೆಗಳಲ್ಲಿ ಒಂದಾಗಿ ಅಂಗೀಕರಿಸಲಾಯಿತು.
ಕೇಂದ್ರ ಸರ್ಕಾರ ರಾಜ್ಯದಲ್ಲಿ ಕನ್ನಡವನ್ನು ಧಿಕ್ಕರಿಸಿ ಹಿಂದಿ ದಿವಸ ಆಚರಿಸುತ್ತಿರುವುದು, ಅದಕ್ಕೆ ರಾಜ್ಯ ಬಿಜೆಪಿ ಬೆಂಬಲ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮ ಅಧಿಕಾರದ ಕನಸಿನಲ್ಲಾದರೂ ಹಿಂದಿ ದಿವಸ್ ರದ್ದು ಮಾಡುತ್ತೇವೆ ಎಂದು ಸೋನಿಯಾ, ರಾಹುಲ್ ಗಾಂಧಿ ಅವರಿಂದ ಹೇಳಿಕೆ ಕೊಡಿಸುವ ಧಮ್ ಇದೆಯೇ? ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್ಸಿಗರಿಗೆ ಸವಾಲ್ ಹಾಕಿದೆ.
ಇದು ಹಿಂದಿ ಹೇರುವ ಪ್ರಶ್ನೆ ಅಲ್ಲ. ಭಾರತದ ಎಲ್ಲಾ ಭಾಷೆಗಳು ಸಹ ಭಾರತದ ಆತ್ಮ. ಮಾತೃಭಾಷೆಯಲ್ಲೇ ವ್ಯವಹರಿಸಿ, ಮಾತನಾಡಲು ಹೆಮ್ಮೆ ಪಡಿ, ಕೀಳರಿಮೆ ತರುಪ ಪ್ರಯತ್ನ ಬ್ರಿಟೀಷ್ನವರು ಮಾಡಿದ್ರು, ಈಗ ಕಾಂಗ್ರೆಸ್ ಮಾಡ್ತಾ ಇದಾರೆ ಎಂದು ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.
ಇಂದು ಹಿಂದಿ ದಿವಸ್ ಆಚರಿಸುತ್ತಿರುವ ಕೇಂದ್ರ ಸರ್ಕಾರರ ವಿರುದ್ಧ ತರಾಟೆ ತಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಿಂದಿಯ ಹಾಗೆ ಅಧಿಕೃತ ಭಾಷೆಯಾಗಿರುವ ಕನ್ನಡ ಭಾಷಾ ದಿನವನ್ನು ಎಂದು ಆಚರಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.